ಕೃಷ್ಣಾ ನದಿಗೆ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ
Team Udayavani, May 13, 2019, 2:40 PM IST
ಉಗಾರ ಬಿಕೆ: ನಾಲ್ಕು ದಿನದಲ್ಲಿ ಕೃಷ್ಣಾ ನದಿಗೆ ನೀರು ಹರಿಸುವಂತೆ ಆಗ್ರಹಿಸಿ ಉಗಾರ ಬುದ್ರುಕ ಗ್ರಾಮದ ಮಹಾವೀರ ಸರ್ಕಲ್ದಲ್ಲಿ ಉಗಾರ ವಿಕಾಸ ವೇದಿಕೆ ಆಶ್ರಯದಲ್ಲಿ ರವಿವಾರ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಯುವ ಮುಖಂಡ ಶೀತಲ ಪಾಟೀಲ ಮಾತನಾಡಿ, ಕಳೆದ 2 ತಿಂಗಳುಗಳಿಂದ ಕೃಷ್ಣಾ ನದಿಯು ಸಂಪೂರ್ಣ ಬತ್ತಿ ಹೋಗಿ ನೀರಿನ ಹಾಹಾಕಾರ ಉಂಟಾಗಿದ್ದರು ಕೂಡ ರಾಜ್ಯ ಸರ್ಕಾರವಾಗಲಿ, ಜಿಲ್ಲಾಡಳಿತವಾಗಲಿ, ಜನಪ್ರತಿನಿಧಿಗಳಾಗಿ ಪ್ರಾಮಾಣಿಕವಾಗಿ ಈ ಗಂಭೀರ ಸಮಸ್ಯೆಗೆ ಸ್ಪಂದಿಸದಿರುವುದು ಜನರ ಆಕ್ರೋಶಕ್ಕೆ ಗುರಿಯಾಗಿದ್ದಾರೆಂದು ಆರೋಪಿಸಿದರು.
ತಾಪಂ ಸದಸ್ಯ ವಸಂತ ಖೋತ ಮಾತನಾಡಿ, ಬಂದ್, ಮನವಿ, ಪ್ರತಿಭಟನೆಗಳಿಂದ ಸರ್ಕಾರ ಎಚ್ಚೆತ್ತುಕೊಳ್ಳದಿರುವುದು ಖೇಧಕರ ಸಂಗತಿ. ಜನರ ತಾಳ್ಮೆಯನ್ನು ಪರೀಕ್ಷಿಸಬೇಡಿ. ಅವರ ಸಹನೆಯ ಕಟ್ಟೆ ಒಡೆಯುವ ಮುಂಚೆ ಕೃಷ್ಣಾ ನದಿಗೆ ನೀರು ಹರಿಸಿ ಜನ-ಜಾನುವಾರುಗಳನ್ನು ರಕ್ಷಿಸುವಂತೆ ಒತ್ತಾಯಿಸಿದರು.
ವಿಕಾಸ ವೇದಿಕೆ ಸದಸ್ಯ ಶೀತಲ ಕುಂಬಾರ ಮಾತನಾಡಿ, ಕೃಷ್ಣಾ ನದಿಗೆ ನೀರು ಬಿಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡಿಸಿ ನದಿ ತೀರದ ಜನರ ದಿಕ್ಕು ತಪ್ಪಿಸಲಾಗುತ್ತಿದೆ. ಕೊಯ್ನಾ ಡ್ಯಾಮ್‌ದಿಂದ ನೀರು ಬಿಟ್ಟಾಗ ಮಾತ್ರ ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಿಗೆ ಕೃಷ್ಣಾ ನದಿಯ ನೀರು ಬರಲು ಸಾಧ್ಯವೆಂದು ಹೇಳಿದರು.
ನಂತರ ಉಪ ತಹಶೀಲ್ದಾರ್ ವಿ.ಬಿ. ಚೌಗಲಾ, ಕಂದಾಯ ಅಧಿಕಾರಿ ಬಿ.ಬಿ. ಬೋರಗಲ್ ಅವರಿಗೆ ಮನವಿ ಸಲ್ಲಿಸಲಾಯಿತು.
ಶೀತಲ ಪಾಟೀಲ, ವಸಂತ ಖೋತ, ಅಪ್ಪಾಸಾಬ ಚೌಗಲಾ, ವಿಕಾಸ ವೇದಿಕೆಯ ಬಂಡು ತಮದಡ್ಡಿ, ಉದಯ ಉಮರಾಣಿ, ಶೀತಲ ಕುಂಬಾರ, ಅಭಿನಂದನ ಸದಲಗೆ, ಅಪ್ಪು ಸಲಗರೆ, ಮುರಗೇಶ ಕುಂಬಾರ, ರಾಹುಲ ಕಬಾಡಗೆ, ಅಣ್ಣಾಸಾಬ ಖೋತ, ವಿಜಯ ಸಿಂಧೆ, ಸುರೇಶ ಸಮಾಜಗೆ, ಶಾಂತಿನಾಥ ವಸವಾಡೆ, ಮನೋಹರ ದೇವಮೂರೆ, ಶೀತಲ ಶಹಾ, ದಾದಾಪೀರ ನೇಜಕರ, ಕಲ್ಲು ಕುರಬರ, ಸಾಗರ ಪೂಜಾರಿ, ಸುಭಾಷ ಪೋತದಾರ, ಸುನೀಲ ಮಹಾಜನ, ಇಕಬಾಲ ಜಮಖಾನೆ, ಬಾಳು ಚೌಗಲೆ, ಮಹಾವೀರ ಖಂಡೆರಾಜುರಿ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಕಾರು ಢಿಕ್ಕಿ; ಸ್ಕೂಟರ್ ಸವಾರನಿಗೆ ಗಾಯ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.