ವಿದೇಶಗಳಿಗೆ ಹೋಲಿಸಿದರೆ ನಮ್ಮ ಗ್ರಾಮೀಣ ಪ್ರದೇಶಗಳು ಸೊರಗಿವೆ: ಈಶ್ವರಪ್ಪ
Team Udayavani, Sep 9, 2019, 11:31 AM IST
ಬೆಳಗಾವಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ರಾಜ್ಯದ ಎಲ್ಲ ಜಿಲ್ಲಾ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಸ್ಥಾಯಿ ಸಮಿತಿ ಅದ್ಯಕ್ಷರ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಮಾಲೋಚನೆ. ಚಿಂಥನ ಮಂಥನ ಸಭೆಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರಿಂದ ಚಾಲನೆ ದೊರೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಸರಕಾರ ಸಂಕಲ್ಪ ಮಾಡಿದೆ. ವಿದೇಶಗಳಿಗೆ ಹೋಲಿಸಿದರೆ ನಮ್ಮ ಗ್ರಾಮೀಣ ಪ್ರದೇಶಗಳು ಸೊರಗಿವೆ. ಸಂಸ್ಕೃತಿಯ ವಿಷಯದಲ್ಲಿ ನಾವು ಮುಂದೆ ಇದ್ದೇವೆ. ಆದರೆ ಅಭಿವೃದ್ಧಿ ವಿಷಯದಲ್ಲಿ ಇನ್ನೂ ಸುಧಾರಣೆ ಆಗಬೇಕಿದೆ ಎಂದರು. ನೆರೆ ಹಾವಳಿಯಿಂದ ಗ್ರಾಮೀಣ ಪ್ರದೇಶಗಳ ರಸ್ತೆಗಳು ಸಂಪೂರ್ಣ ಹಾಳಾಗಿವೆ. ಕುಡಿಯುವ ನೀರಿನ ವ್ಯವಸ್ಥೆ ಹದಗೆಟ್ಟಿದೆ. ಈ ಎಲ್ಲವನ್ನೂ ಪುನರ್ ನಿರ್ಮಾಣ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.
ಉತ್ತರ ಕರ್ನಾಟಕದ ಅಭಿವೃದ್ಧಿ ವಿಷಯದಲ್ಲಿ ಸರಕಾರದ ಬಗ್ಗೆ ಇಲ್ಲಿನ ಜನರಲ್ಲಿ ತಾತ್ಸಾರ ಭಾವನೆ ಇದೆ. ಈ ಹಿನ್ನೆಲೆಯಲ್ಲಿ ಉ.ಕ ಭಾಗದ ಸಮಗ್ರ ಅಭಿವೃದ್ಧಿಗೆ ಅನುಕೂಲವಾಗುವಂತೆ ಸುವರ್ಣ ವಿಧಾನಸೌಧದಲ್ಲಿಉ.ಕ ವಿಶೇಷ ಕಚೇರಿಯನ್ನು ಅರಂಭಿಸಲಾಗುವುದು ಎಂದು ಸಚಿವ ಕೆ ಎಸ್ ಈಶ್ವರಪ್ಪ ಪ್ರಕಟಿಸಿದರು.
ಈ ಕಚೇರಿಯ ಆರಂಭಕ್ಕೆ ಎಲ್ಲ ರೀತಿಯ ಸಹಕಾರ ಹಾಗೂ ಸೌಲಭ್ಯಗಳನ್ನು ನೀಡಲಾಗುವದು. ಇದಲ್ಲದೆ ಈ ಭಾಗದ ಅಭಿವೃದ್ಧಿ ಗೆ ಅನುಕೂಲವಾಗುವಂತೆ ಇಲ್ಲಿಯೇ ನಿರ್ಣಯಗಳನ್ನು ತೆಗೆದುಕೊಳ್ಳುವ ಅಧಿಕಾರ ನೀಡಲಾಗುವದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
Belagavi: ಎಂಇಎಸ್ ಕಾರ್ಯಕರ್ತರ ಪುಂಡಾಟ
Rajyotsava Celebration: ಬೆಳಗಾವಿಯಲ್ಲಿ ವೈಭವದ ಕರ್ನಾಟಕ ರಾಜ್ಯೋತ್ಸವ
Belagavi; ಎಂಇಎಸ್ ನಿಷೇಧಕ್ಕಿಂತ ನಿರ್ಲಕ್ಷ್ಯ ಮಾಡುವುದು ಉತ್ತಮ: ಸತೀಶ್ ಜಾರಕಿಹೊಳಿ
ಬೆಳಗಾವಿ: ಆರ್ಥಿಕ ಮುಗ್ಗಟ್ಟು ಮಧ್ಯೆಯೇ ದುಂದುವೆಚ್ಚ: ಪಾಲಿಕೆಯಿಂದ ಲಕ್ಷ, ಲಕ್ಷ ವೆಚ್ಚ!
MUST WATCH
ಹೊಸ ಸೇರ್ಪಡೆ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.