ಕಂಪ್ಯೂಟರ್‌ ಆಪರೇಟರ್‌ಗಳ ಪ್ರತಿಭಟನೆ


Team Udayavani, Dec 27, 2019, 3:12 PM IST

bg-tdy-1

ಬೆಳಗಾವಿ: ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಗ್ರಾಮ ಪಂಚಾಯತ್‌ ಕಂಪ್ಯೂಟರ್‌ ಆಪರೇಟರುಗಳು ಜಿಲ್ಲಾ ಪಂಚಾಯತ್‌ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಗ್ರಾಮ ಪಂಚಾಯತ ನೌಕರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ನೌಕರರು, ಸರ್ಕಾರದ ಹಲವಾರು ಯೋಜನೆಗಳನ್ನು ಗ್ರಾಮ ಪಂಚಾಯತ ಮಟ್ಟದಲ್ಲಿ ಜಾರಿ ಮಾಡುತ್ತಿರುವ ಕಂಪ್ಯೂಟರ್‌ ಆಪರೇಟರ್‌ಗಳಿಗೆ ನೇಮಕಾತಿ ಆದೇಶ ನೀಡಿ ಕಾಯಂಗೊಳಿಸಬೇಕು. ನೇಮಕಾತಿಗಾಗಿ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು. 2006-07 ರಲ್ಲಿ ಜಾರಿಗೆ ಬಂದಿರುವ ಉದ್ಯೋಗ ಖಾತ್ರಿ ಯೋಜನೆಯಡಿ ಪಂಚಾಯತಗಳಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡು ಸರ್ಕಾರದ ಅನೇಕ ಯೋಜನೆಗಳನ್ನು ಸಮಪರ್ಕವಾಗಿ ಜಾರಿ ಮಾಡುತ್ತಿರುವ ಕಂಪ್ಯೂಟರ್‌ ಆಪರೇಟರುಗಳಿಗೆ ಕನಿಷ್ಠ ವೇತನ ಇಲ್ಲ. 2014ರ ಆದೇಶದನ್ವಯ ಅನುಮೋದನೆ ನೀಡಿ ಕನಿಷ್ಠ ವೇತನ ಜಾರಿ ಮಾಡಬೇಕು ಎಂದು ಸಂಘದ ಜಿಲ್ಲಾ ಗೌರವ ಅಧ್ಯಕ್ಷ ವಿ. ಪಿ. ಕುಲಕರ್ಣಿ ಒತ್ತಾಯಿಸಿದರು.

2014ರ ಆದೇಶದ ಪ್ರಕಾರ ಸತತ 3 ವರ್ಷ ಮೇಲ್ಪಟ್ಟು ಪಂಚಾಯತಗಳಲ್ಲಿ ಕೆಲಸ ನಿರ್ವಹಿಸಿದ ಡಾಟಾ ಎಂಟ್ರಿ ಆಪರೇಟರುಗಳಿಗೆ ಕ್ಲರ್ಕ ಕಮ್‌ ಡಾಟಾ ಎಂಟ್ರಿ ಆಪರೇಟರ ಎಂದು ಪಂಚಾಯತಗಳಲ್ಲಿ ನಿರ್ಣಯ ಸ್ವೀಕರಿಸಿ ಅದರ ಮೂಲಕ ಜಿಲ್ಲಾ ಪಂಚಾಯತ ಅನುಮೋದನೆ ನೀಡಬೇಕು ಎಂದು ಸಂಘದ ರಾಜ್ಯ ಉಪಾಧ್ಯಕ್ಷ ಎಂ.ಡಿ. ನಾಡಗೌಡ ಒತ್ತಾಯಿಸಿದರು. ಸಿ.ಐ.ಟಿ.ಯು. ಜಿಲ್ಲಾ ಕಾರ್ಯದರ್ಶಿ ಜಿ.ಎಂ. ಜೈನೆಖಾನ ಮಾತನಾಡಿ, ರೇಶನ್‌ ಕಾರ್ಡ್‌, ಉದ್ಯೋಗ ಖಾತ್ರಿ, ಬಾಪೂಜಿ ಸೇವಾ ಕೇಂದ್ರ ಮತ್ತು ವಸತಿ ಯೋಜನೆ ಹೀಗೆ ಹಲವು ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡುತ್ತಿರುವ ಕಂಪ್ಯೂಟರ್‌ ಆಪರೇಟರುಗಳಿಗೆ ಸರ್ಕಾರದ ಆದೇಶದಂತೆ ಕನಿಷ್ಠ ವೇತನ ಜಾರಿ ಮಾಡಿ ಅವರಿಗೆ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಟಿ.ಎ. ಭಬಗೌಡ, ವೀರಭದ್ರ ಕಂಪ್ಲಿ, ಬಾಗಪ್ಪ ಚೌಗಲಾ, ಪ್ರಕಾಶ ಬಸ್ಸಾಪೂರ, ಸಾದಿಕ ಹುದ್ದಾರ, ಮತ್ತು ವಿಠಲ ಕೊನನಕುಂಟೆ ಭಾಗವಹಿಸಿದ್ದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.