ಜಿಲ್ಲೆಯಲ್ಲಿ ದೇಶಿ ವಿಮಾನ ಸೇವೆಗೆ ಸಿದ್ಧತೆ


Team Udayavani, May 25, 2020, 11:32 AM IST

ಜಿಲ್ಲೆಯಲ್ಲಿ ದೇಶಿ ವಿಮಾನ ಸೇವೆಗೆ ಸಿದ್ಧತೆ

ಬೆಳಗಾವಿ: ದೇಶಾದ್ಯಂತ ಕೋವಿಡ್ ವೈರಸ್‌ ಹಾವಳಿ ತೀವ್ರವಾಗುತ್ತಿರುವ ಬೆನ್ನಲ್ಲೇ ಮೇ 25ರಿಂದ ದೇಶೀಯ ವಿಮಾನ ಸೇವೆ ಆರಂಭವಾಗಲಿದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಇದಕ್ಕಾಗಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಪ್ರಯಾಣಿಕರ ಆಗಮನ ಹಾಗೂ ನಿರ್ಗಮನ ಸಂದರ್ಭದಲ್ಲಿ ವಿಮಾ ನಿಲ್ದಾಣದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ವಿಮಾನ ನಿಲ್ದಾಣದ ನಿರ್ದೇಶಕ ರಾಜೇಶಕುಮಾರ ಮೌರ್ಯ ರವಿವಾರ ಪರಿಶೀಲನೆ ನಡೆಸಿದರು.

ಮೇ 25ರಿಂದ ಐದು ವಿಮಾನ ಸಂಸ್ಥೆಗಳ ಪೈಕಿ ನಾಲ್ಕು ಸಂಸ್ಥೆಗಳು ವಿಮಾನ ಸಂಚಾರ ಸೇವೆ ಆರಂಭಿಸಲಿವೆ. ಬೆಳಗ್ಗೆ 8:40ಕ್ಕೆ ಮೊದಲ ವಿಮಾನ ಬೆಂಗಳೂರಿನಿಂದ ಬೆಳಗಾವಿಗೆ ಬರಲಿದ್ದು, ಸಂಜೆ 6:50ಕ್ಕೆ ಇಲ್ಲಿಂದ ಹೈದರಬಾದ್‌ಗೆ ಕೊನೆಯ ವಿಮಾನ ಸಂಚರಿಸಲಿದೆ. ಸ್ಟಾರ್‌ ಏರ್‌ ಸಂಸ್ಥೆಯು ಅಹ್ಮದಾಬಾದ್‌, ಬೆಂಗಳೂರು, ಸ್ಪೈಸ್‌ ಜೆಟ್‌ ದಿಂದ ಹೈದರಾಬಾದ್‌-ಬೆಳಗಾವಿ, ಅಲಯನ್ಸ್‌ ಸಂಸ್ಥೆಯು ಪುಣೆ ಹಾಗೂ ಟ್ರಾಜೆಟ್‌ ಸಂಸ್ಥೆಯು ಮೈಸೂರು ಹಾಗೂ ಹೈದರಾಬಾದ್‌ ನಗರಗಳಿಗೆ ವಿಮಾನ ಸೇವೆ ಆರಂಭಿಸಲಿವೆ. ಮೇ 26ರಿಂದ ಇಂಡಿಗೋ ಸಂಸ್ಥೆಯು ಹೈದರಾಬಾದ್‌ಗೆ ಸಂಚಾರ ಆರಂಭ ಮಾಡಲಿದೆ.

ಹೊರ ರಾಜ್ಯಗಳಿಂದ ಬರುವ ಹಾಗೂ ಇಲ್ಲಿಂದ ತಮ್ಮ ಊರಿಗೆ ತೆರಳುತ್ತಿರುವ ಪ್ರಯಾಣಿಕರ ಸುರಕ್ಷತೆ ಹಾಗೂ ಆರೋಗ್ಯ ಮುಖ್ಯ. ಈ ನಿಟ್ಟಿನಲ್ಲಿ ವಿಮಾನ ನಿಲ್ದಾಣದಲ್ಲಿ ಎಲ್ಲ ರೀತಿಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರಯಾಣಿಕರ ಥರ್ಮಲ್‌ ಚೆಕ್‌ ಅಫ್‌ ಕಡ್ಡಾಯವಾಗಿ ಆಗಲಿದೆ ಎಂದು ರಾಜೇಶಕುಮಾರ ಮೌರ್ಯ ಹೇಳಿದರು.

ವಿಮಾನದಲ್ಲಿ ಪ್ರಯಾಣ ಮಾಡುವವರು ಕಡ್ಡಾಯವಾಗಿ ಆರೋಗ್ಯ ಸೇತು ಆ್ಯಪ್‌ ಹೊಂದಿರಬೇಕು. ಇದರಲ್ಲಿ ಹಸಿರು ನಿಶಾನೆ ತೋರಿಸಿದರೆ ಮಾತ್ರ ಅವರ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಒಂದು ವೇಳೆ ಪ್ರಯಾಣಿಕರು ಸ್ಮಾರ್ಟ್‌ಫೂನ್‌ ಹೊಂದಿರದೇ ಇದ್ದರೆ ಅವರು ಸ್ವಯಂ ಘೋಷಣಾ ಪತ್ರ ಬರೆದುಕೊಡಬೇಕು ಎಂದು ಮೌರ್ಯ ತಿಳಿಸಿದರು.

ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ವಿಮಾನ ನಿಲ್ದಾಣದಲ್ಲಿ ಎಲ್ಲ ಸಿದ್ಧತೆ ಮಾಡಲಾಗಿದೆ. ಪ್ರಯಾಣಿಕರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಪ್ರಯಾಣಿಕರ ಆರೋಗ್ಯ ತಪಾಸಣೆಗೆ ವೈದ್ಯಕೀಯ ಸಿಬ್ಬಂದಿಗಳನ್ನು ಸಹ ನಿಯೋಜಿಸಲಾಗಿದೆ.

ಟಾಪ್ ನ್ಯೂಸ್

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.