ಬಸ್ ಸೌಲಭ್ಯ ಕಲ್ಪಿಸಲು ಪ್ರತಿಭಟನೆ
Team Udayavani, Nov 26, 2019, 2:15 PM IST
ಬೆಳಗಾವಿ: ನಿಗದಿತ ವೇಳೆಗೆ ಬಸ್ ಬಿಡದೇ ವಿದ್ಯಾರ್ಥಿಗಳಿಗೆ ತೊಂದರೆಯನ್ನುಂಟು ಮಾಡುತ್ತಿರುವ ಸಾರಿಗೆ ಇಲಾಖೆ ವಿರುದ್ಧ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷದ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸೋಮವಾರ ನಗರದ ಸಿಬಿಟಿಯಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ದಿನನಿತ್ಯ ಸರಿಯಾಗಿ ಬಸ್ ಬಾರದೇ ಸಮಸ್ಯೆ ಆಗುತ್ತಿದೆ. ನಿತ್ಯ ಸಾವಿರಾರು ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಬರುತ್ತಿರುತ್ತಾರೆ. ಆದರೆ ಸಮಯಕ್ಕೆ ಸರಿಯಾಗಿ ಬಸ್‌ಗಳು ಬರುವುದಿಲ್ಲ. ಗಂಟೆಗಟ್ಟಲೇ ಬಸ್‌ಗಳಿಗಾಗಿ ಕಾಯುತ್ತ ನಿಲ್ಲಬೇಕಾಗಿದೆ. ಬಸ್ ನಿಲ್ದಾಣದ ಬಳಿ ನಿಲ್ಲಿಸದೇ ಸುಮಾರು 100 ಮೀಟರ್ ವರೆಗೆ ಚಾಲಕರು ಒಯ್ಯುತ್ತಾರೆ. ಹೀಗಾಗಿ ಬಸ್ ಹತ್ತುವುದು ಕಷ್ಟಕರವಾಗಿದೆ ಎಂದು ಆರೋಪಿಸಿದರು.
15 ನಿಮಿಷಕ್ಕೆ ಒಂದು ಬಸ್ ಬಿಡುಗಡೆ ಮಾಡಬೇಕು. ಬಸ್ ನಿಲ್ದಾಣಗಳಲ್ಲಿ ಬಸ್ ನಿಲ್ಲುವಂತೆ ವ್ಯವಸ್ಥೆ ಮಾಡಬೇಕು. ಎಲ್ಲ ನಿಲ್ದಾಣಗಳಲ್ಲಿಯೂ ಕಡ್ಡಾಯವಾಗಿ ಬಸ್ ನಿಲ್ಲಿಸಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಬೇಕು. ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಸಾರಿಗೆ ಇಲಾಖೆ ವಿರುದ್ಧ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.