ಅವಹೇಳನಕಾರಿ ಹೇಳಿಕೆ: ಶಾಸಕ ಅರಗ ಜ್ಞಾನೇಂದ್ರ ವಿರುದ್ದ ದಲಿತರ, ಕಾಂಗ್ರೆಸ್ಸಿಗರ ಪ್ರತಿಭಟನೆ
ಶಾಸಕ ಅರಗ ಜ್ಞಾನೇಂದ್ರ ಭಾವಚಿತ್ರಕ್ಕೆ ಬೆಂಕಿ
Team Udayavani, Aug 3, 2023, 2:38 PM IST
ಸಂಕೇಶ್ವರ: ಎಐಸಿಸಿ ಅಧ್ಯಕ್ಷ ಹಾಗೂ ಸಂಸತ್‌ನ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಚಿವ ಈಶ್ಬರ ಖಂಡ್ರೆ ಅವರ ಚರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಶಾಸಕ ಅರಗ ಜ್ಞಾನೇಂದ್ರ ವಿರುದ್ದ ದಲಿತ ಸಂಘಟನೆ ಮತ್ತು ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಪಟ್ಟಣದಲ್ಲಿ ಆ.3ರ ಗುರುವಾರ ಪ್ರತಿಭಟನೆ ನಡೆಸುವ ಮೂಲಕ ಜ್ಞಾನೇಂದ್ರ ಭಾವಚಿತ್ರಕ್ಕೆ ಬೆಂಕಿ ಹಚ್ವಿ ಆಕ್ರೋಶ ವ್ಯಕ್ತಪಡಿಸಿದರು.
ಗುರುವಾರ ಮುಂಜಾನೆ ನಗರದ ಶಿವಾಜಿ ವೃತ್ತದಲ್ಲಿ ಜಮಾವಣೆಗೊಂಡ ದಲಿತ ಸಂಘಟನೆ ಪದಾಧಿಕಾರಿಗಳು ಮತ್ತು ಕೆಲ ಕಾಂಗ್ರೆಸ್ ಪದಾಧಿಕಾರಿಗಳು ಸಂಕೇಶ್ವರ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸಂತೋಷ ಮುಡಸಿ ಅವರ ನೇತೃತ್ವದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರಲ್ಲದೆ ಶಾಸಕ ಅರಗ ಜ್ಞಾನೇಂದ್ರ ವಿರುದ್ದ ಘೋಷಣೆ ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.
ಈ ಸಂದರ್ಭದಲ್ಲಿ ದಿಲೀಪ ಹೊಸಮನಿ, ಅವಿನಾಶ ನಲವಡೆ, ಮಹೇಶ ಹಟ್ಟಿಹೊಳಿ, ಬಸವರಾಜ ಕೋಳಿ, ಚಿದಾನಂದ ಕರ್ದನ್ನವರ, ವಿನಾಯಕ ಕೋಳಿ, ಕುಮಾರ ಕಬ್ಬೂರಿ, ಮುಭಾರಕ್ ಕಮತೆ, ರಿಯಾಜ್ ಫನಿಬಂಧ, ಪ್ರವೀಣ ನೇಸರಿ, ಮಹಾದೇವ ಕೇಸರಕರ್, ಸುಭಾಶ ಕಾಸಾರ, ಗಣೇಶ ಪಾಟೀಲ, ಶಾಂತು, ರಾಹುಲ್ ಜಯಕರ್, ಶಂಕರ ಭೋಸಲೆ ಸೇರಿದಂತೆ ಅನೇಕರು ಇಂದಿನ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.