ಕೆರೆ ಪ್ರವೇಶಕ್ಕೆ ಶುಲ್ಕ ಖಂಡಿಸಿ ಕರವೇ ಪ್ರತಿಭಟನೆ
Team Udayavani, May 27, 2019, 7:22 AM IST
ಬೆಳಗಾವಿ: ನಗರದ ಕೋಟೆ ಕೆರೆ ಪ್ರವೇಶಕ್ಕಾಗಿ ಸಾರ್ವಜನಿಕರಿಗೆ ಶುಲ್ಕ ನಿಗದಿಪಡಿಸಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಘಟಕ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬೆಳಗಾವಿ: ನಗರದ ಕೋಟೆ ಕೆರೆ ಪ್ರವೇಶಕ್ಕಾಗಿ ಸಾರ್ವಜನಿಕರಿಗೆ ಶುಲ್ಕ ನಿಗದಿಪಡಿಸಿರುವುದನ್ನು ಖಂಡಿಸಿ ಜಿಲ್ಲಾಡಳಿತ ವಿರುದ್ಧ ವಿವಿಧ ಸಾಮಾಜಿಕ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ರವಿವಾರ ಕರ್ನಾಟಕ ರಕ್ಷಣಾ ವೇದಿಕೆ ಯುವ ಘಟಕ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕೆರೆ ದ್ವಾರದ ಎದುರು ಪ್ರತಿಭಟನೆ ನಡೆಸಿದರು.
ಸ್ಮಾರ್ಟ್ ಸಿಟಿ ಯೋಜನೆಯಡಿ 7 ಕೋಟಿ ರೂ. ವೆಚ್ಚದಲ್ಲಿ ಕೆರೆಯ ಸೌಂದರ್ಯಿಕರಣಗೊಳಿಸಿದ ಬಳಿಕ ಪ್ರವೇಶ ಶುಲ್ಕ ವಿಧಿಸಲಾಗುವುದೆಂದು ಬೆಳಗಾವಿ ಉತ್ತರ ಶಾಸಕ ಅನಿಲ ಬೆನಕೆ ಅವರು ಹೇಳಿಕೆ ನೀಡಿದ ನಂತರ ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಪ್ರವೇಶ ಶುಲ್ಕ ನಿಗದಿಪಡಿಸಿದ್ದಾರೆ. ಇದರಿಂದ ಸಾರ್ವಜನಿಕರಿಗೆ ದೊಡ್ಡ ಸಮಸ್ಯೆಯಾಗಲಿದ್ದು, ಯಾವುದೇ ಕಾರಣಕ್ಕೂ ಶುಲ್ಕ ವಿಧಿಸಬಾರದು ಎಂದು ಆಗ್ರಹಿಸಿದರು.
ಜಿಲ್ಲಾಡಳಿತ ಕೂಡಲೇ ಸಾರ್ವಜನಿಕರ ಹಿತದೃಷ್ಟಿಯಿಂದ ಶುಲ್ಕ ವಿಧಿಸಿರುವುದನ್ನು ಹಿಂಪಡೆಯಬೇಕು. ವಾಯು ವಿಹಾರಕ್ಕೆ ಹೋಗುವವರಿಗೆ ಹಾಗೂ ಕೆರೆಯ ಸುತ್ತಲೂ ಓಡಾಡಲು ಅನುಕೂಲಕರವಾಗಲಿ ಎಂಬ ಉದ್ದೇಶದಿಂದ ಈ ಕ್ರಮವನ್ನು ಕೈಬಿಡಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕಾರ್ಯಕರ್ತರಾದ ಶಿವಾನಂದ ತಂಬಾಕಿ, ವಿನಾಯಕ ಬೋವಿ, ಸುಮಿತ ಅಗಸಗಿ, ಸತೀಶ ಗಾಡಿವಡ್ಡರ, ಸಂಪತ ಸಕ್ರೆಣ್ಣವರ, ವಿನಾಯಕ ಹಟ್ಟಿಹೊಳಿ, ಗಿರೀಶ ಪಾಟೀಲ, ಮಹೇಶ ಶೀಗಿಹಳ್ಳಿ, ಸಂಪತಕುಮಾರ ದೇಸಾಯಿ, ರಮೇಶ ಯರಗಣ್ಣವರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.