ಪರಿಸರ ರಕ್ಷಿಸಿ ಜೀವರಾಶಿ ಉಳಿಸಿ
Team Udayavani, Sep 9, 2018, 3:09 PM IST
ಅಥಣಿ: ಪ್ರತಿಯೊಬ್ಬರು ಪರಿಸರ ರಕ್ಷಣೆಗೆ ಕೈ ಜೋಡಿಸಿ ಹಸಿರು ವಾತಾವರಣ ನಿರ್ಮಿಸಬೇಕು ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಕುಲಪತಿ ಡಾ| ಎಸ್.ಬಿ. ಹೊಸಮನಿ ಹೇಳಿದರು. ಭೋಜರಾಜ ಕ್ರೀಡಾಂಗಣದಲ್ಲಿ ಜಾಧವಜಿ ಶಿಕ್ಷಣ ಸಂಸ್ಥೆ ಹಾಗೂ ಕರ್ನಾಟಕ ಅರಣ್ಯ ಇಲಾಖೆ ಘಟಪ್ರಭಾ ವಿಭಾಗ, ಗೋಕಾಕ ಪ್ರಾದೇಶಿಕ ವಲಯ ಅಥಣಿ ಸಹಭಾಗಿತ್ವದಲ್ಲಿ ಜಾಧವಜಿ ಶಿಕ್ಷಣ ಸಂಸ್ಥೆಯ ಶತಮಾನೋತ್ಸವ ವರ್ಷಾಚರಣೆಯ ನಿಮಿತ್ತ ರಾಜ್ಯ ಸರ್ಕಾರದ ಹಸಿರು ಕರ್ನಾಟಕ ಕಾರ್ಯಕ್ರಮದಡಿ 5000 ವಿದ್ಯಾರ್ಥಿಗಳಿಗೆ ಉಚಿತ ಸಸಿ ವಿತರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಮಾನವ ತನ್ನ ಸ್ವಾರ್ಥಕ್ಕಾಗಿ ಪರಿಸರವನ್ನು ನಾಶ ಮಾಡಿ ಇಡಿ ಮನುಕುಲಕ್ಕೆ ಕಂಟಕವಾಗಿದ್ದಾನೆ. ಇದರಿಂದಾಗಿ ಮಾನವ ಮತ್ತು ಪರಿಸರದ ನಡುವೆ ಯುದ್ಧ ನಡೆದಿದೆ. ಇದನ್ನು ತಪ್ಪಿಸಲು ಇಂದಿನ ಯುವ ಪೀಳಿಗೆಯೊಂದಿಗೆ ಹಿರಿಯ ತಲೆಮಾರಿನವರು ಕೈ ಜೋಡಿಸುವ ಮೂಲಕ ಪರಿಸರವನ್ನು ಸಂರಕ್ಷಣೆ ಮಾಡುವ ಕುರಿತು ಚಿಂತನೆ ಮಾಡಬೇಕಾಗಿದೆ. ಆದ್ದರಿಂದ ಗಿಡಮರಗಳನ್ನು ನಾಶ ಮಾಡದೆ ಅವುಗಳನ್ನು ಸಂರಕ್ಷಿಸಿ ಜೀವರಾಶಿಯನ್ನು ಉಳಿಸೋಣ ಎಂದರು.
ಬೆಳಗಾವಿ ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಪಿ.ಬಿ. ಕರುಣಾಕರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಸಿರು ಕರ್ನಾಟಕ ಎಂಬ ಧ್ಯೇಯದೊಂದಿಗೆ ಜನ ಸಾಮಾನ್ಯರಲ್ಲಿ ಜಾಗೃತಿ ಮೂಡಿಸುವುದರ ಜತೆಗೆ ಪರಿಸರ ಸಂರಕ್ಷಣೆಗೆ ಮುಂದಾಗಿದ್ದೇವೆ. ಮನುಷ್ಯನು ದುರಾಸೆಯಿಂದ ತನ್ನನ್ನು ತಾನು ಸಂಕಷ್ಟಕ್ಕೀಡು ಮಾಡಿಕೊಳ್ಳುತ್ತಿದ್ದಾನೆ. ಅದಕ್ಕೆ ಉದಾಹರಣೆಯಾಗಿ ಕೊಡಗಿನಲ್ಲಿ ಆದ ಘಟನೆಯೆ ಸಾಕ್ಷಿ. ಆದ್ದರಿಂದ ಎಲ್ಲರೂ ಪರಿಸರ ಸಂರಕ್ಷಣೆಗೆ ಮುಂದಾಗುವಂತೆ ಸಲಹೆ ನೀಡಿದರು.
ಜೆ.ಇ. ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಅರವಿಂದ ದೇಶಪಾಂಡೆ ಮಾತನಾಡಿ, ಪರಿಸರದ ಜಾಗೃತಿ ಶಾಲಾ ಮಕ್ಕಳಲ್ಲಿ ಅವಶ್ಯವಾಗಿದೆ. ಸಸಿ ವಿತರಣಾ ಕಾರ್ಯಕ್ರಮ ಅಭೂತಪೂರ್ವ ಯಶಸ್ವಿಯಾಗಿದೆ ಎಂದರು. ಇದೇ ಸಂದರ್ಭದಲ್ಲಿ ಹಸಿರು ಧ್ವಜವನ್ನು ಅನಾವರಣ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ವಿಶೇಷ ಆಹ್ವಾನಿತರಾಗಿ ಪಶ್ಚಿಮ ಘಟ್ಟ ಕಾರ್ಯಪಡೆ ಮಾಜಿ ಅಧ್ಯಕ್ಷ ಪರಿಸರ ತಜ್ಞ ಅನಂತ ಹೆಗಡೆ ಆಶಿಸರ ಆಗಮಿಸಿದ್ದರು. ಈ ವೇಳೆ ಡಾ| ರಾಮ ಕುಲಕರ್ಣಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ದೇವರಾಜ, ವಲಯ ಅರಣ್ಯಾಧಿಕಾರಿ ಪ್ರಶಾಂತ ಗೌರಾಣಿ, ಸತೀಶ ಕುಲಕರ್ಣಿ, ಅನಿಲ ದೇಶಪಾಂಡೆ, ಆರ್.ಎಂ.ದೇವರಡ್ಡಿ ಸೇರಿದಂತೆ ಇತರರು ಇದ್ದರು. ಸಾಹಿತಿ ವಾಮನ ಕುಲಕರ್ಣಿ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.