ಆಶ್ರಯ ಮನೆ ಮಂಜೂರಾತಿಗೆ ಪ್ರತಿಭಟನೆ
•ಜಿಲ್ಲಾಧಿಕಾರಿ ಕಚೇರಿ ಎದುರು ರಾಷ್ಟ್ರವಾದಿ ಕಾಂಗ್ರೆಸ್ ಜಿಲ್ಲಾ ಘಟಕ ಕಾರ್ಯಕರ್ತರು ಆಕ್ರೋಶ
Team Udayavani, Jul 23, 2019, 3:41 PM IST
ಬೆಳಗಾವಿ: ಆಶ್ರಯ ಮನೆಗಳನ್ನು ಮಂಜೂರು ಮಾಡುವಂತೆ ಆಗ್ರಹಿಸಿ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಬೆಳಗಾವಿ: ಆಶ್ರಯ ಮನೆಗಳನ್ನು ಮಂಜೂರು ಮಾಡುವಂತೆ ಆಗ್ರಹಿಸಿ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಮನೆಗಳಿಲ್ಲದೇ ಅನೇಕ ಕುಟುಂಬಗಳು ಗುಡಿಸಲಿನಲ್ಲಿ ವಾಸಿಸುತ್ತಿದ್ದಾರೆ. ಆಶ್ರಯ ಮನೆಗಳಿಗಾಗಿ ಸಂಬಂಧಿಸಿದ ಇಲಾಖೆಗಳನ್ನು ಭೇಟಿಯಾದರೂ ಯಾವುದೇ ಪ್ರಯೋಜನವಾಗಿಲ್ಲ. ಬೆಳಗಾವಿಯ ಆಝಾದ ನಗರದಲ್ಲಿ ಅನೇಕ ಕುಟುಂಬಗಳ ಸದಸ್ಯರು ತಗಡಿನ ಶೆಡ್‌ಗಳಲ್ಲಿ ವಾಸಿಸುತ್ತಿದ್ದಾರೆ. ಈ ಕುಟುಂಬಕ್ಕೆ ಸ್ವಂತ ಜಾಗ ಹಾಗೂ ಮನೆ ಇಲ್ಲದಿರುವುದರಿಂದ ಎಲ್ಲೆಂದರಲ್ಲಿ ವಾಸಿಸುವ ಪರಿಸ್ಥಿತಿ ಇದೆ. ಹೀಗಾಗಿ ಇಂತಹ ಕುಟುಂಬಗಳನ್ನು ಗುರುತಿಸಿ, ಅವರಿಗೆ ಆಶ್ರಯ ಮನೆಗಳನ್ನು ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.
ಪಾಲಿಕೆ ವ್ಯಾಪ್ತಿಯ ಆನಿಗೋಳ, ಮಜಗಾಂವ, ಕಣಬರಗಿ, ಅಲಾರವಾಡ, ಬಸವನ ಕುಡಚಿ, ಉದ್ಯಮಬಾಗ, ವಂಟಮೂರಿ ಸೇರಿದಂತೆ ವಿವಿಧೆಡೆಯೂ ಅನೇಕ ಕುಟುಂಬಗಳು ಕೊಳಚೆ ಪ್ರದೇಶದಲ್ಲಿ ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಿಸಿಕೊಂಡು ವಾಸಿಸುತ್ತಿವೆ. ಕೊಳಚೆ ನಿರ್ಮೂಲನೆ ಮಂಡಳಿಯಿಂದ ನಗರದಲ್ಲಿ ಮತ್ತೂಮ್ಮೆ ಸರ್ವೇ ಮಾಡಿ ಅರ್ಹ ಜನರಿಗೆ ಆಶ್ರಯ ಮನೆಗಳನ್ನು ನಿರ್ಮಿಸಿಕೊಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಗ್ರಾಮೀಣ ಅಧ್ಯಕ್ಷ ದುರ್ಗೇಶ ಮೇತ್ರಿ, ಜಿಲ್ಲಾ ಘಟಕದ ಮಹಿಳಾ ಅಧ್ಯಕ್ಷೆ ಪ್ರಭಾವತಿ ಭಾಲೇಕರ, ನಗರ ಘಟಕದ ಅಧ್ಯಕ್ಷ ಸದಾನಂದ ಪಾಟೀಲ, ಭಾರತಿ ಭಾಲೇಕರ, ಸುಪ್ರಿಯಾ ಮೋಟೆಕಾರ, ಕೆ.ಜಿ. ಪಾಟೀಲ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.