ಕೋವಿಡ್ ಸೋಂಕು ಎರಡನೇ ಭೀತಿ: ಬೆಳಗಾವಿ ಗಡಿಯಲ್ಲಿ ಕಟ್ಟೆಚ್ಚರ
Team Udayavani, Feb 22, 2021, 12:11 PM IST
ಬೆಳಗಾವಿ: ಮಹಾರಾಷ್ಟ್ರದಲ್ಲಿ ಕೋವಿಡ್ ಎರಡನೇ ಅಲೆ ಭೀತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಗಡಿ ಭಾಗದಲ್ಲಿ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದೆ.
ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರ ಕೋವಿಡ್ ನೆಗೆಟಿವ್ ವರದಿ ನೋಡಿ ಒಳ ಬಿಡಲಾಗುತ್ತಿದೆ. ಗಡಿ ಭಾಗದಲ್ಲಿರುವ ಕೊಲ್ಲಾಪುರ ಬಳಿಯ ಕೊಗನೊಳ್ಳಿ, ಮಿರ್ಜ ಸಮೀಪದ ಕಾಗವಾಡ, ಅಥಣಿ, ಇಚಲಕರಂಜಿ ಬಳಿಯ ಸದಲಗಾ ಚೆಕ್ ಪೋಸ್ಟ್ ಗಳಲ್ಲಿ ನಿಗಾ ವಹಿಸಲಾಗಿದೆ. ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಯಾಣಿಕರಿಗೆ ಮಾರ್ಗಸೂಚಿ ಪಾಲಿಸುವಂತೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ:ಮತ್ತೆ ಕೋವಿಡ್ ಕಾಟ: ತಲಪಾಡಿ ಗಡಿಭಾಗದಲ್ಲಿ ಚೆಕ್ ಪೋಸ್ಟ್ ಪುನರಾರಂಭ
ಕೆಎಸ್ಆರ್ ಟಿಸಿ ಬಸ್ ಗಳಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಪ್ರಯಾಣಿಕರನ್ನು ಕರೆದುಕೊಂಡು ಬರುವಾಗ ಆರ್ ಟಿಪಿಸಿಆರ್ ತಪಾಸಣಾ ವರದಿ ನೋಡಿಯೇ ಬಸ್ ಹತ್ತಿಸಬೇಕು. ನೆಗೆಟಿವ್ ವರದಿ ಇಲ್ಲದೇ ಯಾವುದೇ ಪ್ರಯಾಣಿಕರನ್ನು ಬಸ್ ಗೆ ಹತ್ತಿಸಿಕೊಳ್ಳುವಂತಿಲ್ಲ ಎಂದು ತಿಳಿಸಲಾಗಿದೆ.
ಮಹಾರಾಷ್ಟ್ರ ಹಾಗೂ ಕೇರಳ ಹೊರತುಪಡಿಸಿ ಇತರ ರಾಜ್ಯಗಳಿಂದ ಬರುವ ಪ್ರಯಾಣಿಕರು, ಅಂದರೆ ಗುಜರಾತ್, ಮಧ್ಯಪ್ರದೇಶ ಮುಂತಾದ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಚೆಕ್ ಪೋಸ್ಟ್ ಗಳಲ್ಲಿ ನಿಲ್ಲಿಸಿ ತಪಾಸಣೆ ನಡೆಸುವ ಅಗತ್ಯವಿಲ್ಲ ಎಂದು ಸೂಚಿಸಲಾಗಿದೆ.
ಇದನ್ನೂ ಓದಿ: ರಾಮಮಂದಿರ ನಿರ್ಮಾಣಕ್ಕೆ ಸಿದ್ದರಾಮಯ್ಯ ಸಹ ದೇಣಿಗೆ ಕೊಟ್ಟಿದ್ದಾರೆ: ಎಸ್ ಟಿ ಸೋಮಶೇಖರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.