Athani: ಗುಣಮಟ್ಟದ ಶಿಕ್ಷಣ ನೀಡುತ್ತಿವೆ ಖಾಸಗಿ ಶಾಲೆಗಳು- ಶಶಿಕುಮಾರ್‌

ದೇಶದಲ್ಲಿ 40ಮಿಲಿಯನ್‌ ಶಿಕ್ಷಕರ ಅವಶ್ಯಕತೆ ಇದೆ

Team Udayavani, Sep 4, 2023, 11:10 AM IST

Athani: ಗುಣಮಟ್ಟದ ಶಿಕ್ಷಣ ನೀಡುತ್ತಿವೆ ಖಾಸಗಿ ಶಾಲೆಗಳು- ಶಶಿಕುಮಾರ್‌

ಅಥಣಿ: ರಾಷ್ಟ್ರೀಯ ಶೀಕ್ಷಣ ನೀತಿ ಅನುಷ್ಠಾನವಾಗಲಿ. ಅದರ ಮೊದಲ ಮೂರು ಅಂಶಗಳನ್ನು ಮೊದಲು ಜಾರಿಗೆ ತರಲಿ. ಶಿಕ್ಷಣ
ಇಲಾಖೆಯ ಸಿ.ಆರ್‌.ಪಿ ಮತ್ತು ಬಿ.ಆರ್‌.ಸಿ ಗಳು ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಪೀಡಿಸುತ್ತಿದ್ದಾರೆ ಎಂದು ಖಾಸಗಿ ಅನುದಾನ ರಹಿತ ಶಾಲಾ ಶಿಕ್ಷಕರ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್‌ ಆರೋಪಿಸಿದರು.

ಅವರು ಸ್ಥಳೀಯ ವಿದ್ಯಾವರ್ಧಕ ಶಾಲೆಯಲ್ಲಿ ಅಥಣಿ ತಾಲೂಕು ಅನುದಾನ ರಹಿತ ಖಾಸಗಿ ಶಾಲಾ ಶಿಕ್ಷಕರಿಗೆ ವಿಚಾರ ಸಂಕಿರಣ ಹಾಗೂ ಗುರುಸೇವಾ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿ, ಕೋವಿಡ್‌ ಸಂದರ್ಭದಲ್ಲಿ ಅತಿ ಹೆಚ್ಚು ಸಮಸ್ಯೆ ಅನುಭವಿಸಿದ್ದು ಖಾಸಗಿ ಶಾಲಾ ಶಿಕ್ಷಕರೇ. ಈ ರಾಜ್ಯದಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಪಡೆಯುವ ಮಕ್ಕಳಿಗೆ ಪಾಠ ಮಾಡುತ್ತಿರುವುದು ಖಾಸಗಿ ಶಿಕ್ಷಣ ಸಂಸ್ಥೆಗಳು. ಎಲ್ಲ ಶಿಕ್ಷಕರು ತಮ್ಮ ವೃತ್ತಿಧರ್ಮವನ್ನು ಕಾಪಾಡಿಕೊಂಡು ಕೆಲಸ ಮಾಡಬೇಕು. ಸರಕಾರಿ ಶಾಲೆಗಳಲ್ಲಿ ಯಾವುದೇ ಸೌಲಭ್ಯ ಇಲ್ಲ ಎಂದರೂ ನಡೆಯುತ್ತವೆ ಆದರೆ ಖಾಸಗಿ ಶಾಲೆಗಳಿಗೆ ಮಾತ್ರ ಎಲ್ಲ ರೀತಿಯ
ವ್ಯವಸ್ಥೆ ಕೇಳಿ ಅ ಧಿಕಾರಿಗಳು ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ.

2017-18 ರ ನಂತರ ಹೊಸ ಶಾಲೆಗಳನ್ನು ಪ್ರಾರಂಭಿಸಲು ಹಲವಾರು ಕಠಿಣ ನಿಯಮಗಳನ್ನು ಹೇರಿ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ದೂರಿದರು. ರಾಷ್ಟ್ರೀಯ ಶಿಕ್ಷಣ ನೀತಿಯ ನಿಯಮಗಳ ಪ್ರಕಾರ ಕರ್ನಾಟಕದಲ್ಲಿ ಕೆಲಸ ನಿರ್ವಹಿಸಲು ಹೆಚ್ಚಿನ ಶಿಕ್ಷಕರ ಅವಶ್ಯಕತೆ ಇದೆ. ದೇಶದಲ್ಲಿ 40ಮಿಲಿಯನ್‌ ಶಿಕ್ಷಕರ ಅವಶ್ಯಕತೆ ಇದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ ಮೊರಟಗಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವುದು
ನಮ್ಮ ಕರ್ತವ್ಯ. ಇತ್ತೀಚಿಗೆ ಖಾಸಗಿ ಶಾಲೆಗಳು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿರುವುದು ಖುಷಿಯ ವಿಚಾರ. ಕಾನೂನು ಚೌಕಟ್ಟಿನ ಒಳಗೆ ಶಿಕ್ಷಣ ಇಲಾಖೆಯ ನಿಯಮಗಳಿಗೆ ಬದ್ಧರಾಗಿ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸಬೇಕು ಎಂದರು.

ಮುಖಂಡ ಶಿವಾನಂದ ಗುಡ್ಡಾಪೂರ ಮಾತನಾಡಿ, ಖಾಸಗಿ ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳನ್ನು ಬಗೆಹರಿಸುವ ಕಾರ್ಯವಾಗಬೇಕಿದೆ. ಒಂದು ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಬೆಳೆಸಬೇಕಾದರೆ, ಹಲವು ಕಷ್ಟಗಳನ್ನು ಎದುರಿಸಿ ಗೆಲ್ಲಬೇಕಾದರೆ ಅದೊಂದು ಸಾಹಸ ಮಾಡಿದಂತೆ ಎಂದರು.

ಚಿಕ್ಕಟ್ಟಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸುರೇಶ ಚಿಕ್ಕಟ್ಟಿ ಮಾತನಾಡಿ, ಕೋವಿಡ್‌ ದಿಂದಾಗಿ ನಮಗೆ ಅನೇಕ ಸಮಸ್ಯೆಗಳು
ಬಂದಾಗಲೂ ನಾವು ಎದೆಗುಂದದೆ ಸಂಸ್ಥೆಯನ್ನು ನಡೆಸಿಕೊಂಡು ಶಿಕ್ಷಕರಿಗೆ ಸಾಲ ಮಾಡಿ ವೇತನ ಪಾವತಿಸಿದ್ದೇವೆ. ಹೀಗೆ ಹತ್ತು ಹಲವು ಸಮಸ್ಯೆಗಳನ್ನು ಎದುರಿಸಿದರೂ ನಮ್ಮ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಸರ್ಕಾರ ಮಾಡಲಿಲ್ಲ. ನಮ್ಮ ಸಮಸ್ಯೆಗಳಿಗೆ ಸರಕಾರ ಸ್ಪಂದಿಸಬೇಕು ಎಂದರು.

ಸುನೀಲ ಶಿವಣಗಿ, ಎಲ್‌.ಎನ್‌ ಬಣಜವಾಡ, ರಮೇಶ ಬುಲಬುಲೆ, ಎಸ್‌.ಎಮ್‌ ಲಕ್ಷ್ಮೇಶ್ವರ, ಡಿ.ಡಿ ಮೇಕನಮರಡಿ, ಕೆ.ವಿ ಯಾದವಾಡ, ಎಸ್‌ .ಎ ಚಿಕ್ಕಟ್ಟಿ, ರಾವಸಾಬ ಐಹೊಳೆ, ಚಿದಾನಂದ ಪಾಟೀಲ, ಕೆ.ಬಿ ಜಾಲವಾದಿ, ಎ.ಎಸ್‌ ಜೋಶಿ, ಅರುಣ ಮಾಳಿ, ಡಾ ಸುರೇಶ ಇಂಚಗೇರಿ, ಆನಂದ ಕುಲಕರ್ಣಿ, ಸದಾಶಿವ ಚಿಕ್ಕಟ್ಟಿ, ಆರ್‌. ಎಮ್‌ ಪಾಟೀಲ, ಮುತ್ತಪ್ಪಾ ಬಡಿಗೇರ,
ರಾಜಕುಮಾರ ದಳವಾಯಿ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.