ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ


Team Udayavani, Sep 17, 2019, 11:40 AM IST

bg-tdy-2

ಬೆಳಗಾವಿ: ಬಸ್‌ ಸೌಕರ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾವಲಗಟ್ಟಿ ಪುನರ್ವಸತಿ ಕೇಂದ್ರ 2ರ ಗ್ರಾಮಸ್ಥರು ಸೋಮವಾರ ನಾವಲಗಟ್ಟಿ ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಬೆಳಗಾವಿ: ಬಸ್‌ ಸೌಲಭ್ಯ, ಸ್ಮಶಾನ ಭೂಮಿ ಮಂಜೂರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೈಲಹೊಂಗಲ ತಾಲೂಕಿನ ನಾವಲಗಟ್ಟಿ ಪುನರ್ವಸತಿ ಕೇಂದ್ರ 2ರ ಗ್ರಾಮಸ್ಥರು ಸೋಮವಾರ ನಾವಲಗಟ್ಟಿ ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಸರ್ಕಾರದ ಯೋಜನೆಗಾಗಿ ಮನೆ, ಮಠ ಹಾಗೂ ಜಮೀನುಗಳನ್ನು ಕಳೆದುಕೊಂಡ ಕುಟುಂಬಗಳಿಗೆ ಮೂಲ ಸೌಕರ್ಯ ಒದಗಿಸುವಲ್ಲಿ ಸರ್ಕಾರ ಮತ್ತು ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ. ತಿಗಡಿ ಹರಿನಾಲಾ ಹಿನ್ನೀರಿನಲ್ಲಿ ಮನೆ, ಜಮೀನುಗಳನ್ನು ಕಳೆದುಕೊಂಡ ಸಂತ್ರಸ್ತರಾದವರನ್ನು ಕಳೆದ 20 ವರ್ಷಗಳ ಹಿಂದೆ ಪುನರ್ವಸತಿ ಕೇಂದ್ರಗಳಲ್ಲಿ ನಿವೇಶನ ನೀಡಿ ಸ್ಥಳಾಂತರಿಸಲಾಗಿದೆ. ಆದರೆ ಪುನರ್ವತಿ ಕೇಂದ್ರದಲ್ಲಿ ಜನರು ಬಸ್‌ ಸೌಕರ್ಯ ಇಲ್ಲದೇ ಪರದಾಡಬೇಕಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕಪಡಿಸಿದರು.

ಬಸೌ ಸೌಲಭ್ಯವಿಲ್ಲದೇ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು ಮೊದಲಾದವರು ಸುಮಾರು 4 ಕಿಮೀ ನಡೆದುಕೊಂಡು ನಾವಲಗಟ್ಟಿ ಗ್ರಾಮಕ್ಕೆ ಬರಬೇಕು. ಇದರಿಂದಾಗಿ ಎಷ್ಟೋ ಮಕ್ಕಳು ಅರ್ಧಕ್ಕೆ ಶಾಲೆಯನ್ನೇ ಬಿಟ್ಟಿವೆ. ಜಿಲ್ಲಾಡಳಿತ ಹಾಗೂ ಸರ್ಕಾರ ಪುನರ್ವಸತಿ ಕೇಂದ್ರದ ಅಭಿವೃದ್ಧಿ ವಿಷಯದಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿವೆ ಎಂದು ಆರೋಪ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮದ ಮುಖಂಡ ಜಗದೀಶ ನಾವಲಗಟ್ಟಿ, ತಿಗಡಿ ಹರಿನಾಲಾ ಡ್ಯಾಮ್‌ ಹಿನ್ನೀರಿನಲ್ಲಿ ಮನೆ ಹಾಗೂ ಜಮೀನುಗಳನ್ನು ಕಳೆದುಕೊಂಡ ಕುಟುಂಬಗಳು ತಮ್ಮ ಮನೆಯ ಸದಸ್ಯರು ನಿಧನ ಹೊಂದಿದ ಸಂದರ್ಭದಲ್ಲಿ ಸ್ಮಶಾನ ಭೂಮಿ ಇಲ್ಲದೇ ಅಂತ್ಯಸಂಸ್ಕಾರ ಮಾಡಲು ಪರದಾಡುತ್ತಿದ್ದಾರೆ. ಸ್ಮಶಾನ ಭೂಮಿ ಇರದ ಕಾರಣ ರಸ್ತೆ ಬದಿಯಲ್ಲಿ ಶವ ಸಂಸ್ಕಾರ ಮಾಡುತ್ತಿದ್ದಾರೆ. ಸರ್ಕಾರದ ಯೋಜನೆಗಾಗಿ ಮನೆ, ಮಠ ಕಳೆದುಕೊಂಡವರಿಗೆ ಅತ್ಯವಶ್ಯವಾದ ಸ್ಮಶಾನ ಭೂಮಿ ನೀಡುವಲ್ಲಿ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ನಾವಲಗಟ್ಟಿ ಪುನರ್ವಸತಿ ಕೇಂದ್ರ 2 ಕ್ಕೆ ತಕ್ಷಣ ಸ್ಮಶಾನ ಭೂಮಿ ಕಲ್ಪಿಸಲು ಕ್ರಮ ಕೈಗೊಂಡು ಹಲವು ವರ್ಷಗಳಿಂದ ಎದುರಾಗಿರುವ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು ಎಂದು ಹಲವು ಬಾರಿ ತಾಲೂಕಾ ಆಡಳಿತಕ್ಕೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.

ಇದಲ್ಲದೇ ಪಡಿತರ ಧಾನ್ಯವನ್ನು ನಾಲ್ಕು ಕಿಮಿ ದೂರದಲ್ಲಿರುವ ನಾವಲಗಟ್ಟಿ ಗ್ರಾಮಕ್ಕೆ ಬಂದು ತೆಗೆದುಕೊಂಡು ಹೋಗಬೇಕಿದೆ. ಕಾರಣ ಪುನರ್ವಸತಿ ಕೇಂದ್ರ-2 ಕ್ಕೆ ಬಸ್‌ ಸೌಕರ್ಯ, ಸ್ಮಶಾನ ಭೂಮಿ ನೀಡುವುದು ಹಾಗೂ ಪಡಿತರ ಧಾನ್ಯವನ್ನು ಪುನರ್ವಸತಿ ಕೇಂದ್ರದಲ್ಲಿಯೇ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಪಂ ಇಒ ಸಮೀರ ಮುಲ್ಲಾ ಹಾಗೂ ನೀರಾವರಿ ಇಲಾಖೆ ಎಂಜಿನಿಯರ್‌ ಆರ್‌.ಜಿ.ಯಲಿಗಾರ

ಮಾತನಾಡಿ, ಮುಂಬರುವ 20 ದಿನಗಳಲ್ಲಿ ಸಂತ್ರಸ್ತರ ಕುಂಟುಂಬಗಳು ಎದುರಿಸುತ್ತಿರುವ ಸಮಸ್ಯೆಗೆ ಪರಿಹಾರ ಕಲ್ಪಿಸಿ ಕೊಡುವುದಾಗಿ ಹೇಳಿದರು.

ಅಡವಯ್ಯ ಚಿಕ್ಕಮಠ, ಬಸವರಾಜ ಪಾತ್ರೋಟ, ಸಂತೋಷ ಕಲ್ಲೂರ, ಸುರೇಶ ಕೇಂದ್ರಿ, ಮಲ್ಲಿಕಾರ್ಜುನ ಕಲ್ಲೂರ, ಬಸವರಾಜ ಹೊಸಮನಿ, ದುಂಡಪ್ಪ ಕಲ್ಲೂರ, ಈರಯ್ಯ ಚಿಕ್ಕಮಠ, ಯಲ್ಲಪ್ಪ ಉಪ್ಪಾರಟ್ಟಿ, ಬಸವರಾಜ ಉರಮನಟ್ಟಿ, ಪ್ರವೀಣ ಪಾತ್ರೋಟ, ಶಿವಪ್ಪ ಕಮ್ಮಾರ, ರವಿ ಮರೆದ, ಶೋಭಾ ಪಾತ್ರೋಟ, ಇಂದ್ರವ್ವ ಪಾತ್ರೋಟ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Sullia: Airavata bus stopped

Sullia: ಕೆಟ್ಟು ನಿಂತ ಐರಾವತ ಬಸ್‌

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

Puttur: ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.