ರೈತರ ಬೆಳವಣಿಗೆಯಲ್ಲಿ ಪಿಕೆಪಿಎಸ್ ಪಾತ್ರ ಮುಖ್ಯ
ಸಂಘಗಳು ಆರ್ಥಿಕ ಸಬಲವಾಗಿ ರೈತರಿಗೆ ಆಸರೆಯಾಗಲಿ
Team Udayavani, Mar 22, 2022, 2:23 PM IST
ಗೋಕಾಕ: ಗ್ರಾಮೀಣ ಭಾಗದ ರೈತರ ಆರ್ಥಿಕ ಬೆಳವಣಿಗೆಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಪಾತ್ರ ಮಹತ್ವದ್ದಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅವರು, ಸೋಮವಾರ ತಾಲೂಕಿನ ಮಾಲದಿನ್ನಿ ಗ್ರಾಮದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಪಿಕೆಪಿಎಸ್‌ಗಳು ರೈತರಿಗೆ ಸಕಾಲದಲ್ಲಿ ಆರ್ಥಿಕ ನೆರವು ಒದಗಿಸಿ ಕೃಷಿ ಕ್ಷೇತ್ರದ ಅಭ್ಯುದಯಕ್ಕೆ ಕಾರಣವಾಗಿವೆ. ಆದ್ದರಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಆರ್ಥಿಕವಾಗಿ ಸದೃಢವಾಗಿ, ಗ್ರಾಮೀಣ ಜನರ ಬದುಕಿಗೆ ಆಸರೆಯಾಗಲು ಶಕ್ತಿ ಮೀರಿ ಶ್ರಮಿಸಬೇಕು ಎಂದರು.
ರಾಜ್ಯ ಸರಕಾರ ರೈತರಿಗೆ ಶೇ.3 ಬಡ್ಡಿ ದರದಲ್ಲಿ ಕೃಷಿಗಾಗಿ ಟ್ರ್ಯಾಕ್ಟರ್ ಲೋನ್ ಮತ್ತು ಬೆಳೆ ಸಾಲ ನೀಡುವಲ್ಲಿ ಯಶಸ್ವಿಯಾಗಿದ್ದು, ಈ ಯೋಜನೆಯನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಶೇ.3 ಬಡ್ಡಿದರದಲ್ಲಿ ಎರಡು ಟ್ರ್ಯಾಕ್ಟರ್‌ಗಳನ್ನು ರೈತರರಾದ ಲಕ್ಕಪ್ಪ ಭಂಡಿ, ಚಿನ್ನಪ್ಪ ಭಂಡಿ ಅವರಿಗೆ ಶಾಸಕ ರಮೇಶ ಜಾರಕಿಹೊಳಿ ಹಸ್ತಾಂತರಿಸಿದರು.
ಸಂಘದ ಪದಾಧಿಕಾರಿಗಳು ಶಾಸಕ ರಮೇಶ ಜಾರಕಿಹೊಳಿ ಅವರನ್ನು ಆತ್ಮೀಯವಾಗಿ ಸತ್ಕರಿಸಿದರು. ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡರ, ಜಿಪಂ ಮಾಜಿ ಸದಸ್ಯರಾದ ಟಿ.ಆರ್ ಕಾಗಲ, ಎಮ್.ಎಲ್ ತೋಳಿನವರ, ಪಿಕೆಪಿಎಸ್ ಅಧ್ಯಕ್ಷ ರಾಮಣ್ಣ ಭಂಡಿ, ಉಪಾಧ್ಯಕ್ಷ ಯಲ್ಲಪ್ಪ ಮಾಳೇದ, ಸದಸ್ಯರಾದ ಯಲ್ಲಪ್ಪ ಬಬಲಿ, ಮಲ್ಲಪ್ಪ ಬಂಗೆನ್ನವರ, ಲಕ್ಕಪ್ಪ ಭಂಡಿ, ಲಕ್ಷ್ಮಪ್ಪ ಹೊನ್ನಕುಪ್ಪಿ, ಹನಮಂತ ಭಂಡಿ, ದುಂಡವ್ವ ಹೊಸಕುರಬರ, ತುಳಸವ್ವ ದಂಡಿನ, ಕಾಶವ್ವ ರಡ್ಡಿ, ರುಕ್ಮಿಣಿ ಮಾವರಕರ, ಗ್ರಾಮದ ಹಿರಿಯರಾದ ಲಕ್ಷ್ಮಣ ಭಂಡಿ, ಅವನಪ್ಪ ಭಂಡಿ, ರಂಗಪ್ಪ ಪೂಜೇರಿ, ಗಪಾರಸಾಬ ಮುಲ್ಲಾ, ಭೀರಪ್ಪ ದುರ್ಗಿಪೂಜೇರಿ, ಶ್ರೀಕಾಂತ ಕಂಬಾರ, ರಾಮಗೌಡ ಪಾಟೀಲ, ಲಕ್ಕಪ್ಪ ಮಾಳಗಿ, ವಿಠuಲ ಗುಂಡಿ ಸೇರಿದಂತೆ ಸಿಬ್ಬಂದಿಗಳು, ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.