ಸದನ ಹಾಳು ಮಾಡಿದ “ಕೈ’ ವಿರುದ್ಧ ಪ್ರತಿಭಟನೆ
ಈ ಇಬ್ಬರ ನಡುವಿನ ಜಗಳ ರಾಜ್ಯದ ಜಗಳ ಎಂಬಂತೆ ಬಿಂಬಿಸುತ್ತಿದ್ದಾರೆ
Team Udayavani, Feb 28, 2022, 6:04 PM IST
ಬೆಳಗಾವಿ: ಕಾಂಗ್ರೆಸ್ ನಾಯಕರು ವಿಧಾನ ಮಂಡಲ ಅಧಿ ವೇಶನ ಕಲಾಪ ಹಾಳು ಮಾಡಿ ಜನ ವಿರೋಧಿ ನೀತಿ ಅನುಸರಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ರವಿವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಸರ್ದಾರ್ ಪ್ರೌಢಶಾಲೆ ಮೈದಾನದಿಂದ ರಾಣಿ ಚನ್ನಮ್ಮ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ಕಾಂಗ್ರೆಸ್‌ನವರು ಸದನದ ಸಮಯ ಹಾಳು ಮಾಡಿದರು. ರಾಜ್ಯದ ಸಮಸ್ಯೆ ಬಗ್ಗೆ ಚರ್ಚೆಗೆ ಅವಕಾಶ ನೀಡಲಿಲ್ಲ. ಕಾಂಗ್ರೆಸ್‌ನವರು ಮೊದಲಿನಿಂದಲೂ ಜನಪರ ಅಲ್ಲ ಎನ್ನುವುದನ್ನು ಸಾಬೀತು ಮಾಡಿದರು ಎಂದು ಬಿಜೆಪಿ ಮುಖಂಡರು ಆರೋಪಿಸಿದರು.
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ, ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ ಖಂಡಿಸಿ ಸದನ ನಡೆಯಲು ಅವಕಾಶ ನೀಡದ ಕಾಂಗ್ರೆಸ್‌ನ ಕ್ರಮ ಸರಿಯಲ್ಲ. ಜಾತಿ-ಧರ್ಮ ಮಧ್ಯೆ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದೆ. ವಿಧಾನಸೌಧದಲ್ಲಿ ವಿಧಾನಮಂಡಲ ಅಧಿವೇಶನಕ್ಕೆ ಅವಕಾಶ ನೀಡದೇ ಜನರ ಧಾರ್ಮಿಕ ಭಾವನೆ ಕೆಣಕಿದೆ ಎಂದು ಆರೋಪಿಸಿದರು.
ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಮಾತನಾಡಿ, ಸದನದ ಅಮೂಲ್ಯ ಸಮಯ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಳು ಮಾಡಿದ್ದಾರೆ. ಈ ಇಬ್ಬರ ನಡುವಿನ ಜಗಳ ರಾಜ್ಯದ ಜಗಳ ಎಂಬಂತೆ ಬಿಂಬಿಸುತ್ತಿದ್ದಾರೆ ಎಂದು ದೂರಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಮಾತನಾಡಿ, ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಆಗಿರಬೇಕು. ಅದನ್ನು ಎಲ್ಲರೂ ಪಾಲಿಸಬೇಕು. ಈ ನೆಲದ ಕಾನೂನು ಪಾಲಿಸದಿದ್ದರೆ ಇದಕ್ಕೆ ಅವಮಾನ ಮಾಡಿದಂತಾಗುತ್ತದೆ ಎಂದರು.
ಶಿವಮೊಗ್ಗದಲ್ಲಿ ಹತ್ಯೆಗೀಡಾದ ಭಜರಂಗದಳ ಕಾರ್ಯಕರ್ತ ಹರ್ಷಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಷ ಪಾಟೀಲ, ಜಿಲ್ಲಾ ಮಾಧ್ಯಮ ಸಂಚಾಲಕ ಎಫ್.ಎಸ್. ಸಿದ್ದನಗೌಡರ ಮಾತನಾಡಿದರು.
ಈ ವೇಳೆ ಪ್ರಧಾನ ಕಾರ್ಯದರ್ಶಿ ಸಂದೀಪ ದೇಶಪಾಂಡೆ, ಖಜಾಂಚಿ ಮಲ್ಲಿಕಾರ್ಜುನ ಮದಮ್ಮನವರ, ರಾಮದುರ್ಗ ಪ್ಯಾರಿ ಶುಗರ್ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ, ಬೆಳಗಾವಿ ಗ್ರಾಮೀಣ ಮಂಡಲ ಅಧ್ಯಕ್ಷ ಧನಂಜಯ ಜಾಧವ, ನಗರ ಘಟಕ ಪ್ರಧಾನ ಕಾರ್ಯದರ್ಶಿ ಮುರುಘೇಂದ್ರಗೌಡ ಪಾಟೀಲ, ಮುಖಂಡರಾದ ಡಾ| ಗುರುಪ್ರಸಾದ ಕೋತಿನ, ಸಂತೋಷ ದೇಶನೂರ, ದಿಗ್ವಿಜಯ ಶಿದ್ನಾಳ, ಡಾ| ಸೋನಾಲಿ ಸರ್ನೋಬತ್, ವೀರಭದ್ರಯ್ಯ ಪೂಜಾರಿ, ಡಾ| ನಯನಾ ಭಸೆ, ಭೀಮಶಿ ಭರಮನ್ನವರ, ಅಭಯ ಅವಲಕ್ಕಿ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.