ಹಾಲು ಆಮದು ವಿರೋಧಿಸಿ ಪ್ರತಿಭಟನೆ
Team Udayavani, Oct 15, 2019, 12:06 PM IST
ಬೆಳಗಾವಿ: ತೆರಿಗೆ ರಹಿತ ಕ್ಷೀರ ಉತ್ಪನ್ನ ಆಮದು ಪ್ರಸ್ತಾವನೆ ನಿಷೇಧಿಸಬೇಕು ಎಂದು ಕೇಂದ್ರ ಸರಕಾರಕ್ಕೆ ಒತ್ತಾಯಿಸಿ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಬೆಳಗಾವಿ ಹಾಲು ಒಕ್ಕೂಟದ ಆಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ವಿವೇಕರಾವ್ ಪಾಟೀಲ ನೇತೃತ್ವದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಎಮ್ಮೆಗಳನ್ನು ಕರೆತಂದು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ ರೈತರು ಎಲ್ಲರ ಗಮನಸೆಳೆದರು. ಕೇಂದ್ರ ಸರಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ನಮ್ಮ ದೇಶದಲ್ಲೇ ಸಾಕಷ್ಟು ಹಾಲು ಉತ್ಪಾದನೆ ಮಾಡಲಾಗುತ್ತಿದೆ. ಹೀಗಿರುವಾಗ ಕೇಂದ್ರ ಸರ್ಕಾರವು ಹಾಲಿನ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವ ಒಪ್ಪಂದ ಜಾರಿ ಮಾಡಿದರೆ ಹಾಲು ಉತ್ಪಾದಕರು ಹಾಗೂ ಸಹಕಾರಿ ಹೈನು ಉದ್ಯಮಕ್ಕೆ ಪ್ರಬಲ ಹಿಂಜರಿತ ಉಂಟಾಗಲಿದೆ. ಕಾರಣ ಸರಕಾರ ತಕ್ಷಣವೇ ಈ ಆಮದು ವಿಚಾರ ಕೈಬಿಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ವಿವೇಕರಾವ್ ಪಾಟೀಲ, ಯಾವುದೇ ರೀತಿಯಲ್ಲಿ ತೆರಿಗೆ ಇಲ್ಲದೇ ವಿದೇಶದಿಂದ ಹಾಲನ್ನು ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಇದರಿಂದ ನಮ್ಮ ಹಾಲು ಉತ್ಪಾದಕರಿಗೆ ತೊಂದರೆ ಆಗುವ ಸಾಧ್ಯತೆ ಖಚಿತವಾಗಿದೆ. ಹೊರ ದೇಶದ ಹಾಲು ನಮ್ಮಲ್ಲಿಗೆ ಬಂದರೆ ನಮ್ಮ ರೈತರು ತಮ್ಮ ಜಾನುವಾರುಗಳನ್ನು ಮಾರಲೇಬೇಕಾದ ಸ್ಥಿತಿ ಎದುರಾಗಲಿದೆ. ಆದ್ದರಿಂದ ಕೇಂದ್ರ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದರು. ಕೇಂದ್ರ ಅನುಷ್ಠಾನಗೊಳಿಸಲು
ಹೊರಟಿರುವ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವದ ಒಪ್ಪಂದದಲ್ಲಿ ಹೈನುಗಾರಿಕೆಯ ಉತ್ಪನ್ನಗಳು ಆಮದು ಮಾಡಿಕೊಳ್ಳುವ ವಿಷಯಸೇರ್ಪಡೆಯಾದಲ್ಲಿ ವಿದೇಶದ ಹಾಲು ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟು ಹಾಲು ಉತ್ಪಾದಕರ ಬಾಳು ಮತ್ತು ಸಹಕಾರ ಹೈನೋದ್ಯಮದ ಮೇಲೆ ಪ್ರಬಲ ಪ್ರಹಾರ ನೀಡುವ ಸಾಧ್ಯತೆ ಇದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಹಾಲು ಒಕ್ಕೂಟದ ಆಡಳಿತ ಮಂಡಳಿ ಸದಸ್ಯರಾದ ಕಟ್ಟಿ, ಮುಗಳಿ, ಮಲ್ಲಪ್ಪ ಪಾಟೀಲ, ಕಲ್ಲಪ್ಪ ಗಿರೆಣ್ಣವರ, ರಾಯಪ್ಪ ಡೂಗ ಮೊದಲಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.