ಟ್ಯಾಂಕ್ ನಿರ್ಮಾಣಕ್ಕೆ ವಿರೋಧ
•ಬೇರೆ ಜಾಗದಲ್ಲಿ ನಿರ್ಮಿಸಿ •ಸ್ಪಂದಿಸದಿದ್ದರೆ ಉಗ್ರ ಹೋರಾಟ
Team Udayavani, Jul 12, 2019, 2:18 PM IST
ಮೂಡಲಗಿ: ಸ್ಥಳೀಯ ಕೆಇಬಿ ಪ್ಲಾಟ್ ಹನುಮಾನ ದೇವರ ಗುಡಿಯ ಆವರಣದಲ್ಲಿ ನೀರಿನ ಟ್ಯಾಂಕ್ ನಿರ್ಮಾಣ ಮಾಡಬಾರದು ಎಂದು ಆಗ್ರಹಿಸಿ 17ನೇ ವಾರ್ಡಿನ ಕೆಇಬಿ ಪ್ಲಾಟ್ ನಿವಾಸಿಗಳು ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.
ಮೂಡಲಗಿ; ಸ್ಥಳೀಯ ಕೆಇಬಿ ಪ್ಲಾಟ್ ಹನುಮ ದೇವರ ಗುಡಿಯ ಆವರಣದಲ್ಲಿ ಹೊಸದಾಗಿ ಓವರ್ ಹೆಡ್ ನೀರಿನ ಟ್ಯಾಂಕ್ ನಿರ್ಮಾಣ ಮಾಡಬಾರದು ಎಂದು ಆಗ್ರಹಿಸಿ 17ನೇ ವಾರ್ಡಿನ ಕೆಇಬಿ ಪ್ಲಾಟ್ ನಿವಾಸಿಗಳು ಪುರಸಭೆ ಮುಖ್ಯಾಧಿಕಾರಿಗೆ ಗುರುವಾರ ಮನವಿ ಸಲ್ಲಿಸಿದರು.
ಇಲ್ಲಿಯ ಹನುಮಾನ ದೇವರ ಗುಡಿಯ ಆವರಣ ಮತ್ತು ಹಳೆಯ ಓವರ್ ಹೆಡ್ ನೀರಿನ ಟ್ಯಾಂಕ್ ಮಧ್ಯದಲ್ಲಿ ಸ್ವಲ್ಪ ಖಾಲಿ ಜಾಗವಿದ್ದು, ಈ ಜಾಗ ಕೆಇಬಿ ಪ್ಲಾಟ್ ಜನರಿಗೆ ಮತ್ತು ಸುತ್ತಮುತ್ತಲಿನ ತೋಟಗಳ ಸಾರ್ವಜನಿಕರಿಗೆ, ಬಡವರಿಗೆ ಚಿಕ್ಕ ಪುಟ್ಟ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಕೂಲವಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಕೆಇಬಿ ಪ್ಲಾಟ್ ಸಾರ್ವಜನಿಕರು ಈ ಖಾಲಿ ಜಾಗದಲ್ಲಿ ಈಗಾಗಲೇ ಚಿಕ್ಕ ಸಮುದಾಯ ಭವನ ನಿರ್ಮಾಣ ಮಾಡಲು ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ. ಆದರೆ ಈ ಜಾಗದಲ್ಲೇ ಪುರಸಭೆ ಓವರ್ ಹೆಡ್ ನೀರಿನ ಟ್ಯಾಂಕ್ ನಿರ್ಮಿಸಲು ಮುಂದಾಗಿದೆ. ಒಂದು ವೇಳೆ ನಮ್ಮ ಮನವಿಗೆ ಸ್ಪಂದಿಸದೇ ಹೋದರೆ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತಿದೆ ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.
ಪುರಸಭೆ ಈಗ ನಿರ್ಮಾಣ ಮಾಡಬೇಕೆಂದಿರುವ ನಗರೋತ್ಥಾನದ ಯೋಜನೆಯ ಅಡಿಯಲ್ಲಿನ 5 ಲಕ್ಷ ಲೀಟರಿನ ನೀರು ಸಾಮರ್ಥ್ಯವುಳ್ಳ ಓವರ ಹೆಡ್ ನೀರಿನ ಟ್ಯಾಂಕನ್ನು ಪುರಸಭೆ ವ್ಯಾಪ್ತಿಯಲ್ಲಿರುವ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಕಾಯ್ದಿರಿಸಿದ ಜಾಗದಲ್ಲಿ ನಿರ್ಮಾಣ ಮಾಡಲು ಇಲ್ಲಿನ ನಿವಾಸಿಗಳದ್ದು ಯಾವುದೇ ರೀತಿ ತಕರಾರು ಇಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ವೇಳೆ ರಮೇಶ ಪಾಟೀಲ, ಸುಭಾಸ ಬನ್ನೂರ, ಶ್ರೀಶೈಲ ಜೈನಾಪುರ, ಬಸವರಾಜ ಹುಚ್ಚನವರ, ಯಲ್ಲಪ್ಪ ಸಣ್ಣಕ್ಕಿ, ಈರಪ್ಪ ಹುಣಶ್ಯಾಳ, ಲಕ್ಷ್ಮಣ ಅರಮನಿ, ಹಣಮಂತ ಹೊಸಮನಿ, ಮಾರುತಿ ನಾವಿ, ಲಾಲಸಾಬ ಮಿರ್ಜಿ, ಈರಪ್ಪ ಮಾಲಗಾರ, ಆನಂದ ಗಸ್ತಿ, ದುಂಡಪ್ಪ ಮಾನಕಪ್ಪಗೋಳ, ಯಮನಪ್ಪ ಹರಿಜನ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
Rohit Sharma: ತನುಷ್ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ
Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.