Karnataka Polls 2023: ಜನ ಬದಲಾವಣೆ ಬಯಸಿದ್ದಾರೆ: ಸಿದ್ಧರಾಮಯ್ಯ
Team Udayavani, Apr 25, 2023, 5:46 AM IST
ಗೋಕಾಕ್: ರಾಜ್ಯದ ಜನತೆ ಬದಲಾವಣೆ ಬಯಸಿದ್ದು, ಎಲ್ಲ ಕಡೆ ಬದಲಾವಣೆಯ ಗಾಳಿ ಬೀಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ಸಿದ್ಧರಾಮಯ್ಯ ಹೇಳಿದರು.
ಸೋಮವಾರ ನಗರದಲ್ಲಿ ಕಾಂಗ್ರೆಸ್ ಪಕ್ಷದವರು ಆಯೋಜಿಸಿದ್ದ ಪ್ರಜಾಧ್ವನಿ ಸಮಾವೇಶವನ್ನು ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿರುವ ಬಿಜೆಪಿ ಸರಕಾರ ಜನ ವಿರೋಧಿ ಹಾಗೂ ಭ್ರಷ್ಟವಾಗಿದ್ದು, ಇದನ್ನು ಬದಲಿಸಿ ಕಾಂಗ್ರೆಸ್ ಸರಕಾರವನ್ನು ಅಧಿಕಾರಕ್ಕೆ ತರುವದು ರಾಜ್ಯದ ಜನತೆಯ ಅಭಿಲಾಷೆಯಾಗಿದೆ. ನನ್ನ ಐದು ವರ್ಷಗಳ ಆಡಳಿತದಲ್ಲಿ ಜನಪರ ಕಾರ್ಯಕ್ರಮಗಳನ್ನು ಎಲ್ಲ ಸಮಾಜದ ಬಡ ಜನರಿಗೆ ಕೊಟ್ಟಿದ್ದೇನೆ ಎಂದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾತನಾಡಿ, ಸಿದ್ದರಾಮಯ್ಯನವರ ನೇತೃತ್ವದಲ್ಲಿ ಭ್ರಷ್ಟಾಚಾರ ರಹಿತ ಜನಸ್ನೇಹಿ ಸರಕಾರವನ್ನು ಕಾಂಗ್ರೆಸ್ ಪಕ್ಷ ಈ ಹಿಂದೆ ನೀಡಿದ್ದು, ಅಂತಹ ಸರಕಾರ ಮತ್ತೊಮ್ಮೆ ಬೇಕಾಗಿದೆ.
ರಾಜಕೀಯ ಅಧಿಕಾರಕ್ಕಿಂತ ಜನಸೇವೆ ಆಗಬೇಕು. ಶಿಕ್ಷಣ, ಕೈಗಾರಿಕೆ, ನೀರಾವರಿ ಯೋಜನೆಗಳು ಜಾರಿಯಾಗಬೇಕಾದರೆ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವದಿಸಿ ಎಂದರು.
ಮಾಜಿ ಸಚಿವ ಲಕ್ಷ್ಮಣ ಸವದಿ ಮಾತನಾಡಿ, ಬಿಜೆಪಿ ಪಕ್ಷಕ್ಕೆ ಕೆಟ್ಟ ಕಾಲ ಬಂದಿದ್ದು, ಕೆಟ್ಟ ನಿರ್ಣಯಗಳನ್ನು ತೆಗೆದುಕೊಳ್ಳುವ ಮೂಲಕ ರಾಜ್ಯದಲ್ಲಿ ಕಡಿಮೆ ಸಂಖ್ಯೆಯಲ್ಲಿ ಶಾಸಕರು ಆಯ್ಕೆಯಾಗುವುದು ನಿಶ್ಚಿತ. ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಸರಕಾರ ರಚಿಸಲಿದೆ ಎಂದರು. ಕಾಂಗ್ರೆಸ್ ಅಭ್ಯರ್ಥಿ ಡಾ| ಮಹಾಂತೇಶ ಕಡಾಡಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮುಂತಾದವರಿದ್ದರು.
ಲಿಂಗಾಯತ ಸಮುದಾಯ ಬಗ್ಗೆ ನನಗೆ ಅಪಾರ ಗೌರವವಿದ್ದು ಅವರ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ. ಬಸವರಾಜ ಬೊಮ್ಮಾಯಿ ಅತ್ಯಂತ ಭ್ರಷ್ಟ ಮುಖ್ಯಮಂತ್ರಿ ಎಂದು ಮಾತ್ರ ಹೇಳಿದ್ದೇನೆ. ಅದನ್ನು ಬಿಜೆಪಿಯವರು ತಿರುಚುತ್ತಿದ್ದಾರೆ. ರಾಜ್ಯದಲ್ಲಿ 150 ಸ್ಥಾನದೊಂದಿಗೆ ಕಾಂಗ್ರೆಸ್ ಅ ಕಾರಕ್ಕೆ ಬರುವದು ನಿಶ್ಚಿತ.
-ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.