ಕೋರೆಯಂತಹ ರಾಜಕಾರಣಿಗಳು ಇರುವಾಗ ಬೆಳಗಾವಿ ಅಲುಗಾಡಿಸಲು ಮಹಾರಾಷ್ಟ್ರಕ್ಕೆ ಸಾಧ್ಯವೇ ?
ಡಾ. ಪ್ರಭಾಕರ ಕೋರೆಗೆ ಕೆಂಗಲ್ ಹನುಮಂತಯ್ಯ ಪ್ರಶಸ್ತಿ ಪ್ರದಾನ
Team Udayavani, Feb 2, 2021, 8:39 PM IST
ಬೆಳಗಾವಿ: ದ್ರಾವಿಡ-ಆರ್ಯ ಸಂಸ್ಕೃತಿ ಸಂಗಮ ಬೆಳಗಾವಿ. ಬೆಳಗಾವಿಯಲ್ಲಿ ಡಾ. ಪ್ರಭಾಕರ ಕೋರೆ ಅಂತಹ ಮೇರು ರಾಜಕಾರಣಿಗಳು ಇರುವಾಗ ಬೆಳಗಾವಿ ಅಲುಗಾಡಿಸಲು ಮಹಾರಾಷ್ಟ್ರಕ್ಕೆ ಸಾಧ್ಯವೇ ಎಂದು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಗದುಗಿನ ತೋಂಟದಾರ್ಯ ಜಗದ್ಗುರು ಶ್ರೀ ಡಾ.ಸಿದ್ದರಾಮೇಶ್ವರ ಸ್ವಾಮೀಜಿ ಗುಡುಗಿದರು.
ಇಲ್ಲಿಯ ಲಿಂಗರಾಜ ಮಹಾವಿದ್ಯಾಲಯದಲ್ಲಿ ಸೋಮವಾರ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ. ಪ್ರಭಾಕರ ಕೋರೆ ಅವರಿಗೆ ಕೆಂಗಲ್ ಹನುಮಂತಯ್ಯ ಸಂಸ್ಕೃತಿ ರಾಜ್ಯ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರುತ್ತದೆ ಎಂಬ ಭ್ರಮೆಯಲ್ಲಿರುವ ಮಹಾರಾಷ್ಟ್ರ ಸರ್ಕಾರ, ಅಂತಹ ಕೂಗಾಟದಲ್ಲಿ ಬೆಳಗಾವಿಯಲ್ಲಿ ತೊಡಗಿರುವ ಕೆಲ ನಾಡವಿರೋಧಿ ಸಂಘಟನೆಗಳು ಹಗಲುಗನಸು ಬಿಡಬೇಕು. ಅದು ಏಳೇಳು ಜನ್ಮದಲ್ಲಿ ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.
ಅಭಿನಂದನಾ ನುಡಿಗಳನ್ನಾಡಿದ ಹಿರಿಯ ಸಾಹಿತಿ ಡಾ. ಸರಜೂ ಕಾಟ್ಕರ, ಅಭಿವೃದ್ಧಿ ವಿಷಯದಲ್ಲಿ ಬೆಳಗಾವಿ ತಾತ್ಸಾರ ಆಗಲು ಇಲ್ಲಿನ ರಾಜಕಾರಣಿಗಳಲ್ಲಿ ಇರುವ ಒಡಕು ಹಾಗೂ ಗಟ್ಟಿ ನಾಯಕತ್ವದ ಕೊರತೆ ಕಾರಣ. ಅಭಿವೃದ್ಧಿ ಮತ್ತು ನಾಡಿನ ಹಿತಕ್ಕಾಗಿ ಇಲ್ಲಿನ ರಾಜಕಾರಣಿಗಳು ಒಂದಾಗಬೇಕಿದೆ. ಅದಕ್ಕೆ ನಾಯಕತ್ವದ ಕೊರತೆ ಇದೆ. ಬೆಳಗಾವಿ ಜನರ ದನಿಗೆ ಶಕ್ತಿ ಕೊಡಲು ಸರ್ವಪಕ್ಷಗಳ ನಾಯಕನ ಅಗತ್ಯವಿದೆ. ಪಕ್ಷಭೇದ ಹೊರತಾಗಿ ಬೆಳಗಾವಿ ಅಭಿವೃದ್ಧಿಗೆ ಡಾ. ಪ್ರಭಾಕರ ಕೋರೆ ನಾಯಕತ್ವ ವಹಿಸಬೇಕು ಎಂದರು.
ಡಾ. ಪ್ರಭಾಕರ ಕೋರೆಯವರು ಬೆಳಗಾವಿ ಮತ್ತು ರಾಜ್ಯದ ಗಡಿ ಭಾಗಗಳಲ್ಲಿ ಕನ್ನಡ ಮರಾಠಿ ಸಂಸ್ಕೃತಿಯ ಕೊಂಡಿಯಾಗಿ ಬೆಳೆದವರು. ಕನ್ನಡ ಮತ್ತು ಇಲ್ಲಿನ ಸಂಸ್ಕೃತಿಯ ದುಪ್ಪಟ್ಟು ಬೆಳವಣಿಗೆ ಮತ್ತು ಬೆಳಗಾವಿ ಕರ್ನಾಟಕದಲ್ಲಿ ಉಳಿಯಲು ಡಾ. ಕೋರೆ ಮತ್ತು ಡಾ.ಸಿದ್ಧರಾಮ ಸ್ವಾಮೀಜಿ ಕಾರಣ ಎಂದರು. ಪ್ರಶಸ್ತಿ ಸ್ವೀಕರಿಸಿ ಡಾ. ಪ್ರಭಾಕರ ಕೋರೆ ಮಾತನಾಡಿ, ಕರ್ನಾಟಕದಲ್ಲಿ ವಾಸಿಸುವ ಎಲ್ಲ ಕನ್ನಡಿಗರ ಮನಸ್ಸು ಒಂದಾಗಬೇಕಿದೆ. ಮೂವತ್ತು ಜಿಲ್ಲೆಗಳ ಸಂಸ್ಕೃತಿ ಮತ್ತು ಸ್ವಾಭಿಮಾನ ಒಂದಾದಾಗ ಕರ್ನಾಟಕ ಏಕೀಕರಣದ ಆಶಯ ಇನ್ನೂ ಗಟ್ಟಿಗೊಳ್ಳುತ್ತದೆ ಎಂದರು.
ಇದನ್ನೂ ಓದಿ :ವೃಂದ-ನೇಮಕಾತಿ ಕರಡು ನಿಯಮ ತಿದ್ದುಪಡಿಗೆ ವಿರೋಧಿ ಡಿಸಿಎಂ ಕಾರಜೋಳಗೆ ಮನವಿ
ಕಸಾಪ ಅಧ್ಯಕ್ಷ ಡಾ. ಮನು ಬಳಿಗಾರ ಅಧ್ಯಕ್ಷತೆ ವಹಿಸಿ ಮಾತನಾಡಿ,ಅಭಿವೃದ್ಧಿಗಾಗಿ ಪ್ರತಿಭಟನೆಗಳು ಎಷ್ಟೇ ಉಗ್ರವಾಗಿ ನಮ್ಮ ರಾಜ್ಯದಲ್ಲಿ ನಡೆಯಲಿ. ಆದರೆ ರಾಜ್ಯದ ಒಡಕಿನ ಮಾತುಗಳು ಎಂದೂ ಯಾವ ಭಾಗದಿಂದಲೂ ಕೇಳಿ ಬರಬಾರದು. ಕರ್ನಾಟಕ ಏಕೀಕರಣಕ್ಕೆ ಹಲವಾರು ಮಹನೀಯರು ದುಡಿದು ಅಳಿದಿದ್ದಾರೆ. ಇಂದು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಅಭಿವೃದ್ಧಿ ಮರೀಚಿಕೆ ಆಗಿದೆ. ಸರ್ಕಾರಗಳು ಸಂಪೂರ್ಣ ನಿರ್ಲಕ್ಷಿಸಿವೆ. ಸರ್ಕಾರ ಈ ಬಗ್ಗೆ ಗಮನ ಹರಿಸಿ ಈ ಭಾಗದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.