16, 17ರಂದು “ಪರ್ವ’ ಮಹಾ ರಂಗಪ್ರಯೋಗ
Team Udayavani, Apr 1, 2022, 1:29 PM IST
ಬೆಳಗಾವಿ: ಪರ್ವ ಮಹಾ ರಂಗಪ್ರಯೋಗ ನಾಟಕ ಪ್ರದರ್ಶನ ನಗರದ ಕೋನವಾಳಗಲ್ಲಿಯ ಲೋಕಮಾನ್ಯ ರಂಗಮಂದಿರದಲ್ಲಿ ಏ. 16 ಹಾಗೂ 17ರಂದು ಪ್ರದರ್ಶನಗೊಳ್ಳಲಿದೆ ಎಂದು ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾ ರಂಗಪ್ರಯೋಗ ”ಪರ್ವ” ನಾಟಕ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ, ರಾಷ್ಟ್ರದ ಐದು ಪ್ರಮುಖ ಸ್ಥಳಗಳಲ್ಲಿ ಪ್ರದರ್ಶನಗೊಳ್ಳಬೇಕು ಎಂಬ ಯೋಜನೆಯನ್ನು ರಂಗಾಯಣ ರೂಪಿಸಿದೆ. ಸುಮಾರು ಎಂಟು ಗಂಟೆ ಸುದೀರ್ಘ ಅವಧಿಯ ಪರ್ವ ಮಹಾ ರಂಗಪ್ರಯೋಗ ನಾಟಕ ಮಧ್ಯಾಹ್ನ 3:30 ಗಂಟೆಯಿಂದ ಪ್ರದರ್ಶನಗೊಳ್ಳಲಿದೆ ಎಂದು ಅವರು ತಿಳಿಸಿದರು.
ಡಾ. ಎಸ್.ಎಲ್. ಭೈರಪ್ಪನವರ ಕಾದಂಬರಿ ಆಧಾರಿತ ನಾಟಕ ಪ್ರದರ್ಶನ ಇದಾಗಿದೆ. ಮಹಾಭಾರತವನ್ನು ವೈಚಾರಿಕ ದೃಷ್ಟಿಯೊಂದಿಗೆ ಕಟ್ಟಿಕೊಟ್ಟ ಈ ಕಾದಂಬರಿ ವಿಶ್ವದ ಅನೇಕ ವಿದೇಶಿ ಭಾಷೆಗಳಿಗೂ ಅನುವಾದಗೊಂಡಿದ್ದು, ಜನಮನ್ನಣೆ ಪಡೆದಿದೆ. ಕನ್ನಡ ಕಾಯಕ ವರ್ಷದ ಈ ಸಂದರ್ಭದಲ್ಲಿ ಮೈಸೂರು ರಂಗಾಯಣ ವತಿಯಿಂದ ”ಪರ್ವ” ಮಹಾ ರಂಗಪ್ರಯೋಗದ ಮೂಲಕ ನಾಟಕ ಪ್ರದರ್ಶನ ಆಯೋಜಿಸಲಾಗಿದೆ. ಈಗಾಗಲೇ ಬೆಂಗಳೂರು ಹಾಗೂ ಮೈಸೂರಿನಲ್ಲಿ ನಾಟಕ 20 ಪ್ರದರ್ಶನ ಕಂಡಿದೆ ಎಂದು ತಿಳಿಸಿದರು.
600 ಪುಟಗಳ ಬೃಹತ್ ಕಾದಂಬರಿಯನ್ನು ರಂಗ ಪ್ರಯೋಗಕ್ಕೆ ಅಳವಡಿಸುವುದು ಸವಾಲಿನ ಕೆಲಸವಾಗಿತ್ತು. ಇದನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ. ನಾಟಕ ಪ್ರದರ್ಶನದಲ್ಲಿ ಸುಮಾರು 40ರಿಂದ 50 ಕಲಾವಿದರು ಭಾಗವಹಿಸಲಿದ್ದು, ಪ್ರಕಾಶ ಬೆಳವಾಡಿ ಅವರು ನಿರ್ದೇಶನ ಮಾಡಲಿದ್ದಾರೆ ಎಂದು ಹೇಳಿದರು.
ಮಧ್ಯಾಹ್ನ 3.30 ಗಂಟೆಗೆ ಪ್ರಾರಂಭವಾಗಿ ಸುಮಾರು 8 ಗಂಟೆಗಳ ಕಾಲ ನಾಟಕ ಪ್ರದರ್ಶನಗೊಳ್ಳಲಿದ್ದು, 4 ಬಾರಿ ವಿರಾಮ ಹಾಗೂ 30 ನಿಮಿಷ ಊಟಕ್ಕೆ ವಿರಾಮ ಇರಲಿದೆ. ಪರ್ವ ಮಹಾ ರಂಗಪ್ರಯೋಗ ದೊಡ್ಡ ಪ್ರಮಾಣ ಮತ್ತು ದೀರ್ಘಕಾಲ ಪ್ರದರ್ಶನ ಇರುವುದರಿಂದ ರೂಪಾಯಿ 200 ಟಿಕೆಟ್ ಬೆಲೆ ನಿಗದಿಪಡಿಸಲಾಗಿದೆ. ಬೆಳಗಾವಿಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ ಟಿಕೆಟ್ ಗಳು ಲಭ್ಯವಿರುತ್ತವೆ ಮತ್ತು ರಂಗಾಯಣ ವೆಬ್ ಸೆ„ಟ್‌ನಲ್ಲಿ ಆನ್ ಲೆ„ನ್ ಮೂಲಕ ಪಡೆಯಬಹುದಾಗಿದೆ ಎಂದು ತಿಳಿಸಿದರು.
ಇದಕ್ಕೂ ಮುಂಚೆ ನಗರದ ಕಟ್ಟಿಮನಿ ಸಭಾಂಗಣದಲ್ಲಿ ಪರ್ವ ನಾಟಕ ಪ್ರದರ್ಶನ ಕುರಿತು ಮೈಸೂರು ರಂಗಾಯಣದಿಂದ ಪೂರ್ವ ಸಿದ್ಧತೆ ಕುರಿತು ರಂಗಾಯಣ ನಿರ್ದೇಶಕರಾದ ಅಡ್ಡಂಡ ಕಾರ್ಯಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.
ನಾಟಕ ಪ್ರದರ್ಶನಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಹಿರಿಯ ಸಾಹಿತಿಗಳಾದ ಸರಜು ಕಾಡ್ಕರ್, ಅಶೋಕ ಚಂದರಗಿ, ಅರವಿಂದ ಕುಲಕರ್ಣಿ, ಆರ್.ಬಿ ಕಟ್ಟಿ, ಪ್ರಿಯಾ ಪುರಾಣಿಕ, ರೇಖಾ ಶಿರಗಾವಕರ ತಿಳಿಸಿದರು. ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ವಾರ್ತಾ ಇಲಾಖೆಯ ಉಪನಿರ್ದೇಶಕ ಗುರುನಾಥ ಕಡಬೂರ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
ಬೆಳಗಾವಿ: ಪ್ರಾಚೀನ ಕಾಲದ ಬಾವಿಗಳಿಂದ ಪ್ರಸಿದ್ಧಿ ಹೊಂದಿದ ಅರಭಾಂವಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.