ಕೋವಿಡ್ ಮಾರ್ಗಸೂಚಿ ಪಾಲಿಸಲು ಸಿದ್ಧತೆ
ಸರಕಾರದ ಮಾರ್ಗಸೂಚಿ ಪಾಲಿಸುವುದರೊಂದಿಗೆ ಅಧಿವೇಶನ ನಡೆಸಬೇಕಿದೆ.
Team Udayavani, Nov 24, 2021, 6:19 PM IST
ಬೆಳಗಾವಿ: ಡಿಸೆಂಬರ್‌ನಲ್ಲಿ ನಡೆಯಲಿರುವ ವಿಧಾನಮಂಡಳದ ಅಧಿವೇಶನವನ್ನು ಕೋವಿಡ್ ಮಾರ್ಗಸೂಚಿ ಪಾಲನೆಯ ಜೊತೆಗೆ ವಸತಿ, ಸಾರಿಗೆ ಹಾಗೂ ಊಟೋಪಾಹಾರ ಸೇರಿದಂತೆ ಯಾವುದೇ ರೀತಿಯ ಅನಾನುಕೂಲ ಆಗದಂತೆ ಜಾಗೃತಿ ವಹಿಸಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ್ ಅವರು ಸೂಚನೆ ನೀಡಿದರು.
ವಿಧಾನಮಂಡಳದ ಚಳಿಗಾಲದ ಅಧಿವೇಶನದ ಪೂರ್ವಸಿದ್ಧತೆ ಕುರಿತು ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲಾಕ್ ಡೌನ್ ಬಳಿಕ ಬಹುತೇಕ ಅತಿಥಿಗೃಹಗಳು, ಹೋಟೆಲ್ ಮತ್ತಿತರ ಕಡೆಗಳಲ್ಲಿ ಕೊಠಡಿಗಳು ಹೆಚ್ಚಿನ ಬಳಕೆ ಆಗಿರುವುದಿಲ್ಲ. ಆದ್ದರಿಂದ ಪ್ರತಿಯೊಂದನ್ನು ಪರಿಶೀಲಿಸಿ ಸ್ವತ್ಛತೆ ಮತ್ತು ಸ್ಯಾನಿಟೆ„ಜೇಷನ್ ಕೆಲಸ ಆರಂಭಿಸಬೇಕು ಎಂದರು.
ಸಮಯದ ಅಭಾವ ಹಾಗೂ ಚುನಾವಣೆ ಸಹ ನಡೆಯುತ್ತಿರುವುದರಿಂದ ಸಾರಿಗೆ, ವಸತಿ, ಶಿಷ್ಟಾಚಾರ ಪಾಲನೆ, ಊಟೋಪಹಾರ ಮತ್ತಿತರ ಸಿದ್ಧತೆಗಳನ್ನು ತುರ್ತಾಗಿ ಮಾಡಿಕೊಳ್ಳುವ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿದರು.
ವಸತಿಗೆ ಸಂಬಂಧಿಸಿದಂತೆ ಕಳೆದ ಅಧಿವೇಶನಗಳ ಸಂದರ್ಭದಲ್ಲಿ ಎದುರಾಗಿರುವ ಅನಾನುಕೂಲತೆಗಳನ್ನು ಆಧರಿಸಿ ಅವುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು. ಸುರಕ್ಷತಾ ಕ್ರಮಗಳು, ಪಾಕಿಂìಗ್ ವ್ಯವಸ್ಥೆ, ಮೊಬೈಲ್ ಹಾಗೂ ತಾತ್ಕಾಲಿಕ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರು, ತುರ್ತು ವೈದ್ಯಕೀಯ ಸೌಲಭ್ಯಗಳ ಬಗ್ಗೆಯೂ ಸಂಬಂಧಿಸಿದ ಅಧಿಕಾರಿಗಳು ಪೂರ್ವಭಾವಿ ಸಭೆಗಳನ್ನು ನಡೆಸಿ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸರಕಾರದ ಮಾರ್ಗಸೂಚಿ ಪಾಲಿಸುವುದರೊಂದಿಗೆ ಅಧಿವೇಶನ ನಡೆಸಬೇಕಿದೆ.ಅಗತ್ಯ ಮಾಸ್ಕ್, ಸ್ಯಾನಿಟೈಸರ್ ಒದಗಿಸುವುದರ ಜೊತೆಗೆ ಸುರಕ್ಷಿತ ಅಂತರ ಕಾಪಾಡುವುದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದರು.
ಅಧಿವೇಶನದ ವಿಶೇಷ ಅಧಿಕಾರಿ ಡಾ.ಸುರೇಶ್ ಇಟ್ನಾಳ ಮಾತನಾಡಿ, ಈ ಹಿಂದೆ ನಡೆದಿರುವ ಅಧಿವೇಶನದಲ್ಲಿ ಉಂಟಾಗಿರುವ ಕೆಲ ಅನಾನುಕೂಲಗಳನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗುವುದು ಎಂದು ಹೇಳಿದರು. ಜಿಲ್ಲಾ ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್ ಮಾತನಾಡಿ, ಈ ಬಾರಿ ಪೊಲೀಸ್ ಸಿಬ್ಬಂದಿ ವಸತಿಗಾಗಿ ಪ್ರತ್ಯೇಕವಾಗಿ ತಾತ್ಕಾಲಿಕ ಟೌನ್‌ಷಿಪ್ ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಡಾ| ಶಂಕರಪ್ಪ ವಣಕ್ಯಾಳ, ಮಹಾನಗರ ಪಾಲಿಕೆ ಆಯುಕ್ತ ಡಾ.ರುದ್ರೇಶ್ ಘಾಳಿ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ, ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಬುಡಾ ಆಯುಕ್ತ ಪ್ರೀತಂ ನಸಲಾಪುರೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಸಿ.ಬಿ.ಕೊಡ್ಲಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಸಂಜೀವಕುಮಾರ್ ಹುಲಕಾಯಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.