ವಾರದಲ್ಲಿ ಆಕ್ಸಿಜನ್ ಘಟಕ ಕಾಮಗಾರಿ ಪೂರ್ಣ: ರಮೇಶ್
Team Udayavani, Jun 25, 2021, 8:26 PM IST
ಗೋಕಾಕ: ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ 1.5 ಕೋಟಿ ವೆಚ್ಚದಲ್ಲಿ ವಿಎಸ್‌ಎ ತಂತ್ರಜ್ಞಾನವುಳ್ಳ 500 ಎಲ್.ಪಿ.ಎಂ ಸಾಮರ್ಥ್ಯದ ಆನ್ ಸೈಟ್ ಆಕ್ಸಿಜನ್ ಜನರೇಟರ್ ಯುನಿಟ್ ನಿರ್ಮಾಣ ಕಾಮಗಾರಿಯನ್ನು ಗುರುವಾರ ಶಾಸಕ ರಮೇಶ ಜಾರಕಿಹೊಳಿ ವೀಕ್ಷಿಸಿದರು.
ನಗರದ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಆಕ್ಸಿಜನ್ ಉತ್ಪಾದನಾ ಘಟಕ ಕಾಮಗಾರಿ ವೀಕ್ಷಿಸಿ ಮಾತನಾಡಿದ ಶಾಸಕ ರಮೇಶ, ಪ್ರಾಯೋಗಿಕವಾಗಿ ತಾಲೂಕಾ ಆಸ್ಪತ್ರೆಯಲ್ಲಿ ಪಿಎಸ್‌ಎ ತಂತ್ರಜ್ಞಾನವುಳ್ಳ 500 ಎಲ್.ಪಿ.ಎಂ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನಾ ಘಟಕ ಅಳವಡಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಆ ನಿಟ್ಟಿನಲ್ಲಿ ನಗರದ ಸರಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕದ ನಿರ್ಮಾಣ ಕಾಮಗಾರಿ ಪ್ರಾರಂಭವಾಗಿದ್ದು ಬರುವ ಒಂದು ವಾರದಲ್ಲಿ ಈ ಕಾಮಗಾರಿ ಪೂರ್ಣಗೊಳ್ಳಲಿದೆ. ಕೊರೊನಾ ಮೂರನೇ ಅಲೆ ಎದುರಿಸಲು ಈ ಆಕ್ಸಿಜನ್ ಪ್ಲಾಂಟ್ ತುಂಬಾ ಉಪಯುಕ್ತವಾಗಲಿದೆ ಎಂದು ಹೇಳಿದರು.
ಜಿಪಂ ಮಾಜಿ ಸದಸ್ಯರಾದ ಟಿ.ಆರ್.ಕಾಗಲ್, ಮಡೆಪ್ಪ ತೋಳಿನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮಣ್ಣವರ ತಾಲೂಕು ಆರೋಗ್ಯಾ ಧಿಕಾರಿಡಾ. ಮುತ್ತಣ್ಣ ಕೊಪ್ಪದ, ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ, ಡಾ.ಕೋಣಿ, ಡಾ. ಬಾಗಲಕೋಟೆ, ಡಾ.ಅಶೋಕ ಜಿರಗ್ಯಾಳ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Cooking Oil: ಅಡುಗೆ ಎಣ್ಣೆ ಆಮದು ಸವಾಲು
National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.