ಸಮರ್ಪಕ ಬಸ್ ಸೇವೆ ಒದಗಿಸಲು ಆಗ್ರಹಿಸಿ ಪ್ರತಿಭಟನೆ
Team Udayavani, Nov 10, 2019, 4:27 PM IST
ಚನ್ನಮ್ಮನ ಕಿತ್ತೂರು: ಸಮರ್ಪಕ ಬಸ್ ಸಂಚಾರ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ತಿಗಡೊಳ್ಳಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.
ಕಳೆದ 15 ದಿನಗಳಿಂದ ಸರಿಯಾಗಿ ಬಸ್ ಬರುತ್ತಿಲ್ಲ. ಇದರಿಂದ ನಮಗೆ ಪ್ರತಿದಿನ ಶಾಲಾ-ಕಾಲೇಜಿಗೆ ಹೋಗಲು ತೊಂದರೆಯಾಗುತ್ತಿದೆ. ಬೆಳಗೆ 8 ಗಂಟೆಗೆ ಬರುವ ಬಸ್ ಮಂಗಳವಾರ ಹಾಗೂ ಬುಧವಾರ ಬಸ್ ಬರುತ್ತಿಲ್ಲ. ಇನ್ನೂಳಿದ ಬಸ್ಸುಗಳು ಸರಿಯಾದ ಸಮಯಕ್ಕೆ ಬರುವುದಿಲ್ಲ. ಈ ಬಗ್ಗೆ ಬಸ್ ನಿಲ್ದಾಣದ ನಿಯಂತ್ರಣಾಧಿ ಕಾರಿಯನ್ನು ಕೇಳಿದರೆ ಸ್ಪಂದಿಸುವುದಿಲ್ಲ. ಗ್ರಾಮ ಪಂಚಾಯತಿಯಿಂದ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿ ಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಇನ್ನೂ ನಾಲ್ಕು ದಿನದ ಒಳಗಾಗಿ ಸಮಸ್ಯೆ ಬಗೆಹರಿಸಿ ಬಸ್ಸಿನ ವ್ಯವಸ್ಥೆ ಕಲ್ಪಿಸಿಕೊಡದಿದ್ದರೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಸೇರಿಕೊಂಡು ಕಿತ್ತೂರು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಸಾವಂತ ಕಿರಬನ್ನವರ, ದೇವೇಂದ್ರ ಪಾಟೀಲ, ಚನಬಸಪ್ಪ ಮಲಶೆಟ್ಟಿ, ಬಸವರಾಜ ಶಿರಗಾಪುರ, ಅಶೋಕ ಮಡಿವಾಳರ, ಸಿದ್ದಯ್ಯ ಹೊಸಮಠ, ಬಸಪ್ಪ ದೇಗಾಂವಿ, ಸೋಮೇಶ ಗಾಣಿಗೇರ, ಈರಣ್ಣಾ ಗೋದಳ್ಳಿ, ಅದೃಶ್ಯ ಹುಡೇದ, ಕಿರಣ ಗೋದಳ್ಳಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.