ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ
Team Udayavani, Apr 15, 2024, 5:47 PM IST
ಉದಯವಾಣಿ ಸಮಾಚಾರ
ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಮೇಲೆ ಭಾರತಕ್ಕೆ ಕಪ್ಪುಚುಕ್ಕೆಯಾಗಿರುವ ಪಾಕ್ ಆಕ್ರಮಿತ ಕಾಶ್ಮೀರ ಎಂಬ ಪ್ರದೇಶವನ್ನು ಕಿತ್ತುಹಾಕಿ ಭಾರತದ ಭೂಪಟದಲ್ಲಿ ಸೇರಿಸಲಿದ್ದಾರೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ
ಹೇಳಿದರು.
ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ರವಿವಾರ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು,
ಮೋದಿ ಅವರ ಆಡಳಿತ ಬಂದ ನಂತರ ಜಮ್ಮು ಮತ್ತು ಕಾಶ್ಮೀರದ ಚಿತ್ರ ಬದಲಾಗಿದೆ. ಅಭಿವೃದ್ಧಿಯ ಹೊಸ ಅಧ್ಯಾಯ
ಅರಂಭವಾಗಿದೆ. ಮೂರನೇ ಬಾರಿಗೆ ಪ್ರಧಾನಿಯಾದ ನಂತರ ನಾವು ಪಿಒಕೆ ಕಪ್ಪುಚುಕ್ಕೆ ಕಿತ್ತುಹಾಕಿ ಅಖಂಡ ಜಮ್ಮು ಮತ್ತು ಕಾಶ್ಮೀರ ನಕಾಶೆಯನ್ನು ನೋಡುತ್ತೇವೆ. ಇಡೀ ದೇಶಕ್ಕೆ ಅನ್ವಯವಾಗುವಂತೆ ಎಲ್ಲರಿಗೂ ಒಂದೇ ಕಾನೂನು ಜಾರಿಗೆ ಬರಲಿದೆ ಎಂದರು.
ದೇಶದ ಆರ್ಥಿಕತೆ ಪ್ರಗತಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭದ್ರಬುನಾದಿ ಹಾಕಿದ್ದಾರೆ. ಇದರ ಫಲವಾಗಿ ಶೀಘ್ರದಲ್ಲೇ
ಭಾರತ ವಿಶ್ವದ ಪ್ರಭಾವಶಾಲಿ ರಾಷ್ಟ್ರವಾಗಿ ಹೊರಹೊಮ್ಮಲಿದೆ. ಆರ್ಥಿಕ ಕ್ಷೇತ್ರದಲ್ಲಿ ವಿಶ್ವದ ಮೂರನೇ ಶಕ್ತಿಶಾಲಿ ರಾಷ್ಟ್ರವಾಗಿರುವ ಭಾರತ ಮುಂದಿನ ವರ್ಷಗಳಲ್ಲಿ ಮೊದಲ ಸ್ಥಾನಕ್ಕೆ ಬರಲಿದೆ ಎಂದು ಹೇಳಿದರು.
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನಲ್ಲಿ ಯಾವಾಗಲೂ ಬೆಳಗಾವಿ ದಕ್ಷಿಣ ಕ್ಷೇತ್ರ ಅತ್ಯಂತ ಮಹತ್ವದ ಪಾತ್ರ
ವಹಿಸುತ್ತ ಬಂದಿದೆ. ಇದೇ ಹಿನ್ನಲೆಯಲ್ಲಿ ಈ ಬಾರಿ ನಾನೂ ಸಹ ಬೆಳಗಾವಿ ದಕ್ಷಿಣ ಕ್ಷೇತ್ರದಿಂದ ಒಂದು ಲಕ್ಷ ಮುನ್ನಡೆ
ಪಡೆಯುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಎಲ್ಲಿ ಪಕ್ಷದ ಸಂಘಟನೆ, ಬದ್ಧತೆ, ಶಿಸ್ತು ವ್ಯವಸ್ಥಿತವಾಗಿ ಇರುತ್ತದೆಯೋ ಅಲ್ಲಿ ಪಕ್ಷಕ್ಕೆ ಎಂದಿಗೂ ಸೋಲಾಗುವದಿಲ್ಲ. ಇದಕ್ಕೆ ಬಿಜೆ
ಪಿ ಫಲಿತಾಂಶ ಸಾಕ್ಷಿ ಎಂದ ಅವರು, ಶಾಸಕ ಅಭಯ ಪಾಟೀಲ ನೇತೃತ್ವದಲ್ಲಿ ಬೆಳಗಾವಿ ದಕ್ಷಿಣ ಕ್ಷೇತ್ರ ಗುಜರಾತದ ಗಾಂಧಿನಗರದ ಮಾದರಿಯಲ್ಲಿ ಅಭಿವೃದ್ಧಿಗೊಂಡಿದೆ. ಪಕ್ಷದ ಸಂಘಟನೆಯಲ್ಲಿ ಅತ್ಯಂತ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿರುವ ಅಭಯ ಪಾಟೀಲ ತೆಲಂಗಾಣಾ ಮತ್ತು ಗೋವಾ ರಾಜ್ಯಗಳ ಚುನಾವಣಾ ಉಸ್ತುವಾರಿ
ಜವಾಬಾœರಿ ವಹಿಸಿಕೊಂಡಿದ್ದಾರೆ. ಅವರಿಗೆ ಒಳ್ಳೆಯ ಭವಿಷ್ಯ ಇದೆ ಎಂದರು.
ಒಂದು ಸರಕಾರದ ಮಂತ್ರಿಮಂಡಳದಲ್ಲಿ ಯಾರಾದರೂ ಅರ್ಹ ವ್ಯಕ್ತಿಗೆ ಮಂತ್ರಿ ಸ್ಥಾನ ಸಿಗಬೇಕೆಂದರೆ ಅದು ಅಭಯ ಪಾಟೀಲ.
ನಾನು ಎಷ್ಟೋಸಲ ಮುಖ್ಯಮಂತ್ರಿಗಳಿಗೆ ಹೇಳಿದ್ದೇನೆ. ಯಾವುದೋ ಕಾರಣಕ್ಕೆ ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಆದರೆ ಮುಂದೆ
ಅವರಿಗೆ ಖಂಡಿತ ಒಳ್ಳೆಯ ಭವಿಷ್ಯ ಇದೆ. ಅವರ ಕೆಲಸ, ಕಾರ್ಯವೈಖರಿಯನ್ನು ನೋಡಿದ್ದೇನೆ ಎಂದರು.
ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಮಾತನಾಡಿ, ದೇಶದಲ್ಲಿ ಕಾಂಗ್ರೆಸ್ ಸಂಸದರು ಬಂದರೆ ವಿನಾಶ. ಅದೇ ಬಿ ಜೆ ಪಿ ಸಂಸದರು ಆಯ್ಕೆಯಾಗಿ ಬಂದರೆ ವಿಕಾಸ. ಇದನ್ನು ಜನರು ಅರಿಯಬೇಕು. ದೇಶಕ್ಕೆ ನರೇಂದ್ರ ಮೋದಿ ಬೇಕಾ ಅಥವಾ ರಾಹುಲ್ ಗಾಂಧಿ ಬೇಕಾ ಎಂಬುದನ್ನು ನಿರ್ಧಾರ ಮಾಡಿ ಎಂದು ಕರೆನೀಡಿದರು.
ಅಭಿವೃದ್ಧಿ ವಿಷಯದಲ್ಲಿ ಬಿಜೆಪಿ ಗೆ ಬೇರೆ ಪರ್ಯಾಯ ಇಲ್ಲ. ನಿಮಗೆ ಅಭಿವೃದ್ಧಿ ಬೇಕಾದರೆ, ನರೇಂದ್ರ ಮೋದಿ ಮತ್ತೂಮ್ಮೆ
ಪ್ರಧಾನಿಯಾಗಬೇಕಾದರೆ, ಅದೇ ರೀತಿ ಜಗದೀಶ ಶೆಟ್ಟರ ಅವರ ಅನುಭವ ಬೇಕಾದರೆ ಬಿಜೆಪಿ ಬೆಂಬಲಿಸಬೇಕು ಎಂದು ಮನವಿ
ಮಾಡಿದರು. ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ
ನೇತೃತ್ವದಲ್ಲಿ ದೇಶದ ಆರ್ಥಿಕ ಸ್ಥಿತಿ ಅತ್ಯಂತ ಸದೃಢವಾಗಿದೆ. ನಮ್ಮ ಪ್ರಗತಿ ಇಡೀ ಜಗತ್ತಿಗೆ ಮಾದರಿಯಾಗಿದೆ. ವಿಶ್ವದ ಅತ್ಯಂತ
ಶಕ್ತಿಶಾಲಿಯಾಗಿ ಹೊರಹೊಮ್ಮಲು ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಲು ಎಲ್ಲರೂ ಬಿಜೆಪಿ ಬೆಂಬಲಿಸಬೇಕು ಎಂದು ಹೇಳಿದರು.ಸಂಸದರಾದ ಮಂಗಲಾ ಅಂಗಡಿ, ನಗರ ಘಟಕದ ಅಧ್ಯಕ್ಷ ಗೀತಾ ಸುತಾರ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
MUST WATCH
ಹೊಸ ಸೇರ್ಪಡೆ
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.