ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ
Team Udayavani, Dec 4, 2019, 4:58 PM IST
ಬೆಳಗಾವಿ: ತಾಲೂಕಿನ ಅರಳಿಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂಲಿಕಟ್ಟಿ ಜನತಾ ಕಾಲೋನಿಗೆ ಮೂಲ ಸೌಲಭ್ಯ ಕಲ್ಪಿಸಬೇಕುಎಂದು ಆಗ್ರಹಿಸಿ ಗ್ರಾಮಸ್ಥರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಗ್ರಾಮದ ಬಡವರಿಗೆ ಸರ್ಕಾರ ಮಂಜೂರು ಮಾಡಿದ ಆಶ್ರಯ ಮನೆಗಳಲ್ಲಿ ಸುಮಾರು 25ವರ್ಷಗಳಿಂದ 40 ಕುಟುಂಬಗಳು ಬದುಕು ಸಾಗಿಸುತ್ತಿವೆ. ಗ್ರಾಮದಿಂದ ಜನತಾ ಕಾಲೋನಿ 3 ಕಿಮೀ ಅಂತರದಲ್ಲಿದೆ. ಈ ಕುಟುಂಬಗಳು ಕುಡಿಯುವ ನೀರು, ರಸ್ತೆ, ವಿದ್ಯುತ್ ಇಲ್ಲದೇ ನಿತ್ಯ ಸಮಸ್ಯೆ ಅನುಭವಿಸುತ್ತಿವೆ ಎಂದು ದೂರಿದರು.
ಜನತಾ ಕಾಲೋನಿ ಭಾಗದಲ್ಲಿ ನಿರಂತರ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಕಲ್ಲುಗಳನ್ನು ಬ್ಲಾಸ್ಟ್ ಮಾಡುವುದರಿಂ ಮನೆ ಗೋಡೆಗಳು ಬಿರುಕು ಬಿಡುತ್ತಿವೆ.ಕೆಲ ಮನೆಗಳಂತೂ ಬೀಳುವ ಸ್ಥಿತಿಯಲ್ಲಿವೆ.
ಹೀಗಾಗಿ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಕಲ್ಲು ಗಣಿಗಾರಿಕೆ ಬಂದ್ ಮಾಡಿ ಗಣಿಗಾರಿಕೆ ಮಾಲೀಕರ ವಿರುದ್ಧ ಕ್ರಮ ಕೈಗೊಂಡು ಜತನಾ ಕಾಲೋನಿಗೆ ಮೂಲ ಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿದರು.
ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಡಾಂಬರೀಕರಣ ಮಾಡುವಂತೆ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಅವರ ಗಮನಕ್ಕೆ ತರಲಾಗಿತ್ತು. ಆದರೆ ಇದು ಇನ್ನೂವರೆಗೆ ಸಮಸ್ಯೆಯಾಗಿಯೇ ಉಳಿದಿದೆ. ಇನ್ನೂವರೆಗೆ ರಸ್ತೆ ದುರಸ್ತಿ ಮಾಡಿಲ್ಲ. ಸರ್ಕಾರದಿಂದ ಬಂದ ಹಣ ಎಲ್ಲಿಗೆ ಹೋಯಿತು ಎಂದು ಗ್ರಾಮಸ್ಥರು ಪ್ರಶ್ನಿಸಿದರು.
ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮೇಲ್ಛಾವಣಿ ಬಿರುಕು ಬಿಟ್ಟಿದೆ. ಇಲ್ಲಿಯ ಮಕ್ಕಳು ಜೀವ ಕೈಯಲ್ಲಿ ಹಿಡಿದು ಕಲಿಯುತ್ತಿದ್ದಾರೆ. ಯಾವ ಸಂದರ್ಭದಲ್ಲಾದರೂ ಕಟ್ಟಡ ಕುಸಿದು ಬೀಳುವ ಸ್ಥಿತಿಯಲ್ಲಿದ್ದರಿಂದ ಶಾಲೆಯನ್ನು ಮುಚ್ಚಲಾಗಿದೆ. ಕೂಡಲೇ ಶಾಲೆ ದುರಸ್ತಿಗೊಳಿಸಿ ಪುನಾರಂಭಿಸಬೇಕು ಎಂದು ಒತ್ತಾಯಿಸಿದರು.
ಗ್ರಾಮಸ್ಥರಾದ ಸವರಾಜ ಸುಲಕುಂಪಿ, ಮಂಜುನಾಥ ಸಂಕಣ್ಣವರ, ಬಸವರಾಜ ರೊಟ್ಟಿ, ಬಾಳೇಶ ಮಂಗಣ್ಣವರ, ನಿಲವ್ವ ದೊಡ್ಡಗೌಡ್ರ, ರತ್ನವ್ವ ಬೇಟಗೇರಿ, ರುದ್ರಪ್ಪ ಹುಬ್ಬಳ್ಳಿ, ಗಂಗವ್ವ ಅವರೊಳ್ಳಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
MUST WATCH
ಹೊಸ ಸೇರ್ಪಡೆ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.