Basavaraj Horatti; ವಿಧಾನ ಪರಿಷತ್‌ನ ಎಲ್ಲ ಸಮಿತಿಗಳ ಸಭೆ ಸುವರ್ಣ ಸೌಧದಲ್ಲಿ ನಡೆಸಲು ಸೂಚನೆ
ಪ್ರತಿ ಎರಡು ತಿಂಗಳ ಅವಧಿಯಲ್ಲಿ ಒಂದು ಬಾರಿ ಬೆಳಗಾವಿಯಲ್ಲಿ ಸಭೆ: ಹೊರಟ್ಟಿ
Team Udayavani, Jan 15, 2024, 9:19 PM IST
ಬೆಳಗಾವಿ: ಸುವರ್ಣ ವಿಧಾನಸೌಧದ ಸದ್ಬಳಕೆ ಹಾಗೂ ಉತ್ತರ ಕರ್ನಾಟಕದ ಜನರ ಬಹುದಿನಗಳ ನಿರೀಕ್ಷೆ ಹಿನ್ನೆಲೆಯಲ್ಲಿ ವಿಧಾನ ಪರಿಷತ್‌ನ ಅಡಿಯಲ್ಲಿ ಬರುವ ಎಲ್ಲ ಸಮಿತಿಗಳ ಸಭೆಯನ್ನು ಎರಡು ತಿಂಗಳಿಗೊಮ್ಮೆ ಕಡ್ಡಾಯವಾಗಿ ಸುವರ್ಣ ವಿಧಾನಸೌಧದಲ್ಲಿ ನಡೆಸಲು ಸಂಬಂಧಪಟ್ಟ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಸಭಾಪತಿ ಬಸವರಾಜ ಹೊರಟ್ಟಿ ಸೂಚಿಸಿದ್ದಾರೆ.
ಈ ಸಂಬಂಧ ಕರ್ನಾಟಕ ವಿಧಾನ ಪರಿಷತ್ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಅವರು, ಇನ್ನು ಮುಂದೆ ವಿಧಾನ ಪರಿಷತ್‌ನ ಎಲ್ಲ ಸಮಿತಿಗಳು ಪ್ರತಿ ಎರಡು ತಿಂಗಳ ಅವಧಿಯಲ್ಲಿ ಒಂದು ಬಾರಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸಮಿತಿ ಸಭೆ ನಡೆಸಬೇಕು. ಅದಕ್ಕೂ ಪೂರ್ವದಲ್ಲಿ ಕನಿಷ್ಟ ಒಂದು ತಿಂಗಳ ಮೊದಲು ಸಂಬಂಧಿಸಿದ ಅಧ್ಯಕ್ಷರು, ಕಾರ್ಯದರ್ಶಿಗಳಿಗೆ, ಜಿಲ್ಲಾದಿಕಾರಿಗಳಿಗೆ ಹಾಗೂ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಗಮನಕ್ಕೆ ದಿನಾಂಕ ಮತ್ತು ಸಮಯ ತಿಳಿಸಬೇಕು. ಈ ನಿಟ್ಟಿನಲ್ಲಿ ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.
ಬೆಂಗಳೂರಿನಲ್ಲಿ ಕೇಂದ್ರೀಕೃತವಾಗಿರುವ ಹಲವಾರು ಸರ್ಕಾರಿ ಕಚೇರಿಗಳು ಸುವರ್ಣ ವಿಧಾನಸೌಧದಿಂದಲೂ ಕಾರ್ಯ ನಿರ್ವಹಿಸಬೇಕು ಎಂಬುದು ಉತ್ತರ ಕರ್ನಾಟಕ ಜನರ ಭಾವನೆ ಹಾಗೂ ಬೇಡಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕೆಲವು ಸರ್ಕಾರಿ ಕಚೇರಿಗಳನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಗೊಳಿಸುವುದಕ್ಕೆ ಚಾಲನೆ ಕೊಡುವ ಉದ್ದೇಶದಿಂದ ವಿಧಾನ ಪರಿಷತ್‌ನ ಭರವಸೆಗಳ ಸಮಿತಿ ವರದಿಯನ್ನು ಈ ಹಿಂದೆ ಸರ್ಕಾರಕ್ಕೆ ಕೊಡಲಾಗಿತ್ತು. ಅದರ ಅಧ್ಯಕ್ಷ ನಾನೇ ಇದ್ದೆ. ಆದರೆ ಅದರ ಪ್ರಗತಿ ಶೂನ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ಪ್ರಗತಿಯ ದೃಷ್ಟಿಯಿಂದ ಪ್ರತಿ ಎರಡು ತಿಂಗಳಿಗೆ ಒಂದು ಬಾರಿ ಬೆಳಗಾವಿಯಲ್ಲಿ ಕಡ್ಡಾಯವಾಗಿ ಸಭೆ ನಡೆಸುವ ಮೂಲಕ ಉತ್ತರ ಕರ್ನಾಟಕ ಜನರ ನಿರೀಕ್ಷೆಯನ್ನು ಸಾಕಾರಗೊಳಿಸುವುದು ಸೂಕ್ತವಾಗಿರುತ್ತದೆ ಎಂದು ಹೊರಟ್ಟಿ ಅಭಿಪ್ರಾಯಪಟ್ಟಿದ್ಧಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.