ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ
ಜನರ ಜೀವನದೊಂದಿಗೆ ಬಿಜೆಪಿ ಸರ್ಕಾರ ಚೆಲ್ಲಾಟ: ಸತೀಶ ಜಾರಕಿಹೊಳಿ
Team Udayavani, Jul 11, 2021, 9:48 PM IST
ಮುಗಳಖೋಡ: ತೈಲ ಹಾಗೂ ಅವಶ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಸೈಕಲ್ ಜಾಥಾ ನಡೆಸಿ ಪ್ರತಿಭಟನೆ ನಡೆಸಿದರು.
ಪಟ್ಟಣದ ವಿವೇಕಾನಂದ ವೃತ್ತದಿಂದ ವಿಠ್ಠಲ ಮಂದಿರದವರೆಗೆ ನಡೆಸಿದ ಪ್ರತಿಭಟನಾ ಮೆರವಣಿಗೆಗೆ ಸತೀಶ ಜಾರಕಿಹೊಳಿ ಚಾಲನೆ ನೀಡಿದರು. ನಂತರ ವಿಠ್ಠಲ ಮಂದಿರದ ಆವರಣದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸುಳ್ಳು ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದು ಅವಶ್ಯಕ ವಸ್ತು ಮತ್ತು ಪೆಟ್ರೋಲ್-ಡೀಸೆಲ್ ಬೆಲೆ ಗಗನಕ್ಕೆ ಏರಿಕೆ ಮಾಡಿ ಜನರ ಜೀವನದ ಮೇಲೆ ಚೆಲ್ಲಾಟ ಆಡುತ್ತಿವೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಒಂದೇ ಒಂದು ರೂ. ಏರಿಕೆ ಆದರೆ ದೇಶದಾದ್ಯಂತ ಪ್ರತಿಭಟನೆ ಮಾಡುವವರು ಈಗ ಏನು ಮಾಡುತ್ತಿದ್ದಾರೆ.
ಇಂದು ನೀವು ಮೋದಿ ಹಟಾವೋ ದೇಶ ಬಚಾವೊ ಮಾಡುವುದು ಅನಿವಾರ್ಯವಾಗಿದೆ. ಮುಖಂಡರು ಕಾರ್ಯಕರ್ತರು ಸ್ವಪ್ರತಿಷ್ಠೆ ಬಿಟ್ಟು ಕಾಂಗ್ರೆಸ್ ಆಡಳಿತದಲ್ಲಿ ಜಾರಿಗೆ ತಂದ ಸುಧಾರಣಾ ಕ್ರಮಗಳನ್ನು ಮನೆ ಮನೆಗೆ ತೆರಳಿ ಪ್ರತಿಯೊಬ್ಬರ ಮನ ಮುಟ್ಟಿಸುವ ಕೆಲಸ ಮಾಡುವ ಮೂಲಕ ತಮ್ಮ ಪ್ರಾಮಾಣಿಕ ಸೇವೆ ಸಲ್ಲಿಸಿ. ಪಕ್ಷ ಮುಂದಿನ ತಾಪಂ, ಜಿಪಂ ಹಾಗೂ ಪುರಸಭೆ, ಪಟ್ಟಣ ಪಂಚಾಯಿತಿ ಸದಸ್ಯೆ ಸ್ಥಾನಗಳಿಗೆ ಯೋಗ್ಯ ಅಭ್ಯರ್ಥಿಗೆ ಸ್ಪರ್ಧಿಸುವ ಅವಕಾಶ ನೀಡಲಾಗುವುದು ಎಂದು ಹೇಳಿದರು.
ಜಿಲ್ಲಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ಮಾತನಾಡಿ, ಎರಡು ಸರ್ಕಾರಗಳು ವಿಫಲವಾಗಿವೆ. ಸಂವೇದನಾ ರಹಿತ ಸರ್ಕಾರ, ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಬದುಕಿನಲ್ಲಿ ಚೆಲ್ಲಾಟ ಆಡುತ್ತಿವೆ. ನೀವು ಜಾಗೃತರಾಗಿ ಜನವಿರೋಧಿ ಸರ್ಕಾರ ಕಿತ್ತು ಹಾಕಿ ಎಂದರು. ಮುಖಂಡ ಡಿ.ಎಸ್. ನಾಯಿಕ, ಮಹೇಂದ್ರ ತಮ್ಮಣ್ಣವರ, ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ಯಲ್ಲಪ್ಪ ಶಿಂಗೆ ಮಾತನಾಡಿದರು. ಅಧ್ಯಕ್ಷ ಸಂಜು ಸರವಗೋಳ, ಸಂಜು ಬಾನೆ, ಅಪ್ಪಾಸಾಹೇಬ ಕುಲಿಗೋಡೆ, ದಶಗೀರ ಕಾಗವಾಡೆ, ಆಯುಶಾ ಸನದಿ, ಅಶೋಕ ಕೊಪ್ಪದ, ಸಂಗಪ್ಪ ಖೇತಗೌಡರ, ಗಜಾನನ ಕೋಕಟನೂರ, ಗುರುಪಾದ ಚೌಗಲಾ, ಭೀಮಪ್ಪ ಬದನಿಕಾಯಿ, ರಾಮಣ್ಣ ಗಸ್ತಿ, ಉಪಸ್ಥಿತರಿದ್ದರು. ಬಿಜೆಪಿಯಿಂದ ಕಾಂಗ್ರೆಸ್ ಸೇರಿದ ಕಾರ್ಯಕರ್ತರನ್ನು ಸತೀಶ ಜಾರಕಿಹೊಳಿ ಸತ್ಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.