ಬೆಳಗಾವಿಯಲ್ಲಿ ಜಲ ಕಲಹದ ಬೆಂಕಿ!
|ಅಥಣಿಯಲ್ಲಿ ಬಂದ್ |ಚಿಕ್ಕೋಡಿಯಲ್ಲಿ ರೈತರ ಪ್ರತಿಭಟನೆ |ಹಿಡಕಲ್ ನೀರುಬಿಡುಗಡೆಗೆ ಗೋಕಾಕ-ಮೂಡಲಗಿ ರೈತರ ವಿರೋಧ
Team Udayavani, May 21, 2019, 7:38 AM IST
ಬೆಳಗಾವಿ: ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಿಸಬೇಕು ಎಂದು ಆಗ್ರಹಿಸಿ ನದಿ ತೀರದ ಗ್ರಾಮಗಳ ಜನರು ಸರಕಾರದ ಮೇಲೆ ಒತ್ತಡ ಹಾಕಿ ಪ್ರತಿಭಟನೆ ನಡೆಸುತ್ತಿದ್ದರೆ ಇನ್ನೊಂದೆಡೆ ಹಿಡಕಲ್ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುವ ಸರಕಾರದ ನಿರ್ಧಾರ ಖಂಡಿಸಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ರೈತರು ಮತ್ತು ಸಾರ್ವಜನಿಕರು ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಚನ್ನಮ್ಮ ವೃತ್ತದಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿದ ರೈತರು ನಂತರ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಪ್ರತಿಭಟನೆ ನಡೆಸಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹಿಡಕಲ್ ಜಲಾಶಯದಿಂದ ಕೃಷ್ಣಾ ನದಿಗೆ ಒಂದು ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಅವರು ನೀಡಿರುವ ಆದೇಶ ಅವೈಜ್ಞಾನಿಕ ಎಂದು ಟೀಕಿಸಿದರು.
ಹಿಡಕಲ್ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಟ್ಟರೆ ಘಟಪ್ರಭಾ ಎಡ ಹಾಗೂ ಬಲದಂಡೆ ವ್ಯಾಪ್ತಿಯ ರೈತರಿಗೆ ಬಹಳ ತೊಂದರೆಯಾಗಲಿದೆ. ಇದರಿಂದ ಗೋಕಾಕ ಹಾಗೂ ಮೂಡಲಗಿ ಭಾಗದ ಗ್ರಾಮಗಳ ಜನ ಹಾಗೂ ಜಾನುವಾರುಗಳಿಗೆ ಬಹಳ ಸಮಸ್ಯೆ ಉಂಟಾಗಲಿದೆ. ಕಾರಣ ನೀರು ಬಿಡುವ ನಿರ್ಧಾರವನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
ಭೀಕರ ಬರದಿಂದ ಈಗಾಗಲೇ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಕಾರಣ ಎಡ ಹಾಗೂ ಬಲದಂಡೆ ಕಾಲುವೆಗಳಿಗೆ ಪ್ರತಿ ದಿನ ತಲಾ 2000 ಕ್ಯೂಸೆಕ್‌ನಂತೆ ಐದು ದಿನಗಳ ಕಾಲ ಒಂದು ಟಿಎಂಸಿ ಹಾಗೂ ನದಿಗೆ 1.5 ಟಿಎಂಸಿ ನೀರು ಬಿಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಅರಭಾವಿ ಮಂಡಲ ಅಧ್ಯಕ್ಷ ಸುಭಾಸ ದುಂಡಪ್ಪ ಪಾಟೀಲ, ಕೃಷ್ಣಾ ನದಿ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿರುವದಕ್ಕೆ ಸರಕಾರದ ನಿರ್ಲಕ್ಷ್ಯವೇ ಕಾರಣ. ಇದರಲ್ಲಿ ರಾಜಕೀಯ ಬಿಟ್ಟು ಮಹಾರಾಷ್ಟ್ರ ಮುಖ್ಯಮಂತ್ರಿಗಳ ಜೊತೆ ನೇರ ಮಾತುಕತೆ ನಡೆಸಿ ಅಲ್ಲಿನ ಜಲಾಶಯಗಳಿಂದ ನೀರು ಬಿಡಿಸುವ ವ್ಯವಸ್ಥೆ ಮಾಡಲಿ. ಆದರೆ ಯಾವುದೇ ಕಾರಣಕ್ಕೂ ಹಿಡಕಲ್ ಜಲಾಶಯದಿಂದ ನೀರು ಬಿಡಬಾರದು. ಒಂದು ವೇಳೆ ಬಿಡುಗಡೆ ಮಾಡಿದರೆ ಅದರ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದು ಎಂದು ಹೇಳಿದರು.
ಗೋಕಾಕ ಹಾಗೂ ಮೂಡಲಗಿ ತಾಲೂಕಿನಲ್ಲಿ ಭೀಕರ ಬರಗಾಲದಿಂದ ಜನ, ಜಾನುವಾರುಗಳಿಗೆ ತೀವ್ರ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಘಟಪ್ರಭಾ ನದಿ ತೀರದ ಗ್ರಾಮಸ್ಥರ ನೀರಿನ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ಘಟಪ್ರಭಾ ಎಡದಂಡೆ ಹಾಗೂ ಬಲದಂಡೆ ಕಾಲುವೆಗೆ ತಕ್ಷಣವೇ ನೀರು ಬಿಡುಗಡೆ ಮಾಡಬೇಕು ಎಂದರು.
ಜಿಲ್ಲಾ ಪಂಚಾಯತ್ ಸದಸ್ಯ ಗೋವಿಂದ ಕೊಪ್ಪದ ಮೊದಲಾದವರು ಮಾತನಾಡಿ, ಗೋಕಾಕ ಮತ್ತು ಮೂಡಲಗಿ ತಾಲೂಕಿನ ಜನತೆ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಹಿಡಕಲ್ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡುವಂತೆ ಸಚಿವ ಡಿ.ಕೆ.ಶಿವಕುಮಾರ ನೀರಿನ ವಿಚಾರದಲ್ಲಿ ದ್ವೇಷದ ರಾಜಕೀಯ ಮಾಡುತ್ತಿದ್ದಾರೆ. ಅವರಿಗೆ ಇಲ್ಲಿಯ ಜನರ ಬಗ್ಗೆ ಕಾಳಜಿ ಇದ್ದರೆ ಕೃಷ್ಣಾ ನದಿಗೆ ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಮಾಡಿಸಲಿ. ಅದಕ್ಕೆ ನಮ್ಮ ಅಭ್ಯಂತರ ಇಲ್ಲ ಎಂದು ಹೇಳಿದರು.
ಈ ಭಾಗದ ರೈತರ ಪರವಾಗಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಒಬ್ಬರೇ ಧ್ವನಿ ಎತ್ತಿದ್ದಾರೆ. ಅವರು ಪ್ರತಿನಿತ್ಯ ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗೆ ಭೇಟಿ ನೀಡಿ ರೈತರಿಗೆ ನೀರು ಮುಟ್ಟಿಸುವಲ್ಲಿ ಶ್ರಮಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಹೇಳಿದರು.
ಘಟಪ್ರಭಾ ನೀರು ಬಳಕೆದಾರರ ಮಹಾಮಂಡಳ ಅಧ್ಯಕ್ಷ ಅಶೋಕ ಕಂಡ್ರಟ್ಟಿ, ಬಸವಂತ ಕಮತಿ, ರೈತ ಮುಖಂಡ ಭೀಮಸಿ ಗದಾಡಿ, ಗಣಪತಿ ಇಳಿಗೇರಿ, ವಿಠuಲ ಪಾಟೀಲ, ಮಹಾದೇವ ತಾಂಬಡೆ, ಲಕ್ಷ್ಮಣ ನೀಲನ್ನವರ, ಸಿದ್ದಪ್ಪ ಹಮ್ಮನವರ, ರಾಮಯ್ಯ ಮಠದ, ಮಹಾದೇವ ತುಕ್ಕಾನಟ್ಟಿ, ಸುಭಾಷ ಹಾವಾಡಿ, ರಾಜು ಬೈರಗೋಳ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Belagavi: ಯುವಕನ ಮೇಲೆ ಗುಂಡಿನ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.