ಕೋವಿಡ್-19 ಪರೀಕ್ಷೆ ಪ್ರಯೋಗಾಲಯ ಉದ್ಘಾಟನೆ
Team Udayavani, Apr 24, 2020, 1:44 PM IST
ಬೆಳಗಾವಿ: ಕೋವಿಡ್ 19 ವೈರಸ್‌ಗೆ ಸಂಬಂಧಪಟ್ಟಂತೆ ಬೆಳಗಾವಿ ಜಿಲ್ಲೆಗೆ ಹೊಸದಾಗಿ ಮಂಜೂರಾಗಿರುವ ಗಂಟಲು ಮಾದರಿ ಪರೀಕ್ಷೆ ಮಾಡುವ ಪ್ರಯೋಗಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಗುರುವಾರ ಉದ್ಘಾಟಿಸಿದರು.
ಇಲ್ಲಿನ ನೆಹರೂ ನಗರದಲ್ಲಿ ಕೆ.ಎಲ್.ಇ. ಆಸ್ಪತ್ರೆ ಎದುರಿಗಿರುವ ಭಾರತ ಸರ್ಕಾರದ ಆರೋಗ್ಯ ಸಂಶೋಧನಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಐಸಿಎಂಆರ್ -ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಕೋವಿಡ್-19 ಪರೀಕ್ಷಾ ಪ್ರಯೋಗಾಲಯ ಆರಂಭಿಸಲಾಗಿದೆ.
ಕೋವಿಡ್ 19 ವೈರಸ್‌ಗೆ ಸಂಬಂಧಪಟ್ಟ ಈ ಪ್ರಯೋಗಾಲಯ ಸದ್ಯಕ್ಕೆ ಪ್ರತಿದಿನ 90 ಮಾದರಿ ಪರೀಕ್ಷಿಸುವ ಸಾಮರ್ಥ್ಯ ಹೊಂದಿದೆ. ಇದರಿಂದ ಬಹಳ ಬೇಗ ಫಲಿತಾಂಶ ಬಂದು ಸೂಕ್ತ ಚಿಕಿತ್ಸೆ ಕೊಡಲು ಅನುಕೂಲವಾಗಲಿದೆ ಎಂದು ಸಚಿವರು ಹೇಳಿದರು.
ಈ ವೇಳೆ ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ ಅಂಗಡಿ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ವಿಧಾನ ಪರಿಷತ್ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ರಾಜ್ಯಸಭಾ ಸದಸ್ಯ ಡಾ| ಪ್ರಭಾಕರ ಕೋರೆ, ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ಸತೀಶ ಜಾರಕಿಹೊಳಿ, ದುರ್ಯೋಧನ ಐಹೊಳೆ, ಮಹಾದೇವಪ್ಪ ಯಾದವಾಡ, ಅನಿಲ ಬೆನಕೆ, ಅಭಯ ಪಾಟೀಲ, ಐಸಿಎಂಆರ್-ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆ ನಿರ್ದೇಶಕ ಡಾ| ದೇವಪ್ರಸಾದ ಚಟ್ಟೋಪಾಧ್ಯಾಯ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Belagavi: ಎಸ್‌ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.