ಜನರ ಆರೋಗ್ಯ ಮಾಹಿತಿ ಕಲೆ
Team Udayavani, Apr 16, 2020, 4:13 PM IST
ಚಿಕ್ಕೋಡಿ: ದಿನದಿಂದ ದಿನಕ್ಕೆ ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಇದನ್ನು ತಡೆಯಲು ಕೊರೊನಾ ನಿಯಂತ್ರಿಸುವ ಹೋರಾಟದ ಸೈನಿಕರಾದ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಆರೋಗ್ಯಸಹಾಯಕರ ಜೊತೆಗೂಡಿ ಜನರ ಆರೋಗ್ಯದ ಸ್ಥಿತಿಗತಿ ಬಗ್ಗೆ ಪ್ರತಿದಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯ ಅಥಣಿ, ಕಾಗವಾಡ, ಚಿಕ್ಕೋಡಿ, ನಿಪ್ಪಾಣಿ, ಹುಕ್ಕೇರಿ, ರಾಯಬಾಗ, ಗೋಕಾಕ ಮತ್ತು ಮೂಡಲಗಿ ತಾಲೂಕುಗಳನ್ನು ಒಳಗೊಂಡ 8 ತಾಲೂಕುಗಳಲ್ಲಿ ಸುಮಾರು 2,800 ಜನ ಆಶಾ ಕಾರ್ಯಕರ್ತರು, 3000 ಜನ ಅಂಗನವಾಡಿಕಾರ್ಯಕರ್ತರು ಹಾಗೂ 1200 ಜನ ವೈದ್ಯರು, ಆರೋಗ್ಯ ಸಹಾಯಕರು ಕೋವಿಡ್-19 ವಿರುದ್ಧ ಹೋರಾಡುತ್ತಿದ್ದಾರೆ. ಅದರಲ್ಲಿ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಕೋವಿಡ್ 19ಸೋಂಕಿತರ ಸಂಖ್ಯೆ ಹೆಚ್ಚಳವಾಗಿರುವ ಪರಿಣಾಮಈಗಾಗಲೇ ಜಿಲ್ಲಾಡಳಿತ ಕಂಟೈನ್ಮೆಂಟ್ ಪ್ರದೇಶ ಎಂದು ಘೋಷಣೆ ಮಾಡಿದೆ.
ಮನೆಯಲ್ಲಿ ಎಷ್ಟು ಜನ ಇದ್ದಾರೆ?, ಹೊರ ದೇಶಗಳಿಂದ, ಹೊರ ರಾಜ್ಯಗಳಿಂದ ಅಥವಾ ಹೊರ ಜಿಲ್ಲೆಗಳಿಂದ ಯಾರಾದರೂ ಬಂದಿದ್ದಾರೆಯೇ ಎನ್ನುವ ಮಾಹಿತಿಯನ್ನು ತಂಡಗಳು ಸಂಗ್ರಹಿಸುತ್ತಿವೆ. ಕೋವಿಡ್-19 ರೋಗದ ಲಕ್ಷಣಗಳು ಯಾರಲ್ಲಯಾದರೂ ಕಂಡುಬಂದರೆ ತಮ್ಮ ಮೇಲಧಿಕಾರಿಗಳಿಗೆತಿಳಿಸುತ್ತಾರೆ. ನಂತರ ವೈದ್ಯಕೀಯ ತಂಡವು ಗಂಟಲು ದ್ರವದ ಮಾದರಿ ಸಂಗ್ರಹಿಸಿ, ಪ್ರಯೋಗಾಲಯಕ್ಕೆ ಕಳುಹಿಸಿ ಕೊಡುತ್ತದೆ. ಸೋಂಕು ಖಚಿತವಾದರೆ, ಅಂಥವರನ್ನು ಜಿಲ್ಲಾಸ್ಪತ್ರೆಯ ಪ್ರತ್ಯೇಕ ವಾರ್ಡ್‌ಗಳಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತದೆ.
ರಕ್ಷಣೆಗೆ ಸುರಕ್ಷತೆ ಕ್ರಮ ಅಳವಡಿಕೆ: ಮನೆ-ಮನೆಗೆ ಹೋಗಿ ಮಾಹಿತಿ ಕಲೆ ಹಾಕುವ ಸಮೀಕ್ಷಾ ತಂಡಕ್ಕೆ ಈಗಾಗಲೇ ಸರ್ಕಾರ ಮಾಸ್ಕ್, ಸ್ವಾನಿಸ್ಯಾಟರ್, ಗ್ಲೌಜ್ ನೀಡಿದೆ. ಸಮೀಕ್ಷೆಗೆ ಹೋದಾಗ ಸಾಮಾಜಿಕ ಅಂತರ ಕಾಪಾಡಿಕೊಂಡು ಅವರ ಮಾಹಿತಿ ಕಲೆ ಹಾಕಲಾಗುತ್ತಿದೆ. ಗ್ರಾಮದಲ್ಲಿ ಗುಂಪು ಗುಂಪಾಗಿ ಕುಳಿತುಕೊಂಡವರಿಗೆ ತಿಳಿವಳಿಕೆ ಹೇಳಿ ಮನೆಗೆ ಕಳಿಸಲಾಗುತ್ತಿದೆ ಎನ್ನುತ್ತಾರೆ ಸಮೀಕ್ಷೆ ತಂಡದಲ್ಲಿಇರುವ ಆರೋಗ್ಯ ಸಹಾಯಕರು.
ಮಾಹಿತಿ ನೀಡಲು ನಿರಾಕರಣೆ: ಕೆಲ ಜನರು ಮಾಹಿತಿ ನೀಡಲು ಅಸಹಕಾರ ಕೊಡುತ್ತಿದ್ದಾರೆ. ಮಾಹಿತಿ ಸಂಗ್ರಹಿಸಲು ಮನೆಗೆ ಹೋದಾಗ ಕೆಲವರು ಸರಿಯಾಗಿ ಮಾಹಿತಿ ನೀಡುವುದಿಲ್ಲ, ಕೆಲವರು ಮಾಹಿತಿಯನ್ನೇ ನೀಡಲು ನಿರಾಕರಿಸುತ್ತಾರೆ. ಇನ್ನು ಕೆಲವರು, ಮನೆಯ ಬಾಗಿಲು ಹಾಕಿ ಅವಮಾನಿಸುತ್ತಾರೆ. ಆದರೂ ನಾವು ಒತ್ತಡ ಹಾಕಿ ಮಾಹಿತಿ ಕಲೆ ಹಾಕುತ್ತೇವೆ. ಕೆಲವರು ನಮ್ಮ ಮೇಲೆ ದಬ್ಟಾಳಿಕೆ ನಡೆಸಿದರೇ ಅಂಥವರ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುತ್ತೇವೆ ಎನ್ನುತ್ತಾರೆ ಆಶಾ ಕಾರ್ಯಕರ್ತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.