Panchamasali 2 ಎ ಮೀಸಲಾತಿ; ಸಂಪೂರ್ಣ ಬೆಂಬಲ ಕೊಟ್ಟವ ನಾನು: ಶೆಟ್ಟರ್
ಕೆಳಹಂತಕ್ಕೆ ಹೋಗಿ ಟೀಕೆ ಮಾಡುವ ವ್ಯಕ್ತಿ ನಾನಲ್ಲ
Team Udayavani, Apr 1, 2024, 5:15 PM IST
ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡುವ ವಿಚಾರದಲ್ಲಿ ಸಂಪೂರ್ಣ ಬೆಂಬಲ ಕೊಟ್ಟ ವ್ಯಕ್ತಿ ನಾನು. ಹೀಗಿರುವಾಗ ನಾನು ಇದಕ್ಕೆ ವಿರೋಧ ಮಾಡುವ ಪ್ರಶ್ನೆಯೇ ಬರುವುದಿಲ್ಲ. ಚುನಾವಣೆಯ ವೇಳೆ ಇಂತಹ ಆಪಪ್ರಚಾರಗಳು ನಡೆಯುತ್ತಲೇ ಇರುತ್ತವೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ತಮ್ಮ ವಿರೋಧಿಗಳಿಗೆ ತಿರುಗೇಟು ನೀಡಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಎಲ್ಲರೂ ಇದಕ್ಕೆ ಬೆಂಬಲ ಸೂಚಿಸಿದ್ದೆವು. ಯಾವತ್ತೂ ನಾನು ಅದಕ್ಕೆ ವಿರೋಧ ವ್ಯಕ್ತಪಡಿಸಿಲ್ಲ ಎಂದು ಸ್ಪಷ್ಟನೆ ನೀಡಿದರು.
ಲೋಕಸಭೆ ಚುನಾವಣೆ ರಾಷ್ಟ್ರೀಯ ವಿಚಾರಧಾರೆಗಳ ಮೇಲೆ ನಡೆಯುವ ಚುನಾವಣೆ. ಇಲ್ಲಿ ರಾಷ್ಟ್ರಮಟ್ಟದ ವಿಚಾರಗಳು ಚರ್ಚೆಯಾಗಬೇಕು. ಆದರೆ ಕಾಂಗ್ರೆಸ್‌ನವರಿಗೆ ಯಾವುದೇ ವಿಷಯ ಇಲ್ಲ. ಹೀಗಾಗಿ ಅವರು ಸಣ್ಣಪುಟ್ಟ ವಿಷಯಗಳ ಬಗ್ಗೆ ಚರ್ಚೆ ಮಾಡುತ್ತಾರೆ. ನಿರಾಧಾರ ಆರೋಪ ಮಾಡುತ್ತಾರೆ. ಅವರ ಟೀಕೆ ಟಿಪ್ಪಣಿಗಳಿಗೆ ಪ್ರತಿಕ್ರಿಯೆ ಕೊಡುವದಿಲ್ಲ. ಅವರ ಹಾಗೆ ಕೆಳಹಂತಕ್ಕೆ ಹೋಗಿ ಟೀಕೆ ಮಾಡುವ ವ್ಯಕ್ತಿ ನಾನಲ್ಲ ಎಂದು ತಿರುಗೇಟು ನೀಡಿದರು.
ಪಕ್ಷದ ವರಿಷ್ಠರ ನಿರ್ಧಾರದಂತೆ ನಾನು ಬೆಳಗಾವಿಯಿಂದ ಸ್ಪರ್ಧೆ ಮಾಡಿದ್ದೇನೆ. ಜಿಲ್ಲೆಯಲ್ಲಿ ಎಲ್ಲರ ಸಹಕಾರ ಸಿಗುತ್ತಿದೆ. ಯಾರಲ್ಲೂ ಅಸಮಾಧಾನ ಇಲ್ಲ. ಜಾರಕಿಹೊಳಿ ಸಹೋದರರು ಪ್ರಚಾರಕ್ಕೆ ಬಂದಿದ್ದಾರೆ. ಗೋಕಾಕ, ಅರಭಾವಿ, ಸವದತ್ತಿ ಮೊದಲಾದ ಕಡೆಗಳಲ್ಲಿ ನಿರೀಕ್ಷೆ ಮೀರಿ ಬೆಂಬಲ ವ್ಯಕ್ತವಾಗಿದೆ. ಎಲ್ಲರೂ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಹರಸಿದ್ದಾರೆ ಎಂದು ಶೆಟ್ಟರ್ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆಯ ಬಗ್ಗೆ ದಾಖಲೆ ಕೊಡುತ್ತಿದ್ದೇವೆ. ನಮ್ಮ ಶಾಸಕರು, ಸಂಸದರು ಏನು ಕೆಲಸ ಮಾಡಿದ್ದಾರೆ ಎಂಬುದು ಜನರಿಗೆ ಗೊತ್ತಿದೆ. ವಿನಾಕಾರಣ ರಾಜಕೀಯ ಮಾಡುವದು ಸರಿಯಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಸ್‌ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!
Belagavi: ಆಟೋ ಚಾಲಕನ ಮೇಲೆ ಅಪರಿಚಿತ ದುಷ್ಕರ್ಮಿಗಳಿಂದ ಹಲ್ಲೆ
Belagavi: ಅಕ್ರಮ ಆಸ್ತಿ ಸಂಪಾದನೆ ಆರೋಪ… ಬೆಳಗಾವಿ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.