ಕೋವಿಡ್ ಚಿಕಿತ್ಸೆಗೆ ಭಯ ಬೇಡ: ಮಹಾಂತೇಶ
20 ಆಕ್ಸಿಜನ್ ಬೆಡ್ ಕೋವಿಡ್ ಸೆಂಟರ್ ಉದ್ಘಾಟನೆ! ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಕೋವಿಡ್-19 ಹಾವಳಿ
Team Udayavani, May 20, 2021, 5:33 PM IST
ಚನ್ನಮ್ಮ ಕಿತ್ತೂರ: ಗ್ರಾಮೀಣ ಮಟ್ಟದಲ್ಲಿ ಕೊರೊನಾ ಹೆಚ್ಚಾಗಿ ಕಂಡು ಬರುತ್ತಿದ್ದು ಜನರು ಯಾವುದೇ ಭಯಪಡದೆ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ಆಸ್ಪತ್ರೆಗಳಿಗೆ ಅಗತ್ಯ ಸೌಲಭ್ಯ ಒದಗಿಸಲಾಗಿದೆ ಎಂದು ಶಾಸಕ ಮಹಾಂತೇಶ ದೊಡಗೌಡರ ಹೇಳಿದರು.
ಇಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಸೆಂಟರ್ ಉದ್ಘಾಟಿಸಿ ಮಾತನಾಡಿದ ಅವರು, ಜನರು ಭಯಪಡದೆ ಚಿಕಿತ್ಸೆ ಪಡೆದುಕೊಳ್ಳಬೇಕು. ಈ ಆಸ್ಪತ್ರೆಯನ್ನು ಕೊರೊನಾ ರೋಗಿಗಳಿಗೆ ಮೀಸಲಿರಿಸಿದ್ದು 20 ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಲಾಗಿದೆ. ಶಕುಂತಲಾ ಗಡಗಿ ಆಸ್ಪತ್ರೆಯಲ್ಲಿಯೂ ಚಿಕಿತ್ಸೆ ನೀಡಲಾಗುತ್ತಿದೆ.
ನೇಸರಗಿ ಭಾಗಕ್ಕೆ ನಾಗನೂರ ಆರೋಗ್ಯ ಕೇಂದ್ರದಲ್ಲಿ 20 ಆಕ್ಸಿಜನ್ ಬೆಡ್ ವ್ಯವಸ್ಥೆ ಕಲ್ಪಿಸಲಾಗಿದೆ. ಅಗತ್ಯ ಆಕ್ಸಿಜನ್, ರೆಮ್ ಡೆಸಿವಿಯರ್ ಸೇರಿದಂತೆ ಎಲ್ಲ ಔಷಧೋಪಚಾರ ಒದಗಿಸಲಾಗಿದೆ. ಯಾರೂ ಹೆದರದೆ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು. ಗ್ರಾಮೀಣ ಪ್ರದೇಶದಲ್ಲಿಯೂ ಕೊರೊನಾ ಚಿಕಿತ್ಸೆ ಕೇಂದ್ರಗಳನ್ನು ತೆರೆಯುತ್ತಿದ್ದೇವೆ ಹಾಗೂ ಪ್ರತಿ ಗ್ರಾಮಗಳ ಜನತೆಯನ್ನು ತಪಾಸಣೆ ಮಾಡಿಸಿ ಬೇಕಾದ ಔಷಧಿ ಗಳನ್ನು ಒದಗಿಸುತ್ತಿದ್ದೇವೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಮಾತನಾಡಿ, ಕೊರೊನಾ ಪರೀಕ್ಷೆಗೆ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ಆಕ್ಸಿಮೀಟರ್, ಥರ್ಮಲ್ ಸ್ಕಾನರ್ ಪೂರೈಸುತ್ತೇವೆ. ಹೋಮ ಐಸೊಲೇಷನ್‌ನಲ್ಲಿದ್ದವರು ಹುಲಿಕಟ್ಟಿಯಲ್ಲಿರುವ ಮೊರಾರ್ಜಿ ವಸತಿ ಶಾಲೆಯ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆದುಕೊಳ್ಳಬೇಕು. ಸೋಂಕಿತರನ್ನು ಅತ್ಯಂತ ಕಾಳಜಿಪೂರ್ವಕವಾಗಿ ನೋಡಿಕೊಳ್ಳಬೇಕು. ಸರಿಯಾದ ಸಮಯಕ್ಕೆ ಔಷಧೋಪಚಾರ, ಬಿಸಿ ನೀರು, ಯೋಗ ಶಿಕ್ಷರಿಂದ ಯೋಗ ಮಾಡಿಸಬೇಕು. ಅವರಿಗೆ ಧೈರ್ಯವನ್ನು ತುಂಬುವ ವ್ಯವಸೆಯನ್ನು ಕಲ್ಪಿಸಬೇಕೆಂದು ಅಧಿ ಕಾರಿಗಳಿಗೆ ಸೂಚಿಸಿದರು.
ಉಪವಿಭಾಗಾಧಿಕಾರಿ ಶಶಿಧರ ಬಗಲಿ, ತಹಶೀಲ್ದಾರ್ ಸೋಮಲಿಂಗಪ್ಪ ಹಾಲಗಿ, ಪ್ರೊಬೇಷನರಿ ತಹಶೀಲ್ದಾರ್ ಮಹೇಶ ಪತ್ರಿ, ತಾಲೂಕು ವೈದ್ಯಾಧಿಕಾರಿಗಳಾದ ಡಾ| ಶಿವಾನಂದ ಮಾಸ್ತಿಹೊಳಿ, ಡಾ| ಎಸ್ ಎಸ್ ಸಿದ್ದನ್ನವರ, ಬಿಜಿಪಿ ಮಂಡಳ ಅಧ್ಯಕ್ಷ ಡಾ. ಬಸವರಾಜ ಪರವಣ್ಣವರ, ಬಿಜಿಪಿ ಪ್ರಧಾನ ಕಾರ್ಯದರ್ಶಿ ಸಂದೀಪ ದೇಶಪಾಂಡೆ, ಪಪಂ ಅಧ್ಯಕ್ಷ ಹನುಮಂತ ಲಂಗೋಟಿ, ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ ವಾಳದ, ಸದಸ್ಯ ಕಿರಣ ಪಾಟೀಲ, ಇನ್ನೂ ಹಲವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.