ನಾಯಿ-ಮಂಗಗಳ ಹಾವಳಿಯಿಂದ ಕಂಗಾಲಾದ ಗ್ರಾಮಸ್ಥರು
Team Udayavani, Apr 21, 2021, 7:02 PM IST
ಬೆಟಗೇರಿ: ಗ್ರಾಮದ ಬಸ್ ನಿಲ್ದಾಣ, ವಿವಿಧ ವೃತ್ತದ ಅಕ್ಕ-ಪಕ್ಕ ಹಾಗೂ ಮನೆಗಳ ಚಾವಣಿ ಮೇಲೆ ಮಂಗಗಳು ಮತ್ತು ಬಿಡಾಡಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ.
ಬೆಟಗೇರಿ ಗ್ರಾಮ ಸುತ್ತಲಿನ ಹತ್ತೂರಿನ ಹಳ್ಳಿಗಳ ವ್ಯಾಪಾರ ವಹಿವಾಟು ಕೇಂದ್ರ ಸ್ಥಾನವಾಗಿದೆ. ಗ್ರಾಮಕ್ಕೆ ನಿತ್ಯ ಆಗಮಿಸುವ ವಾಹನ ಸವಾರರು ಮಂಗಗಳು ಮತ್ತು ಬಿಡಾಡಿ ನಾಯಿಗಳ ಅಡ್ಡಾದಿಡ್ಡಿ ಓಡಾಟಕ್ಕೆ ಹೆದರಿ ನಿಧಾನ ಇಲ್ಲವೇ ಪ್ರಾಣ ಭಯದಲ್ಲಿ ಸಂಚರಿಸುವಂತಾಗಿದೆ.
ಮನೆಗಳ ಚಾವಣಿ ಮೇಲೆ ಹಾರುವ ಮಂಗಗಳು, ಅಲ್ಲಿರುವ ಟಿವಿ ಡಿಟಿಎಚ್ ಸೆಟ್‌ಗಳನ್ನು ಹಾಳುಗೆಡಹುತ್ತಿವೆ. ಮನೆ ಹೆಂಚು, ಪತ್ರಾಸ್ ಒಡೆದು ಹಾನಿ ಮಾಡುತ್ತಿರುವ ಈ ಮಂಗಗಳ ಉಪಟಳದಿಂದ ಸ್ಥಳೀಯರು ಬೇಸತ್ತು ಹೋಗಿದ್ದಾರೆ. ಬಿಡಾಡಿ ನಾಯಿಗಳು ಮನೆ ಪಕ್ಕದ ಕೊಟ್ಟಿಗೆಯಲ್ಲಿನ ಎಳೆಕರು, ಕುರಿ ಮರಿಗಳನ್ನು ಕಚ್ಚಿ ಗಾಯಗೊಳಿಸಿದ, ತೀವ್ರ ಗಾಯದಿಂದ ಮರಿಗಳು ಮೃತಪಟ್ಟ ಸಾಕಷ್ಟು ಉದಾಹರಣೆಗಳಿವೆ.
ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮಂಗ ಮತ್ತು ನಾಯಿಗಳ ಉಪಟಳಕ್ಕೆ ಕಡಿವಾಣ ಹಾಕಲು ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡರ್ ಸ್ಫೋ*ಟ: ಅಪಾರ ಹಾನಿ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ
Puttur: ಬಸ್ ನಿಲ್ದಾಣದಲ್ಲಿ ಕಿರುಕುಳ; ಯುವಕನಿಗೆ ಗೂಸಾ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
MUST WATCH
ಹೊಸ ಸೇರ್ಪಡೆ
Pro Kabaddi;ಬೆಂಗಳೂರು ಬುಲ್ಸ್ ಜಯಭೇರಿ: ತಮಿಳ್ ತಲೈವಾಸ್‌ಗೆ 32-36 ಅಂಕಗಳ ಸೋಲು
Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡರ್ ಸ್ಫೋ*ಟ: ಅಪಾರ ಹಾನಿ
Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.