ವಿದ್ಯಾರ್ಥಿಗಳಿಗೆ ಆನ್‌ಲೈನ್ ಪಾಠ
Team Udayavani, Apr 30, 2020, 3:12 PM IST
ಬಾಗಲಕೋಟೆ: ಕೋವಿಡ್-19ವೈರಸ್ ಹರಡುವಿಕೆ ನಿಯಂತ್ರಿಸುವ ಉದ್ದೇಶದಿಂದ ಸರ್ಕಾರ ಕಾಲೇಜುಗಳಿಗೆ ರಜೆ ನೀಡಿದ್ದು, ಈ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಪಾಠ ಮಾಡಬೇಕು ಎಂಬ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸೂಚನೆಯಂತೆ, ಇಲ್ಲಿನ ವಿದ್ಯಾ ಪ್ರಸಾರಕ ಮಂಡಳದ ಶ್ರೀ ಎಸ್.ಆರ್. ನರಸಾಪುರ ಕಲಾ ಹಾಗೂ ಎಂ.ಬಿ. ಶಿರೂರ ವಾಣಿಜ್ಯ ಮಹಾವಿದ್ಯಾಲಯದ ಪ್ರಾಧ್ಯಾಪಕರು ಬಿಎ ಹಾಗೂ ಬಿಕಾಂ ವಿದ್ಯಾರ್ಥಿಗಳಿಗೆ ವಿವಿಧ ಸಾಮಾಜಿಕ ಜಾಲತಾಣಗಳ ಮೂಲಕ ಪಾಠ ನಡೆಸಿದ್ದಾರೆ.
ಪ್ರಾಧ್ಯಾಪಕರ ಜತೆಗೆ ಅರೆಕಾಲಿಕ ಉಪನ್ಯಾಸಕರೂ ಕೈಜೋಡಿಸಿ, ವಿವಿಧ ವಿಷಯಗಳ ಮೇಲೆ ವಾಟ್ಸ್ ಆ್ಯಪ್, ಯುಟ್ಯೂಬ್ ಮೂಲಕ ಬಾಕಿ ಉಳಿದಿರುವ ಪಠ್ಯ ವಿಷಯಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಳ್ಳುತ್ತಿದ್ದಾರೆ. ಬಿ.ಕಾಂ. 6 ನೇ ಸೆಮಿಸ್ಟರ್‌ನ ಭಾರತೀಯ ಹಣಕಾಸು ಸೇವೆಗಳು ವಿಷಯವನ್ನು ಲಾರ್ಕ್ ವಿಡಿಯೋ ಕಾನ್ಫೆರನ್ಸಿಂಗ್ ಆಪ್ ಮೂಲಕ ಪಾಠ ಮಾಡಿ ಗೂಗಲ್ ಫಾರ್ಮ್ ಸಹಾಯದಿಂದ ಕಿರು ಪರೀಕ್ಷೆ ನಡೆಸಲಾಗಿದೆ ಎಂದರು.
ವಿದ್ಯಾರ್ಥಿಗಳು ಈ ಆನ್‌ಲೈನ್ ಪಾಠಗಳ ಪ್ರಯೋಜನ ಪಡೆದುಕೊಂಡು ಬರುವ ಪರೀಕ್ಷೆಗಳನ್ನು ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಎದುರಿಸಬೇಕು ಎಂದು ಪ್ರಾಚಾರ್ಯ ಡಾ| ಜಿ. ಬಿ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.