ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ 26 ರೌಡಿಗಳ ಮನೆಗಳ ಮೇಲೆ ದಾಳಿ
Team Udayavani, Jun 29, 2022, 8:27 AM IST
ಬೆಳಗಾವಿ: ನಗರದಲ್ಲಿ ರೌಡಿಸಂ ಮಾಡುತ್ತ ಜನರನ್ನು ಹೆದರಿಸುತ್ತಿದ್ದ ಒಟ್ಟು 26 ರೌಡಿಗಳ ಮನೆಗಳ ಮೇಲೆ ಬುಧವಾರ ಬೆಳ್ಳಂಬೆಳಗ್ಗೆ ಡಿಸಿಪಿ ರವೀಂದ್ರ ಗಡಾದಿ ನೇತೃತ್ವದಲ್ಲಿ 150ಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿ ಮಾರಕಾಸ್ತ್ರ ಸೇರಿದಂತೆ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದೆ.
ಬೆಳಗಾವಿ ನಗರದ ವಿವಿಧ ಕಡೆಗೆ ಬಾಲ ಬಿಚ್ಚಿ ಓಡಾಡುತ್ತಿದ್ದ ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿದ ಪೊಲೀಸರಿಗೆ, ಮೂವರು ರೌಡಿಗಳ ಮನೆಗಳಲ್ಲಿ ತಲವಾರ, ಚಾಕು, ಜಂಬೆ ಸೇರಿದಂತೆ ಇತರೆ ಮಾರಕಾಸ್ತ್ರಗಳು ವಸ್ತುಗಳು ಸಿಕ್ಕಿವೆ.
ರುಕ್ಮೀಣಿ ನಗರದ ಶ್ರೀಧರ ಸತ್ಯಪ್ಪ ತಲವಾರ(29), ಮಹಾಧಚಾರ ರೋಡ್ ನ ವಿನಯ ಶಂಕರ ಪ್ರಧಾನ(45) ಹಾಗೂ ಖಂಜರ ಗಲ್ಲಿಯ ಅಲ್ತಾಫ ಸುಬೇದಾರ((36) ಸೇರಿದಂತೆ 26 ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ನಗರದಲ್ಲಿ ಜನರನ್ನು ಹೆದರಿಸಿ ಹಲ್ಲೆ ಮಾಡಿ ರೌಡಿಸಂ ಮಾಡಿ ಗ್ಯಾಂಗ್ ಸ್ಟಾರ್ ಗಳಾಗಿದ್ದ ರೌಡಿಗಳಿಗೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವೀಂದ್ರ ಗಡಾದಿ ನೇತೃತ್ವದಲ್ಲಿ ಪೊಲೀಸರು ಬಿಸಿಮುಟ್ಟಿಸಿದ್ದಾರೆ. 150ಕ್ಕೂ ಹೆಚ್ಚು ಜನರಿದ್ದ ಪೊಲೀಸರು ಬೆಳ್ಳಂಬೆಳಗ್ಗೆ 5 ಗಂಟೆ ಸುಮಾರಿಗೆ ದಾಳಿ ನಡೆಸಿದ್ದಾರೆ.
ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವ ಇಂಥ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಈ ದಾಳಿ ನಡೆಸಲಾಗಿದೆ. ಸಮಾಜದಲ್ಲಿ ಶಾಂತಿ ಭಂಗವನ್ನುಂಟು ಮಾಡುವವರ ಮೇಲೆ ನಿಗಾ ಇಡಲಾಗುತ್ತಿದೆ ಎಂದು ಡಿಸಿಪಿ ರವೀಂದ್ರ ಗಡಾದಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.