ಸಿಇಟಿ ಪರೀಕ್ಷೆಗೆ ಪೂರ್ಣಗೊಂಡ ಸಿದ್ಧತೆ
Team Udayavani, Apr 27, 2019, 12:37 PM IST
ಬೆಳಗಾವಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ವೃತ್ತಿಪರ ಕೋರ್ಸುಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯು ಏ.29 ಹಾಗೂ 30 ರಂದು ನಡೆಯಲಿದ್ದು, ಪರೀಕ್ಷಾರ್ಥಿಗಳು ಕ್ಯಾಲ್ಕ್ಯುಲೇಟರ್, ಕೈಗಡಿಯಾರ ಅಥವಾ ಮೊಬೈಲ್ ´ೋನ್‌ಗಳನ್ನು ಪರೀಕ್ಷಾ ಕೊಠಡಿಗೆ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಬೂದೆಪ್ಪ ಹೆಚ್.ಬಿ. ಹೇಳಿದರು.
ಸಾಮಾನ್ಯ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲಿ ಕಡ್ಡಾಯವಾಗಿ ಗೋಡೆ ಗಡಿಯಾರ ಅಳವಡಿಸಬೇಕು; ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಸೂಕ್ತ ಗಾಳಿ ಮತ್ತು ಬೆಳಕಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಳಗಾವಿ, ಚಿಕ್ಕೋಡಿ, ಗೋಕಾಕ ಮತ್ತು ಅಥಣಿ ನಾಲ್ಕು ತಾಲೂಕುಗಳಲ್ಲಿ ಒಟ್ಟು 22 ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದ್ದು, ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ಒಟ್ಟು 22 ಜನ ಹಿರಿಯ ಪ್ರಾಚಾರ್ಯರನ್ನು ಪ್ರಶ್ನೆಪತ್ರಿಕಾ ಪಾಲಕ (ಕಸ್ಟೋಡಿಯನ್) ಆಗಿ ನೇಮಿಸಲಾಗುವುದು. ಪ್ರತಿ ಕೇಂದ್ರಕ್ಕೆ ಇಬ್ಬರಂತೆ ಒಟ್ಟು 44 ಉಪನ್ಯಾಸಕರನ್ನು ವಿಶೇಷ ಜಾಗೃತ ದಳದ ಅಧಿಕಾರಿಗಳನ್ನಾಗಿ ಈಗಾಗಲೇ ನಿಯೋಜಿಸಲಾಗಿದೆ ಎಂದರು.
ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಳತೆಯಲ್ಲಿ ಪರೀಕ್ಷೆ ವೇಳೆಯಲ್ಲಿ 144 ಕಲಂ ಜಾರಿ ಮಾಡಲಾಗುವುದು. ಪ್ರಶ್ನೆಪತ್ರಿಕೆ ಮತ್ತು ಒ.ಎಂ.ಆರ್. ಷೀಟ್‌ಗಳನ್ನು ಸೂಕ್ತ ಭದ್ರತೆಯೊಂದಿಗೆ ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಿ, ವಿತರಿಸಲು ಪ್ರಶ್ನೆಪತ್ರಿಕಾ ಪಾಲಕರು, ಪ್ರಾಚಾರ್ಯರು, ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ತಹಶೀಲ್ದಾರರು ಎಚ್ಚರಿಕೆಯಿಂದ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.
ಪದವಿಪೂರ್ವ ಶಿಕ್ಷಣ ಇಲಾಖೆಯ ಚಿಕ್ಕೋಡಿ ಉಪ ನಿರ್ದೇಶಕ ಕೆ.ಎನ್.ಸಂಗಮ ಮಾತನಾಡಿ, ಜಿಲ್ಲೆಯ ನಾಲ್ಕು ತಾಲೂಕು ಕೇಂದ್ರಗಳ ಒಟ್ಟು 22 ಪರೀಕ್ಷಾ ಕೇಂದ್ರಗಳಲ್ಲಿ 9782 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಮಾಹಿತಿ ನೀಡಿದರು.
29 ರಂದು ಬೆಳಗ್ಗೆ 10.30 ರಿಂದ 11.50 ರವರೆಗೆ ಜೀವಶಾಸ್ತ್ರ; ಮಧ್ಯಾಹ್ನ 2.30ರಿಂದ 3.50 ರವರೆಗೆ ಗಣಿತ. 30 ರಂದು ಬೆಳಗ್ಗೆ 10.30 ರಿಂದ 11.50 ರವರೆಗೆ ಭೌತಶಾಸ್ತ್ರ; ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆ ನಡೆಯಲಿದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡಗುಂಟಿ, ಪರೀಕ್ಷೆಗೆ ನಿಯೋಜನೆಗೊಂಡಿರುವ ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.