ಬಿಜೆಪಿಗೆ ಪಂಚರಾಜ್ಯ ಚುನಾವಣೆ ಆತಂಕ
ಅಲ್ಪಸಂಖ್ಯಾಂತರು ಬಿಜೆಪಿ ಕುತಂತ್ರಕ್ಕೆ ಬಲಿಯಾಗಬೇಡಿ ಎಂದರು.
Team Udayavani, Jan 31, 2022, 6:12 PM IST
ಗೋಕಾಕ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಹೊಡೆತ ಬೀಳುತ್ತದೆ ಎಂಬ ಕಾರಣದಿಂದ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆಯಿತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಆರೋಪಿಸಿದರು.
ನಗರದ ಹಿಲ್ ಗಾರ್ಡನ್‌ದಲ್ಲಿ ಮಹಾತ್ಮ ಗಾಂಧೀಜಿ ಪುಣ್ಯಸ್ಮರಣೆ ನಿಮಿತ್ತ ಹಮ್ಮಿಕೊಂಡಿದ್ದ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಉತ್ತರಪ್ರದೇಶದಲ್ಲಿ ಬಿಜೆಪಿ ಜನಪ್ರಿಯತೆ ಕುಸಿದಿರುವ ಬಗ್ಗೆ ತಿಳಿದು ಕಾಯ್ದೆಗಳನ್ನು ರದ್ದುಪಡಿಸಿದರೂ ಮತ್ತೆ ಕುತಂತ್ರದಿಂದ ಕಾಯ್ದೆ ಜಾರಿ ಮಾಡಬಹುದು.
ಹೀಗಾಗಿ ಎಚ್ಚರದಿಂದ ಇರಬೇಕು. ಪ್ರಸ್ತುತ ಸಾಮಾಜಿಕ ಜಾಲತಾಣ, ವಿದ್ಯುನ್ಮಾನ ಮಾಧ್ಯಮ, ಪತ್ರಿಕೆ ಸೂಕ್ಷ್ಮತೆಯಿಂದ ಗಮನಿಸಬೇಕು. ನಮ್ಮ ಹೋರಾಟಗಳು ಇತರರಿಗೆ ಪ್ರೇರಣೆಯಾಗಬೇಕು ಎಂದರು.
ಮುಸ್ಲಿಂ ಬಾಂಧವರನ್ನು ಕೆರಳಿಸುವ ಕೆಲಸ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದ್ದು, ಅದಕ್ಕೆ ಸ್ಪಂದಿಸದೇ ಪರಿಶೀಲಿಸಬೇಕು. ಸಮಾಜದಲ್ಲಿ ಶಾಂತಿ ಕದಡುವ ಕೆಲಸಕ್ಕೆ ಸಮಯ ವ್ಯರ್ಥ ಮಾಡದೇ ಆರ್ಥಿಕ ಪ್ರಗತಿ ಸಾಧಿಸಲು ಮುಂದಾಗಬೇಕು. ಹಿಂದುಳಿದವರು, ಅಲ್ಪಸಂಖ್ಯಾಂತರು ಬಿಜೆಪಿ ಕುತಂತ್ರಕ್ಕೆ ಬಲಿಯಾಗಬೇಡಿ ಎಂದರು.
ಕಾಂಗ್ರೆಸ್ ಮುಖಂಡ ಅಶೋಕ ಪೂಜಾರಿ ಮಾತನಾಡಿ, ಧರ್ಮ ಇದ್ದರೆ ಮಾತ್ರ ದೇಶ ಎನ್ನುವ ವಾತಾವರಣ ಕಾಣುತ್ತಿರುವುದು ಅಪಾಯಕಾರಿ ಬೆಳವಣಿಗೆ. ಸಮಾಜದ ಕಟ್ಟಕಡೆಯ ವ್ಯಕ್ತಿ ಆರ್ಥಿಕ ಸಬಲತೆ ಕಾಣಬೇಕೆಂಬ ಉದ್ದೇಶ ಕಾಂಗ್ರೆಸ್ ಹೊಂದಿದ್ದು, ಇದಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಅನೇಕ ನಾಯಕರು ಪಣ ತೊಟ್ಟಿದ್ದಾರೆ ಎಂದರು.
ಈ ವೇಳೆ ಮಾಜಿ ಸಂಸದ ಪ್ರಕಾಶ ಹುಕ್ಕೇರಿ, ಯುವ ನಾಯಕ ರಾಹುಲ್ ಜಾರಕಿಹೊಳಿ, ಕಲ್ಪನಾ ಜೋಶಿ, ನಜೀರ್ ಶೇಖ್, ತನ್ವೀರ್ ಶೇಮಶೆರ್, ಅಮೀದ್ ನಾಡವಾಲೆ, ಇಮರಾನ್ ತಫಕಿರ್, ಮುಂಜುರ್ ಶಮ್ಮಶೇರ್, ಶಬ್ಬೀರ್ ಮುಜಾವರ್, ಮೋಸಿನ್ ಖೋಜಾ, ತೌಫೀಕ್ ಮುಲ್ಲಾ, ತಬಸುಮ್ ಮುಲ್ಲಾ, ನಶೀಮಾ ಬುಡ್ಡನ್ನವರ್, ಎಚ್.ಡಿ. ಮುಲ್ಲಾ, ಇಬ್ರಾನ್ ಶೇಖ್, ತಾಹೀರ್ ಫೀರ್ಜಾದೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.