ಬೆಳಗಾವಿಯ 12 ಜನ ಪತ್ರಕರ್ತರಿಗೆ ಪಾಸಿಟಿವ್
Team Udayavani, May 1, 2021, 7:02 PM IST
ಬೆಳಗಾವಿ: ಲೋಕಸಭಾ ಉಪ ಚುನಾವಣೆಯ ಮತ ಎಣಿಕೆ ಹಿನ್ನೆಲೆಯಲ್ಲಿ ಬೆಳಗಾವಿಯ ಸುಮಾರು 70 ಜನ ಮಾಧ್ಯಮ ಪ್ರತಿನಿಧಿಗಳ ಕೋವಿಡ್ ಪರೀಕ್ಷೆ (ಆರ್.ಟಿ-ಪಿಸಿಆರ್) ಮಾಡಿದಾಗ ಅದರಲ್ಲಿ 12 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, ಮಾಧ್ಯಮ ವಲಯದಲ್ಲಿ ಆತಂಕ ಸೃಷ್ಟಿಸಿದೆ.
12 ಜನರ ಪೈಕಿ 11 ಜನರಿಗೆ ಯಾವುದೇ ರೋಗ ಲಕ್ಷಣಗಳಿಲ್ಲ. ಈ 12 ಜನರಲ್ಲಿ ಪತ್ರಕರ್ತರು ಹಾಗೂ ಕ್ಯಾಮರಾಮೆನ್‌ಗಳೂ ಇದ್ದಾರೆ. ಸರ್ಕಾರದ ಮಾರ್ಗಸೂಚಿ ಪ್ರಕಾರ ಅವರು ಹೋಮ್ ಐಸೋಲೇಷನ್ ಇರಬೇಕಾಗುತ್ತದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಇವರನ್ನು ಸಂಪರ್ಕಿಸಿ ಔಷೋಧಪಚಾರ ಮಾಡುತ್ತಿದ್ದಾರೆ. ವಾರ್ತಾ ಇಲಾಖೆಯ ವಾಚ್‌ಮನ್‌ಗೂ ಸೋಂಕು ದೃಢಪಟ್ಟಿದೆ.
ಇದನ್ನೂ ಓದಿ : ಕಾರ್ಗೋ ವಿಮಾನದಲ್ಲಿ ಹೈದರಾಬಾದ್ ಗೆ ಬಂದಿಳಿದ ರಷ್ಯಾದ ಸ್ಫುಟ್ನಿಕ-v ಲಸಿಕೆ
ಈಗಾಗಲೇ ಈ ವಿಷಯವನ್ನು ವಾರ್ತಾ ಇಲಾಖೆ ಉಪನಿರ್ದೇಶಕ ಗುರುನಾಥ ಕಡಬೂರ ಅವರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಚಿಕಿತ್ಸೆಗೆ ಸಂಬಂಧಿಸಿದಂತೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಮನೆಯಲ್ಲಿ ಪ್ರತ್ಯೇಕವಾಗಿ ಇರಲು ಸಾಧ್ಯವಿಲ್ಲದವರಿಗೆ ಖಾಸಗಿ ಹೋಟೆಲ್‌ನಲ್ಲಿ ಐಸೋಲೇಷನ್‌ಗೆ ವ್ಯವಸ್ಥೆ ಕಲ್ಪಿಸಲು ಪಬ್ಲಿಕ್ ಟಿವಿಯ ವರದಿಗಾರ ದಿಲೀಪ್ ಕುರಂದವಾಡೆ ಮುಂದಾಗಿದ್ದಾರೆ. ಕೆಲವರು ಮನೆಯಲ್ಲಿಯೇ ಇದ್ದುಕೊಂಡು ಔಷಧೋಪಚಾರ ಪಡೆದುಕೊಳ್ಳುತ್ತಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಮನೆಗಳಿಗೆ ತೆರಳಿ ಔಷಧ ಸಾಮಗ್ರಿಗಳನ್ನು ನೀಡಲಿದ್ದಾರೆ.
ಸಮಾಜದ ಹಿತರಕ್ಷಣೆಗೆ ಹಗಲಿರುಳು ದುಡಿಯುವ, ತಮ್ಮ ಆರೋಗ್ಯವನ್ನೂ ಲೆಕ್ಕಿಸದೇ ಮುನ್ನುಗ್ಗುವ ಮಾಧ್ಯಮ ಸ್ನೇಹಿತರು ಈಗ ಸೋಂಕಿಗೆ ತುತ್ತಾಗಿರುವುದು ಎಲ್ಲರಿಗೂ ಬೇಸರದ ಸಂಗತಿಯಾಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಾವೆಲ್ಲರೂ ಅವರ ನೆರವಿಗೆ ನಿಲ್ಲೋಣ. ಎಲ್ಲರ ಕುಟುಂಬದ ಪರಿಸ್ಥಿತಿ ಒಂದೇ ತೆರನಾಗಿರುವುದಿಲ್ಳ. ಅನೇಕ ಜನರು ತಮ್ಮ ನೋವು ನುಂಗಿಕೊಂಡು ನಗುತ್ತಿರುತ್ತಾರೆ. ಅಂಥವರಿಗೆ ನಿಮ್ಮ ಜತೆ ನಾವಿದ್ದೇವೆ ಎಂದು ಭರವಸೆ ಮೂಡಿಸಿ ಅವರಿಗೆ ಸೂಕ್ತ ಔಷಧೋಪಚಾರ ಒದಗಿಸಿ ಅವರ ಆತ್ಮಸ್ಥೈರ್ಯವನ್ನು ಹೆಚ್ವಿಸೋಣ ಎಂದು ಗುರುನಾಥ ಕಡಬೂರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.