ಮಾಸ್ಕ್ ಧರಿಸದ, ಸಾಮಾಜಿಕ ಅಂತರ ಕಾಯದಂತವರಿಗೆ ಒಟ್ಟು 43 ಸಾವಿರ ರೂ. ದಂಡ
Team Udayavani, May 6, 2020, 3:36 PM IST
ಬೆಳಗಾವಿ: ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆಯನ್ನು ತಡೆಗಟ್ಟಲು ನಗರದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಸಂಚರಿಸುತ್ತಿದ್ದ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನರಿಗೆ ಒಟ್ಟು 43,400 ರೂ. ದಂಡ ವಿಧಿಸಲಾಗಿದೆ.
ಲಾಕ್ ಡೌನ್-3 ರ ಸಂದರ್ಭದಲ್ಲಿ ಕಿತ್ತಳೆ ವಲಯದಲ್ಲಿರುವ ಬೆಳಗಾವಿ ಜಿಲ್ಲೆಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಕೆಲವು ಆರ್ಥಿಕ ಚಟುವಟಿಕೆಗಳಿಗೆ ಮತ್ತು ಜನಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ವೇಳೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದು, ನಿಯಮ ಉಲ್ಲಂಘಿಸಿದರೆ ದಂಡ ಹಾಕಲು ಅವಕಾಶ ಕಲ್ಪಿಸಿದ್ದಾರೆ.
ಈ ಆದೇಶವನ್ನು ಬೆಳಗಾವಿ ನಗರದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದ್ದು, ಇಂತಹ ಪ್ರಕರಣಗಳು ಕಂಡುಬಂದಾಗ ಸ್ಥಳದಲ್ಲಿಯೇ ದಂಡ ವಿಧಿಸಲಾಗುತ್ತಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತ ಜಗದೀಶ್ ಕೆ.ಎಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋವಿಡ್ ವೈರಸ್ ನಿರ್ಮೂಲನೆ ಮಾಡುವುದು ಹಾಗೂ ಸಮಾಜದ ಆರೋಗ್ಯದ ದೃಷ್ಟಿಯಿಂದ ಸಾರ್ವಜನಿಕರು ಹೊರಗಡೆ ಸಂಚರಿಸುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕುಎಂದು ಅವರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
MUST WATCH
ಹೊಸ ಸೇರ್ಪಡೆ
Koratagere: ಕಾರು-ಬೈಕ್ ಭೀಕರ ಅಪಘಾತ: ಓರ್ವ ಸವಾರ ಸ್ಥಳದಲ್ಲೇ ಸಾವು
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.