ಮುಕ್ತ-ನ್ಯಾಯಸಮ್ಮತ ಚುನಾವಣೆಗೆ ಕ್ರಮ ವಹಿಸಿ
ಚುನಾವಣೆಯಲ್ಲಿ ಪ್ರಾಶಸ್ತ್ಯ ಮತಗಳಿರುವುದರಿಂದ ಮತ ಎಣಿಕೆ ವಿಭಿನ್ನವಾಗಿರುತ್ತದೆ.
Team Udayavani, Nov 27, 2021, 6:21 PM IST
ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯ ಮತದಾನ ಹಾಗೂ ಮತ ಎಣಿಕೆ ಸಂದರ್ಭದಲ್ಲಿ ಯಾವುದೇ ರೀತಿಯ ಲೋಪದೋಷಗಳು ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಬೆಳಗಾವಿ ಜಿಲ್ಲೆಯ ವಿಧಾನ ಪರಿಷತ್ ಚುನಾವಣಾ ವೀಕ್ಷಕರಾದ ಹಿರಿಯ ಐ.ಎ.ಎಸ್. ಅಧಿಕಾರಿ ಏಕರೂಪ್ ಕೌರ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದ ನೋಡಲ್ ಅಧಿಕಾರಿಗಳ ಸಭೆ ನಡೆಸಿದ ಅವರು, ಚುನಾವಣಾ ಆಯೋಗದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು. ಪರಿಷತ್ ಚುನಾವಣೆಯಲ್ಲಿ ಪ್ರಾಶಸ್ತ್ಯ ಮತಗಳಿರುವುದರಿಂದ ಮತ ಎಣಿಕೆ ವಿಭಿನ್ನವಾಗಿರುತ್ತದೆ. ಆದ್ದರಿಂದ ಮತ ಎಣಿಕೆಗೆ
ಅನುಭವಿ ಅಧಿಕಾರಿಗಳನ್ನು ನಿಯೋಜಿಸಬೇಕು.
ಚುನಾವಣಾ ಕಾರ್ಯಕ್ಕೆ ನಿಯೋಜಿತ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಬೇಕು ಎಂದು ಅವರು ಹೇಳಿದರು. ಚುನಾವಣಾ ಸಿದ್ಧತೆಗಳ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್, ಜಿಲ್ಲೆಯಲ್ಲಿ ಒಟ್ಟಾರೆ 511 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದ್ದು, ಮಾರ್ಗಸೂಚಿ ಪ್ರಕಾರ ಎಲ್ಲ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಚುನಾವಣಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ವಿವಿಧ ಹಂತಗಳಲ್ಲಿ ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು.
ತರಬೇತಿ ನೋಡಲ್ ಅಧಿಕಾರಿಯಾಗಿರುವ ಪ್ರೀತಂ ನಸಲಾಪುರೆ ಅವರು ಇದುವರೆಗಿನ ಸಿದ್ಧತೆಗಳ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದರು. ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಕೆ. ತ್ಯಾಗರಾಜನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಡಾ.ಶಂಕರಪ್ಪ ವಣಕ್ಯಾಳ, ಮಹಾನಗರ ಪಾಲಿಕೆ ಆಯುಕ್ತ ಡಾ.ರುದ್ರೇಶ್ ಘಾಳಿ, ಬೆಳಗಾವಿ ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ವಾರ್ತಾ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ ಉಪಸ್ಥಿತರಿದ್ದರು.
ನಂತರ ಚುನಾವಣಾ ವೀಕ್ಷಕರಾದ ಏಕರೂಪ್ ಕೌರ್ ಅವರು ಬೆಳಗಾವಿ ತಾಲೂಕಿನ ಕಾಕತಿ ಹಾಗೂ ಕಡೋಲಿ ಗ್ರಾಮಗಳಿಗೆ ಭೇಟಿ ನೀಡಿ ಮತಗಟ್ಟೆಗಳನ್ನು ಪರಿಶೀಲಿಸಿ ಮಾರ್ಗಸೂಚಿಯ ಪ್ರಕಾರ ಮತಗಟ್ಟೆಗಳಲ್ಲಿ ಮೂಲಸೌಕರ್ಯವನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ತರಬೇತಿ ನೋಡಲ್ ಅಧಿಕಾರಿ ಪ್ರೀತಂ ನಸಲಾಪುರೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗೌರಿಶಂಕರ, ತಹಶೀಲ್ದಾರ ಕುಲಕರ್ಣಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.