ತುಳು ಭಾಷೆ 8ನೇ ಪರಿಚ್ಛೇದಕ್ಕೆ ಸೇರಿಸಲು ಖಾಸಗಿ ನಿರ್ಣಯ
Team Udayavani, Nov 13, 2017, 7:20 AM IST
ಬೆಳಗಾವಿ: ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಖಾಸಗಿ ನಿರ್ಣಯವೊಂದನ್ನು ರಾಜ್ಯ ವಿಧಾನಸಭೆಯಲ್ಲಿ ಮಂಡಿಸಲು ಕೋರಿ ಜೆಡಿಎಸ್ ಶಾಸಕ ಕೆ.ಗೋಪಾಲಯ್ಯ ವಿಧಾನಸಭಾಧ್ಯಕ್ಷರಿಗೆ ಪತ್ರ ನೀಡಿದ್ದಾರೆ.
ಕರಾವಳಿ ಭಾಗದಲ್ಲಿ ಹೆಚ್ಚು ಪ್ರಚಲಿತವಾಗಿರುವ ತುಳು ಅತ್ಯಂತ ಪ್ರಾಚೀನ ದ್ರಾವಿಡ ಭಾಷೆಯಾಗಿದ್ದು, ಸುಮಾರು 25 ಲಕ್ಷಕ್ಕೂ ಅಧಿಕ ಮಂದಿ ಇದನ್ನು ಬಳಸುತ್ತಿದ್ದಾರೆ. ಕರ್ನಾಟಕ ಹಾಗೂ ಗಡಿ ಭಾಗದ ಕಾಸರಗೋಡಿನ ಜನರು ಈ ಭಾಷೆಯನ್ನು ತಮ್ಮ ಮಾತೃಭಾಷೆಯನ್ನಾಗಿ ಮಾತನಾಡುತ್ತಾರೆ. ಈ ಪ್ರಾಚೀನ ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಿ ಈ ಭಾಷೆಯಲ್ಲಿ ಸಂಶೋಧನೆ ಹಾಗೂ ಇದರ ಬಳಕೆಗೆ ಅಧಿಕೃತ ಮನ್ನಣೆ ದೊರಕಿಸುವುದು ಅವಶ್ಯಕ.
ಆದ್ದರಿಂದ ಇದಕ್ಕೆ ಸಂಬಂಧಪಟ್ಟಂತೆ ಸಂವಿಧಾನ ತಿದ್ದುಪಡಿಯನ್ನು ಸಂಸತ್‌ನಲ್ಲಿ ಮಂಡಿಸುವುದು ಸಮಂಜಸ. ಹಲವಾರು ವರ್ಷಗಳಿಂದ ಈ ಬೇಡಿಕೆ ಇದ್ದು ಇದಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ. ಹೀಗಾಗಿ, ಈ ಖಾಸಗಿ ನಿರ್ಣಯ ಮಂಡಿಸಲು ಅವಕಾಶ ನೀಡಲು ಕೋರುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಸಾಮಾನ್ಯವಾಗಿ ಅಧಿವೇಶನ ಸಂದರ್ಭದಲ್ಲಿ ಪ್ರತಿ ಗುರುವಾರ ಖಾಸಗಿ ನಿರ್ಣಯ ಮಂಡಿಸಲು ಸದಸ್ಯರಿಗೆ ಅವಕಾಶವಿದೆ. ಎರಡು ವಾರ ಅಧಿವೇಶನ ನಡೆಯುವುದರಿಂದ ಈ ಕುರಿತ ನಿರ್ಣಯ ಮಂಡಿಸಲು ಅವಕಾಶ ಮಾಡಿಕೊಡಲಾಗುವುದು ಎಂದು ಹೇಳಲಾಗಿದೆ. ಇದರ ಜತೆಗೆ ಗೋಪಾಲಯ್ಯ ಅವರು ಕರ್ನಾಟಕದಲ್ಲಿ ನಡೆಯುವ ಬ್ಯಾಂಕಿಂಗ್, ಕೇಂದ್ರದ ಅಬಕಾರಿ ಸೇವೆ, ಸ್ಟಾಫ್ ಸೆಲೆಕ್ಷನ್ ಸೇವೆ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲೇ ತೆಗೆದುಕೊಳ್ಳಲು ಅವಕಾಶ ನೀಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಖಾಸಗಿ ನಿರ್ಣಯ ಮಂಡಿಸಲು ಅನುಮತಿ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Oscars 2025: ಹೀನಾಯವಾಗಿ ಸೋತರೂ ʼಆಸ್ಕರ್ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.