Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Team Udayavani, Nov 21, 2024, 7:25 PM IST
ಬೆಳಗಾವಿ: ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊನೆಯ ಅಧಿವೇಶನವಾಗಲಿದೆ ಎಂದು ಬೆಳಗಾವಿಯಲ್ಲಿ ಗುರುವಾರ (ನ.21) ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದರು.
ಸಿದ್ದರಾಮಯ್ಯನವರು ತಮ್ಮ ರಾಜಕೀಯದ ಕೊನೆಯ ದಿನಗಳನ್ನು ಎಣಿಸುತ್ತಿದ್ದಾರೆ. ಇದಕ್ಕೆ ಕೆಲವೇ ದಿನಗಳು ಮಾತ್ರ ಉಳಿದಿದ್ದು, ಬೆಳಗಾವಿ ಅಧಿವೇಶನ ಅವರ ಕೊನೆ ಅಧಿವೇಶನವಾಗಲಿದೆ ಎಂದರು.
ಮುಖ್ಯಮಂತ್ರಿ ಸ್ಥಾನವನ್ನು ಹರಾಜಿಗೆ ಇಟ್ಟಿದ್ದಾರೆ. ಕೆಲವರು ಐವತ್ತು ಕೋಟಿ, ನೂರು ಕೋಟಿ ಆಫರ್ ಮಾಡುತ್ತಿದ್ದಾರೆ. ಮುಖ್ಯವಾಗಿ ಶಾಸಕರೇ ಸಿದ್ದರಾಮಯ್ಯ ಅವರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಅವರು ಐವತ್ತು ಕೋಟಿ ಕೊಡುತ್ತೇನೆ ಎಂದಿದ್ದಾರೆ, ನೀವು ಕೊಡಿ ಎಂದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಹೊಸ ಬಾಂಬ್ ಸಿಡಿಸಿದರು.
ಚಳಿಗಾಲ ಅಧಿವೇಶನಕ್ಕೆ ಹೊಸ ಮುಖ್ಯಮಂತ್ರಿ ಇರುತ್ತಾರೆ ಎಂಬ ತಮ್ಮ ಹಿಂದಿನ ಹೇಳಿಕೆಯ ಬಗ್ಗೆ ಪ್ರಸ್ತಾಪಿಸಿ ಮುಖ್ಯಮಂತ್ರಿ ಬಹಳ ಭಂಡರಿದ್ದಾರೆ. ನಾನು ಸವಾಲ್ ಕೂಡ ಹಾಕಿದ್ದೆ. ಆಗ ಸಿದ್ದರಾಮಯ್ಯ ಅವರು ಭ್ರಷ್ಟಾಚಾರ ಮಾಡಿಲ್ಲವೆಂದು ಹೇಳುತ್ತಿದ್ದರು. ಮೈಸೂರಿನ ಮುಡಾ ಹಗರಣದಲ್ಲಿ ಅವರ ಕುಟುಂಬ ಭ್ರಷ್ಟಾಚಾರದಲ್ಲಿ ಮುಳುಗಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಆರೋಪಿ ಸ್ಥಾನದಲ್ಲಿದ್ದಾರೆ ಎಂದರು.
ಬಿಜೆಪಿಯವರು ಆಪರೇಷನ್ ಕಮಲ ಮಾಡುತ್ತಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ. ನಾವೇನೂ ಮೂರ್ಖರಿದ್ದೇವಾ? 66 ಶಾಸಕರನ್ನು ಇಟ್ಟುಕೊಂಡು ಸರ್ಕಾರ ಮಾಡಲು ಆಗುತ್ತದೆಯೇ ಎಂದು ಪ್ರಶ್ನೆ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕದಲ್ಲಿದ್ದಾರೆ. ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಬೇಕು ಎಂಬ ಚಿಂತೆಯಲ್ಲಿದ್ದಾರೆ. ಭ್ರಷ್ಟಾಚಾರ ಹೊತ್ತುಕೊಂಡು ಮುಖ್ಯಮಂತ್ರಿ ಸ್ಥಾನದಿಂದ ಇಳಿಯಬೇಕು ಎಂಬ ಆತಂಕವಿದೆ ಎಂದರು.
ರಾಜ್ಯ ಸರ್ಕಾರ ರೈತರನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಉತ್ತರ ಕರ್ನಾಟಕದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಸರ್ಕಾರಕ್ಕೂ ಉತ್ತರ ಕರ್ನಾಟಕಕ್ಕೂ ಸಂಬಂಧವೇ ಇಲ್ಲ. ಆಡಳಿತ ಪಕ್ಷದ ಶಾಸಕರೇ ನಾವು ಶಾಸಕರಾಗಿದ್ದು ದುರ್ದೈವ ಅಂತಿದ್ದಾರೆ. ಇಂತಹ ಕೆಟ್ಟ ಪರಿಸ್ಥಿತಿ ಬಂದಿದ್ದು ರಾಜ್ಯದ ಜನರ ದೌಭಾರ್ಗ್ಯ. ಈ ಸ್ಥಿತಿಯಲ್ಲಿ ಮುಖ್ಯಮಂತ್ರಿ ಅವರನ್ನು ನೋಡಿದರೆ ನಮಗೆ ಅಯ್ಯೋ ಅನಿಸುತ್ತದೆ. ಸರಕಾರದ ಬಳಿ ದುಡ್ಡಿಲ್ಲ. ಹಣಕಾಸಿನ ನಿರ್ವಹಣೆಯಲ್ಲಿ ಸಿದ್ದರಾಮಯ್ಯ ಸೋತಿದ್ದಾರೆ. ಶಾಸಕರು ಅಸಹಾಯಕರಾಗಿದ್ದಾರೆ. ಮೊದಲ ಬಾರಿ ಗೆದ್ದು ಬಂದ ಶಾಸಕರು ಅನುದಾನ ಇಲ್ಲದೆ ಆಕ್ರೋಶಗೊಂಡಿದ್ದಾರೆ. ವಕ್ಪ್ ವಿಚಾರದಲ್ಲಿ ರೈತರನ್ನ ಬೀದಿಗೆ ತಂದಿದ್ದಾರೆ. ಈಗ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಶಾಸಕ ರಮೇಶ್ ಜಾರಕಿಹೊಳಿ ವಿರೋಧ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ ಅವರು ಪ್ರೀತಿ ತೋರಿಸುತ್ತಿದ್ದಾರೆ ಎನ್ನುವುದು ಮುಖ್ಯ. ಉದ್ದೇಶ ಏನೇ ಇರಲಿ ಆದರೆ ದುರುದ್ದೇಶ ಇರಲು ಸಾಧ್ಯವಿಲ್ಲ. ಅಲ್ಪ ಸ್ವಲ್ಪ ಗೊಂದಲ ಇರುತ್ತದೆ. ರಾಷ್ಟ್ರೀಯ ಪಕ್ಷದಲ್ಲಿ ಇದೆಲ್ಲಾ ಸಾಮಾನ್ಯ ಎಂದು ವಿಜಯೇಂದ್ರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.