ಸೋಂಕಿನಿಂದ ಗುಣಮುಖ: ಬೆಳಗಾವಿಯಲ್ಲಿ ಯುವಕನಿಗೆ ಮಾಲೆ ಹಾಕಿ ಪಟಾಕಿ ಸಿಡಿಸಿ ಸ್ವಾಗತ
Team Udayavani, Aug 3, 2020, 1:41 PM IST
ಬೆಳಗಾವಿ: ಕೋವಿಡ್-19 ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾದ ಯುವಕನಿಗೆ ಮಾಲೆ ಹಾಕಿ, ಪಟಾಕಿ ಸಿಡಿಸಿ ಇಲ್ಲಿಯ ಖಡಕ್ ಗಲ್ಲಿಯಲ್ಲಿ ಸಂಭ್ರಮದಿಂದ ಸ್ವಾಗತಿಸಲಾಯಿತು.
ಆಸ್ಪತ್ರೆಯಿಂದ ಬಿಡುಗಡೆ ಆಗಿ ಬರುತ್ತಿದ್ದಂತೆ ಖಡಕ್ ಗಲ್ಲಿಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿತ್ತು. ಆಸ್ಪತ್ರೆಯಿಂದ ಬಿಡುಗಡೆಯಾಗಿ ಬರುತ್ತಿದ್ದಂತೆ ಪಟಾಕಿ ಸಿಡಿಸಿದ ಸ್ಥಳೀಯ ಯುವಕರು ಸಂಭ್ರಮಿಸಿದರು.
ಹತ್ತು ದಿನಗಳ ಹಿಂದೆ ಖಡಕ್ ಗಲ್ಲಿಯ 35 ವರ್ಷ ವಯಸ್ಸಿನ ಈ ವ್ಯಕ್ತಿಗೆ ಕೋವಿಡ್-19 ಸೋಂಕು ವಕ್ಕರಿಸಿತ್ತು. ಇಲ್ಲಿನ ಕೋವಿಡ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈತ ನಿನ್ನೆ ಗುಣಮುಖನಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಖಡಕ್ ಗಲ್ಲಿಯಲ್ಲಿ ಹಾಕಿದ್ದ ಬ್ಯಾರಿಕೇಡ್ ಗೆ ರಿಬ್ಬನ್ ಕತ್ತರಿಸಿ ಒಳಗೆ ಪ್ರವೇಶ ನೀಡಲಾಯಿತು.
ಬಿಡುಗಡೆಯಾದ ಹಿನ್ನೆಲೆಯಲ್ಲಿ ಯುವಕನಿಗೆ ಮಾಲೆ ಹಾಕಿ ಪಟಾಕಿ ಸಿಡಿಸಿ ಸಂಭ್ರಮದಿಂದ ಸ್ವಾಗತಿಸಲಾಯಿತು. ಮನೆಗೆ ಯುವಕ ಆಗಮಿಸುತ್ತಿದ್ದಂತೆ ಕುಟುಂಬಸ್ಥರು ಆರತಿ ಬೆಳಗಿ, ದೃಷ್ಟಿ ತೆಗೆದು ಸ್ವಾಗತ ಮಾಡಿಕೊಂಡರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.