ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಿಂದ ರೈತರಿಗೆ ಅನುಕೂಲ: ಅಣ್ಣಾಸಾಹೇಬ ಜೊಲ್ಲೆ
Team Udayavani, Jul 9, 2022, 12:40 PM IST
ಚಿಕ್ಕೋಡಿ: ಮಳೆ ನೀರು ಹರಿದು ಜಲಾಶಯ ಸೇರುವುದರಿಂದ ನೀರಿನ ಜೊತೆ ಮಣ್ಣು ಹೋಗುತ್ತದೆ. ಇದನ್ನು ತಡೆಯಲು ಪ್ರಧಾನಮಂತ್ರಿಗಳು ಸಮಗ್ರ ಕೃಷಿ ಸಿಂಚಾಯಿ ಯೋಜನೆ ಜಾರಿ ಮಾಡಿದ್ದಾರೆ. ನೀರು ತಡೆಯುವುದರಿಂದ ರೈತರ ಬಾವಿ,ಬೋರವೆಲ್ ನೀರಿನ ಅಂತರ್ಜಲ ಮಟ್ಟ ಹೆಚ್ಚಳವಾಗುತ್ತದೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.
ತಾಲೂಕಿನ ತೋರಣಹಳ್ಳಿ ಗ್ರಾಮದಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ಜಲಾನಯನ ಅಭಿವೃದ್ಧಿ ಘಟಕದಡಿ ಜಲಾನಯನ ಯೋಜನೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕೃಷಿ ಸಿಂಚಸಯಿ ಯೋಜನೆಗೆ 13.62 ಕೋಟಿ ರೂ ಮಂಜೂರು ಆಗಿದೆ. ಈ ಯೋಜನೆಯನ್ನು ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ವಿಸ್ತರಿಸಲು ಪ್ರಯತ್ನ ಮಾಡಲಾಗುತ್ತದೆ. ಕಿಸಾನ್ ಸಮ್ಮಾನ್ ಯೋಜನೆ 25 ಕೋಟಿ ರೈತರಿಗೆ ಅನುಕೂಲವಾಗಿದೆ. ಕೇಂದ್ರ ಸರಕಾರ ಜಾರಿ ಮಾಡಿರುವ ಯೋಜನೆಗಳು ಪ್ರತಿಯೊಬ್ಬರಿಗೆ ಮುಟ್ಟಿಸುವ ಕೆಲಸವನ್ನು ಸರಕಾರ ಮಾಡುತ್ತದೆ ಎಂದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಮಾತನಾಡಿ, ಸಮಗ್ರ ಜಲಾನಯನ ಮೂಲಕ ನಾಲ್ಕು ಗ್ರಾಮ ಪಂಚಾಯತಿ ವ್ಯಾಪ್ತಿಯ 6100 ಹೆಕ್ಟರ ಪ್ರದೇಶದಲ್ಲಿ ಬದು ನಿರ್ಮಾನ ಮಾಡಲಾಗುತ್ತದೆ. ಓಡುವ ನೀರನ್ನು ತಡೆಯಬೇಕು. ನೀರು ಇಂಗುವ ಹಾಗೇ ಮಾಡಿದರೇ ಮಣ್ಣು ಫಲವತ್ತೆ ಪಡೆಯುತ್ತದೆ. ಇದರಿಂದ ರೈತರಿಗೆ ಅನುಕೂಲವಾಗುತ್ತದೆ. ಮಣ್ಣು ರೈತನ ಕಣ್ಣು,ಮಣ್ಣು ಸಂರಕ್ಷಣೆ ಮಾಡಿದರೆ ರೈತನಿಗೆ ಅನುಕೂಲವಾಗುತ್ತದೆ. ಮಳೆ ನೀರು ಹರಿದು ಹೋಗದಂತೆ ತಡೆದು ನಿಲ್ಲಿಸುವುದಕ್ಕೆ ಸಮಗ್ರ ಜಲಾನಯನ ಯೋಜನೆಯನ್ನು ಪ್ರಧಾನಿ ಜಾರಿಗೆ ತಂದಿದ್ದಾರೆ ಎಂದರು.
ಹೆಸ್ಕಾಂ ನಿರ್ದೇಶಕ ಮಹೇಶ ಭಾತೆ ಮಾತನಾಡಿ, ಸಂಸದ ಅಣ್ಣಾಸಾಹೇಬ ಜೊಲ್ಲೆಯವರ ವಿಶೇಷ ಪ್ರಯತ್ನದಿಂದ ಪ್ರಧಾನಮಂತ್ರಿ ಸಿಂಚಾಯಿ ಯೋಜನೆ ಜಾರಿಗೆ ಬಂದಿದೆ. ರೈತರು ಆಸಕ್ತಿಯಿಂದ ಯೋಜನೆಯ ಲಾಭ ಪಡೆಯಬೇಕು ಎಂದರು.
ಕೃಷಿ ಇಲಾಖೆ ಉಪನಿರ್ದೇಶಕ ಎಲ್.ಐ.ರೂಡಗಿ. ಹೆಸ್ಕಾಂ ನಿರ್ದೇಶಕ ಮಹೇಶ ಭಾತೆ, ನ್ಯಾಯವಾದಿ ಅಶೋಕ ಹರಗಾಪೂರೆ, ಬಿಜೆಪಿ ಕೃಷಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ದುಂಡಪ್ಪ ಬೆಂಡವಾಡೆ, ರಾಮನಗೌಡ ಪಾಟೀಲ, ಸಹಾಯಕ ಕೃಷಿ ನಿರ್ದೇಶಕ ಮಂಜೂನಾಥ ಜನಮಟ್ಟಿ, ರಾಮಗೌಡ ಸಣ್ಣಲಚ್ಚಪ್ಪಗೋಳ, ವಿಜಯ ಕೋಠಿವಾಲೆ, ಬಸವರಾಜ ಮಾಳಗೆ, ಎಪಿಎಂಸಿ ಉಪಾಧ್ಯಕ್ಷ ರಾಯಗೌಡ ಕೆಳಗಿನಮನಿ,ಕೃಷ್ಣಪ್ಪ ಜೋಗಿ, ಗ್ರಾ.ಪಂ ಅಧ್ಯಕ್ಷ ಸುರೇಶ ಘರಬುಡೆ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.