ಲೋಪ ಕಂಡು ಬಂದರೆ ನೋಟಿಸ್‌ ನೀಡಿ


Team Udayavani, Jun 30, 2020, 5:46 PM IST

ಲೋಪ ಕಂಡು ಬಂದರೆ ನೋಟಿಸ್‌ ನೀಡಿ

ಬೆಳಗಾವಿ: ಸ್ಮಾರ್ಟ್‌ಸಿಟಿ ಯೋಜನೆ ಕಾಮಗಾರಿಗಳ ಬಗ್ಗೆ ಸಾರ್ವಜನಿಕರಲ್ಲಿ ಸಮಾಧಾನಕರ ಪ್ರತಿಕ್ರಿಯೆ ಇಲ್ಲ. ದೂರುಗಳು ಸಾಕಷ್ಟು ಕೇಳುತ್ತಿವೆ. ಈ ಹಿನ್ನೆಲೆಯಲ್ಲಿ ನಿಗದಿತ ಸಮಯಕ್ಕೆ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸದೇ ಇದ್ದರೆ ನೋಟಿಸ್‌ ನೀಡಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸೋಮವಾರ ಮಹಾನಗರ ಪಾಲಿಕೆ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸ್ಮಾರ್ಟ್‌ಸಿಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾಮಗಾರಿಗಳನ್ನು ಕೈಗೊಂಡ ಸಮಯದಲ್ಲಿ ಲೋಪಗಳು ಕಂಡು ಬಂದರೆ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮೊದಲು ನೋಟಿಸ್‌ ನೀಡಿ ನಂತರ ಅವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಬೇಕು. ಸ್ಮಾರ್ಟ್ ಸಿಟಿ ಕಾಮಗಾರಿಗೆ ಪರಿಸರ ಇಲಾಖೆಯವರು ತಡ ಮಾಡದೆ ಅನುಮತಿ ನೀಡಬೇಕು. ಪರಿಸರ ಇಲಾಖೆಯಿಂದ ಅನುಮತಿ ಸಿಗದ ಕಾರಣ ಸಾಕಷ್ಟು ಕಾಮಗಾರಿಯಲ್ಲಿ ವಿಳಂಬ ಆಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.

ನಗರದ ವಂಟಮೂರಿ ಪ್ರದೇಶದಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ನಿರ್ಮಾಣ ಆಗಿರುವ ರಸ್ತೆಗಳ ಪಕ್ಕದಲ್ಲಿ ನೆಲ ಅಗೆಯಲಾಗಿದ್ದು, ಇದರಿಂದ ಜನರಿಗೆ ತುಂಬಾ ತೊಂದರೆ ಆಗುತ್ತಿದೆ. ಈಗ ಮಳೆಗಾಲ ಆರಂಭವಾಗಿರುವುದರಿಂದ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚು. ಕಾರಣ ತಕ್ಷಣ ಇದರ ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು ಎಂದು ಸ್ಮಾರ್ಟ್‌ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ ಅವರಿಗೆ ಸೂಚನೆ ನೀಡಿದರು. ನಗರದಲ್ಲಿ ಕಸ ವಿಲೇವಾರಿಗೆ ಸಂಬಂಧಿಸಿದಂತೆ ಬುಡಾ, ಪಾಲಿಕೆ ಹಾಗೂ ಕಂಟೇನ್ಮೆಂಟ್‌ ಬೋರ್ಡ್‌ದವರು ಮೀಟಿಂಗ್‌ ಮಾಡಿಕೊಂಡು ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದರು.

ಬೆಳಗಾವಿ ಉತ್ತರ ಶಾಸಕ ಅನಿಲ ಬೆನಕೆ ಮಾತನಾಡಿ, ನಗರದ ಅನೇಕ ಕಡೆಗಳಲ್ಲಿ ವಿದ್ಯುತ್‌ ಸಮಸ್ಯೆ ಉಂಟಾಗುತ್ತಿದೆ. ಅಂಡರ್‌ ಕೇಬಲ್‌ ಕಾಮಗಾರಿ ವೇಳೆ ರಸ್ತೆಗಳನ್ನು ಅಗೆಯಲಾಗಿದ್ದು, ಈ ರಸ್ತೆಗಳನ್ನು ಸರಿಪಡಿಸುವ ಕಾಮಗಾರಿ ಇದುವರೆಗೆ ಪೂರ್ಣವಾಗಿಲ್ಲ. ಇದರಿಂದಾಗಿ ಜನರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಸಾಕಷ್ಟು ಸಲ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಮಾತನಾಡಿ, ತಮ್ಮ ಕ್ಷೇತ್ರದಲ್ಲಿ ಸ್ಮಾರ್ಟ್‌ಸಿಟಿಯ 90 ಪ್ರತಿಶತ ಕಾಮಗಾರಿಗಳು ಪೂರ್ಣಗೊಂಡಿವೆ. ಆದರೆ ಉಳಿದ ಕಾಮಗಾರಿಗಳಲ್ಲಿ ವಿಳಂಬವಾಗುತ್ತಿದೆ. ಟೆಂಡರ್‌ ಪಡೆದುಕೊಂಡವರು ನಿಗದಿತ ಸಮಯಕ್ಕೆ ಕಾಮಗಾರಿ ಮುಗಿಸದಿದ್ದರೆ ಅವರಿಗೆ ನೋಟಿಸ್‌ ನೀಡಬೇಕು. ಪಿಎಂಸಿ ಕಂಪನಿಯವರು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಹೇಳಿದರು.

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಮಾತನಾಡಿ, ಮಹಾನಗರ ಪಾಲಿಕೆ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸ್ಮಾರ್ಟ್‌ ಸಿಟಿ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಸ್ಥಳೀಯ ಮಟ್ಟದಲ್ಲಿ ಆಗುವ ಕೆಲಸಗಳಿಗೆ ಆದ್ಯತೆ ನೀಡಬೇಕು. ಸರ್ಕಾರಕ್ಕೆ ವರದಿ ಸಲ್ಲಿಸಿ ಅನುಮತಿ ಸಿಗುವವರೆಗೆ ಕಾಯಬೇಡಿ ಎಂದು ಸಲಹೆ ನೀಡಿದರು.

ಸ್ಮಾರ್ಟ್‌ಸಿಟಿ ಕಾಮಗಾರಿಗಳ ಬಗ್ಗೆ ವಿವರಣೆ ನೀಡಿದ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ, ಈಗಾಗಲೇ 49 ಕೋಟಿ ರೂ. ವೆಚ್ಚದಲ್ಲಿ ಕಮಾಂಡ್‌ ಸೇಂಟರ್‌ ನಿರ್ಮಾಣ ಮಾಡಲಾಗಿದೆ. ಒಂಟಮೂರಿಯಲ್ಲಿ 30 ಹಾಸಿಗೆ ಆಸ್ಪತ್ರೆ ನಿರ್ಮಾಣ, 5 ಕೋಟಿ ರೂ. ವೆಚ್ಚದಲ್ಲಿ 11 ಸ್ಮಾರ್ಟ್‌ ಕ್ಲಾಸ್‌ ರೂಮ್‌ ನಿರ್ಮಾಣ ಮಾಡಲಾಗಿದೆ. ನಗರದ 12 ಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆ ಮಾಡಲಾಗಿದೆ. 32 ಕೋಟಿ ವೆಚ್ಚದಲ್ಲಿ ಸಿಬಿಟಿ ಬಸ್‌ ನಿಲ್ದಾಣ ಕಾಮಗಾರಿ ಆರಂಭಿಸಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದು ಹೇಳಿದರು.

ಪಾಲಿಕೆ ಆಯುಕ್ತ ಜಗದೀಶ ಕೆ.ಎಚ್‌ ಮಾತನಾಡಿ, ಮಹಾನಗರ ಪಾಲಿಕೆ ವ್ಯಾಪ್ತಿಯ ಎಪಿಎಂಸಿ ರಸ್ತೆಯಲ್ಲಿ ನಿರ್ಮಾಣ ಮಾಡುತ್ತಿರುವ ಕಾಂಪ್ಲೆಕ್ಸ್‌ ಕಾಮಗಾರಿ ಅಂತಿಮ ಹಂತದಲ್ಲಿದೆ ಎಂದರು. ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಪ್ರೀತಮ ನಸಲಾಪುರೆ ಮಾತನಾಡಿ, ನಗರಾಭಿವೃದ್ಧಿ ಪ್ರಾಧಿಕಾರವು ಒಟ್ಟು 19 ಯೋಜನೆ ಒಳಗೊಂಡಿದೆ. ಅದರಲ್ಲಿ 17 ಯೋಜನೆಗಳನ್ನು ಪಾಲಿಕೆಗೆ ಹಸ್ತಾಂತರ ಮಾಡಲಾಗಿದೆ ಎಂದರು. ರಾಮತೀರ್ಥ ನಗರದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ವರದಿ ಸಲ್ಲಿಸಲಾಗಿದ್ದು, ಅನುಮೋದನೆ ಸಿಕ್ಕ ತಕ್ಷಣ ಕೆಲಸ ಪ್ರಾರಂಭಿಸಲಾಗುವುದು. ಇದಲ್ಲದೆ ಯೋಜನೆ ಸಂಖ್ಯೆ 61ರ ಅಡಿ ಕಣಬರ್ಗಿಯಲ್ಲಿ 23 ಎಕರೆಯಲ್ಲಿ ಹೊಸದಾಗಿ 3,000 ಮನೆಗಳ ನಿರ್ಮಾಣ ಮಾಡಲಾಗುತ್ತದೆ ಎಂದು ಹೇಳಿದರು.

ವಿಧಾನ ಪರಿಷತ್‌ ಸರಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗೂಳಪ್ಪ ಹೊಸಮನಿ, ಡಿಸಿ ಡಾ| ಎಸ್‌.ಬಿ ಬೊಮ್ಮನಹಳ್ಳಿ ಇದ್ದರು. ನಗರದ ತ್ಯಾಜ್ಯ ನಿರ್ವಹಣೆ ಮತ್ತು ವಿಲೇವಾರಿಯ ಐದು ಹೆಚ್ಚುವರಿ ವಾಹನಗಳಿಗೆ ಸಚಿವ ರಮೇಶ ಜಾರಕಿಹೊಳಿ ಚಾಲನೆ ನೀಡಿದರು.

ಟಾಪ್ ನ್ಯೂಸ್

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

car-parkala

ಕಾಸರಗೋಡು: ಬೈಕ್‌ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.