ಆ್ಯಪ್‌ನಲ್ಲಿ ನೋಂದಣಿ ಮಾಡದ ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್‌


Team Udayavani, May 21, 2020, 10:55 AM IST

ಆ್ಯಪ್‌ನಲ್ಲಿ ನೋಂದಣಿ ಮಾಡದ ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್‌

ಬೆಳಗಾವಿ: ಕಳೆದ ಎರಡು ತಿಂಗಳಿಂದ ವಿಧಿಸಿರುವ ಲಾಕ್‌ಡೌನ್‌ ವೇಳೆ ಜನರಿಗೆ ಅಗತ್ಯವಾಗಿ ಬೇಕಿರುವ ವೈದ್ಯಕೀಯ ಸೇವೆ ನೀಡದೇ ಬಂದ್‌ ಮಾಡಿರುವ ಹಾಗೂ ರಾಜ್ಯಮಟ್ಟದ ಆ್ಯಪ್‌ನಲ್ಲಿ ದಿನಾಲೂ ಮಾಹಿತಿ ಒದಗಿಸದ ಜಿಲ್ಲೆಯ 464 ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್‌ಗಳಿಗೆ ಆರೋಗ್ಯ ಇಲಾಖೆ ನೋಟಿಸ್‌ ಜಾರಿಗೊಳಿಸಿದ್ದು, ಕಡ್ಡಾಯವಾಗಿ ಎಲ್ಲರೂ ಮಾಹಿತಿ ನೀಡಿ ಕೋವಿಡ್ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸುವಂತೆ ಮನವಿ ಮಾಡಿದೆ.

ಜಿಲ್ಲೆಯಲ್ಲಿರುವ 2300 ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್‌ಗಳಲ್ಲಿ ಸುಮಾರು 1930 ಮಾತ್ರ ದಿನನಿತ್ಯ ಈ ಸರ್ಕಾರದ ಆ್ಯಪ್‌ನಲ್ಲಿ ರೋಗಿಗಳ ಮಾಹಿತಿ ಒದಗಿಸುತ್ತಿವೆ. ಇನ್ನುಳಿದ ಕ್ಲಿನಿಕ್‌ಗಳು ಈ ಆ್ಯಪ್‌ನಲ್ಲಿ ಮಾಹಿತಿ ನೀಡದ್ದಕ್ಕೆ ನೋಟಿಸ್‌ ಕಳುಹಿಸಲಾಗಿದೆ.

ಪ್ರತಿ ಖಾಸಗಿ ಆಸ್ಪತ್ರೆ ನಿಗದಿತ ಅವಧಿಯಲ್ಲಿ ಕಡ್ಡಾಯವಾಗಿ ತೆರೆಯಬೇಕು. ಕಂಟೈನಮೆಂಟ್‌ ಪ್ರದೇಶದ ಆಸ್ಪತ್ರೆಗಳಿಗೆ ಮಾತ್ರ ವಿನಾಯಿತಿ ನೀಡಲಾಗಿತ್ತು. ಆಸ್ಪತ್ರೆಗೆ ಬರುವ ರೋಗಿಗೆ ಜ್ವರ, ಕೆಮ್ಮು, ನೆಗಡಿ ಸೇರಿದಂತೆ ಕೋವಿಡ್ ಸಂಬಂಧಿತ ಲಕ್ಷಣಗಳು ಕಂಡು ಬಂದಿದ್ದರೆ ಕೂಡಲೇ ಇದರ ಮಾಹಿತಿಯನ್ನು ಆ್ಯಪ್‌ನಲ್ಲಿ ಒದಗಿಸಬೇಕು. ರೋಗಿಗಳಿಗೆ ಚಿಕಿತ್ಸೆ ನೀಡಿದ ಪ್ರತಿ ವಿವರವನ್ನೂ ದಾಖಲಿಸುವಂತೆ ನಿರ್ದೇಶನ ನೀಡಲಾಗಿತ್ತು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದವರಿಗೆ ಕೋವಿಡ್ ಗೆ ಹೋಲುವ ಲಕ್ಷಣಗಳಿದ್ದರೆ, ತಕ್ಷಣವೇ ಅವರನ್ನು ಪತ್ತೆ ಹಚ್ಚಿ ನಿಗಾ ಇರಿಸಲು ಇದರಿಂದ ಸಾಧ್ಯವಾಗುತ್ತಿತ್ತು. ಆದರೆ ಕೆಲವರು ಮಾಹಿತಿ ಒದಗಿಸದ್ದಕ್ಕೆ ಹಾಗೂ ನಿಯಮ ಪಾಲಿಸದ್ದಕ್ಕೆ ನೋಟಿಸ್‌ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಜಿಲ್ಲಾ ಆರೋಗ್ಯಾ ಧಿಕಾರಿ ಡಾ. ಶಶಿಕಾಂತ ಮುನ್ಯಾಳ ತಿಳಿಸಿದ್ದಾರೆ. ಇಂಥ ಸಾಂಕ್ರಾಮಿಕ ರೋಗಗಳು ಬಂದಾಗ ವೈದ್ಯರ ಕರ್ತವ್ಯ ಹೆಚ್ಚಿನದ್ದಾಗಿರುತ್ತದೆ. ಈಗಾಗಲೇ ವೈದ್ಯರಿಗೆ ಈ ಬಗ್ಗೆ ಅರಿವು ಇದೆ. ಆದರೂ ಸರ್ಕಾರದ ಕೆಲ ನಿಯಮಗಳನ್ನು ಪಾಲಿಸದವರಿಗೆ ತಿಳಿ ಹೇಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕೋವಿಡ್ ಪಾಸಿಟಿವ್‌ ದೃಢವಾದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರೆ ಅಂಥ ಆಸ್ಪತ್ರೆಗಳನ್ನು ಸೀಲ್‌ ಮಾಡುವುದಿಲ್ಲ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ. ಹೀಗಾಗಿ ವೈದ್ಯರು ಹೆದರಬೇಕಾದ ಅಗತ್ಯವಿಲ್ಲ. ಕೇವಲ 24 ಗಂಟೆಯಲ್ಲಿ ತಮ್ಮ ಆಸ್ಪತ್ರೆಯನ್ನು ಸ್ವಚ್ಛಗೊಳಿಸಿ ಸ್ಯಾನಿಟೈಸ್‌ ಮಾಡಿದರೆ ಮತ್ತೆ ಆಸ್ಪತ್ರೆಯನ್ನು ಆರಂಭಿಸಬಹುದಾಗಿದೆ. ತಪ್ಪು ಗ್ರಹಿಕೆಯಿಂದ ಹೊರ ಬಂದು ಎಲ್ಲರೂ ಆಸ್ಪತ್ರೆಗಳನ್ನು ಆರಂಭಿಸಿ ಸಾರ್ವಜನಿಕರಿಗೆ ವೈದ್ಯಕೀಯ ಸೇವೆ ಒದಗಿಸಬೇಕು ಎಂದು ಡಾ| ಮುನ್ಯಾಳ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.