ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ
Team Udayavani, Nov 22, 2019, 11:43 AM IST
ಬೆಳಗಾವಿ: ತಾಲೂಕಿನ ವಿವಿಧ ರಸ್ತೆಗಳು ಹದಗೆಟ್ಟಿದ್ದು, ರಸ್ತೆ ದುರಸ್ತಿ ಮಾಡದಿದ್ದರೆ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುವುದಾಗಿ ಜಿಪಂ ಸದಸ್ಯೆ ಸರಸ್ವತಿ ಪಾಟೀಲ ನೇತೃತ್ವದಲ್ಲಿ ಗ್ರಾಮಸ್ಥರು ಗುರುವಾರ ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ ಸ್ಥಳೀಯರು, ಹದಗೆಟ್ಟ ರಸ್ತೆ ನಿರ್ಮಾಣ ಮಾಡುವಂತೆ ಅನೇಕ ಸಲ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು. ಎಪಿಎಂಸಿಯಿಂದ ಹಂದಿಗನೂರು ಕ್ರಾಸ್, ಹಿಂಡಲಗಾ ಕ್ರಾಸ್‌ದಿಂದ ತುರಮುರಿ ಬಾಚಿ ಗ್ರಾಮಮುಖ್ಯ ರಸ್ತೆ, ಹಿಂಡಲಗಾ ಕ್ರಾಸ್‌ದಿಂದ ಮನ್ನೂರ, ವೆಂಗುರ್ಲಾ ರಸ್ತೆಯಿಂದ ಉಚಗಾಂವ ವರೆಗೆ ಸಂಪೂರ್ಣ ಹದಗೆಟ್ಟಿದೆ. ಹೀಗಾಗಿ ನಿತ್ಯ ವಾಹನ ಸವಾರರು ಪರದಾಡುವಂತಾಗಿದೆ.
ದಿನಾಲೂ ಮೂರ್‍ನಾಲ್ಕು ಜನ ಸವಾರರು ವಾಹನದ ಮೇಲಿಂದ ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ ಎಂದು ದೂರಿದರು. ಕಳೆದ ವರ್ಷವೂ ಕಂಗ್ರಾಳಿ, ಅಲತಗಾ, ಜಾಫರವಾಡಿ, ಕಡೋಲಿ, ಅಗಸಗಾ, ಹಂದಿಗನೂರ, ಕೆದನೂರ ರಸ್ತೆಗಳು ಹದಗೆಟ್ಟಿದ್ದವು. ಆಗ ರಸ್ತೆ ತಡೆದುಪ್ರತಿಭಟನೆ ನಡೆಸಿ ಸರ್ಕಾರವನ್ನು ಎಚ್ಚರಿಸಲಾಗಿತ್ತು. ಈಗ ಮತ್ತೆ ಈ ಭಾಗದ ರಸ್ತೆಗಳು ಕೆಟ್ಟಿದ್ದರಿಂದ ಕೂಡಲೇ ಜಿಲ್ಲಾಡಳಿತ ಗಮನಹರಿಸಿ ಜನರ ಸಮಸ್ಯೆಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ಸ್ಥಳೀಯರಾದ ಯಲ್ಲಪ್ಪ ಪಾಟೀಲ, ಪುಂಡಲೀಕ ಪಾಟೀಲ, ಆಶಾ ಕಿಲ್ಲೇಕರ, ಸುನೀತಾ ಜಾಧವ, ಮಹಾದೇವಿ ದೇಶನೂರ, ಸುವರ್ಣಾ ಕಾಂಬಳೆ, ಕವಿತಾ ಶಿಂಧೆ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.