ಹೆಸ್ಕಾಂ ವಿಭಾಗ ಕಚೇರಿ ಎದುರು ಪ್ರತಿಭಟನೆ-ಆಕ್ರೋಶ
Team Udayavani, Mar 29, 2022, 1:44 PM IST
ಘಟಪ್ರಭಾ: ಪ್ರತಿ ಹಳ್ಳಿಗಳಲ್ಲಿ 7 ಗಂಟೆ ತ್ರಿಫೇಸ್ ವಿದ್ಯುತ್ ನೀಡುವುದು, ವಿದ್ಯುತ್ ತಂತಿ ನವೀಕರಣ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗೋಕಾಕ ತಾಲೂಕು ಘಟಕದಿಂದ ಹೆಸ್ಕಾಂ ವಿಭಾಗ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಬೆಳಗ್ಗೆ ಕಚೇರಿ ಎದುರು ಜಮಾಯಿಸಿದ ಕಾರ್ಯಕತರು ಪ್ರತಿಭಟನೆ ನಡೆಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿರುವ ಪ್ರಕಾರ ಪ್ರತಿ ಹಳ್ಳಿಗಳಲ್ಲಿಯೂ ಹಗಲು 7 ಗಂಟೆಗಳ ಕಾಲ್ ತ್ರಿಫೇಸ್ ವಿದ್ಯುತ್ ಪೂರೈಸಬೇಕು. ಲೋಡ್ ಶೆಡ್ಡಿಂಗ್ ನೆಪವಿಟ್ಟುಕೊಂಡು ರಾತ್ರಿ ಕರೆಂಟ್ ಕಟ್ ಮಾಡುವುದು ನಿಲ್ಲಿಸಬೇಕು. ಸಾಯಂಕಾಲ 6ರಿಂದ ಬೆಳಗ್ಗೆ 6ರವರೆಗೆ ಸಿಂಗಲ್ ಫೇಸ್ ವಿದ್ಯುತ್ ನಿರಂತರ ನೀಡುವಂತೆ ಆಗ್ರಹಿಸಿದರು.
ಪ್ರತಿ ಹಳ್ಳಿಗಳಲ್ಲಿ ವಿದ್ಯುತ್ ತಂತಿಗಳನ್ನು ನವೀಕರಣ ಮಾಡಬೇಕು. ಹಳ್ಳಿಗಳಲ್ಲಿ ಲೈನ್‌ಮನ್‌ಗಳು ಟಿ.ಸಿ, ಕೇಬಲ್ ಮತ್ತು ಆಯಿಲ್ ಚೇಂಜ್ ಮಾಡಲು ಹಣ ಕೇಳಿ ಪಡೆಯುತ್ತಿದ್ದು ಮತ್ತು ರೈತರಿಗೆ ಸರಿಯಾಗಿ ಮಾಹಿತಿ ನೀಡದೆ ರೈತರನ್ನು ವಂಚಿಸುತ್ತಿರುವುದನ್ನು ನಿಲ್ಲಿಸಬೇಕು. ಜತೆಗೆ ಅಂಥವರ ಮೇಲೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಸೇನೆ ವತಿಯಿಂದ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಮನವಿಯಲ್ಲಿ ಎಚ್ಚರಿಸಲಾಗಿದೆ.
ಈ ವೇಳೆ ರಾಜ್ಯ ಕಾರ್ಯದರ್ಶಿ ಭೀಮಶಿ ಗದಾಡಿ, ಜಿಲ್ಲಾಧ್ಯಕ್ಷ ಸತ್ತೆಪ್ಪ ಮಲ್ಲಾಪುರ, ತಾಲೂಕು ಅಧ್ಯಕ್ಷ ಮುತ್ತೆಪ್ಪ ಭಾಗಣ್ಣವರ, ಶಂಕರ ಮದಿಹಳ್ಳಿ, ಕುಮಾರ ತಿಗಡಿ, ರಾಯಪ್ಪ ಗೌಡಪ್ಪನವರ, ವೆಂಕಪ್ಪ ಕೊಪ್ಪದ, ರಮೇಶ ತಿಗಡಿ, ಲಕ್ಷ್ಮಣ ಹಳ್ಳೂರ, ಮಲ್ಲೇಶ ನಾಯ್ಕ, ಸಿದ್ದಪ್ಪ ಗೌಡಪ್ಪನವರ, ಅವಿನಾಶ್ ಖಾನಪ್ಪನವರ, ಶಿವಪ್ಪ ಹೊಸಮನಿ, ಸಿದ್ದಪ್ಪ ತಪಸಿ, ರಮೇಶ ವ್ಯಾಪರಕಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Belagavi: ಗಾಂಧಿ ಭಾರತ ಹಿನ್ನೆಲೆ ಡಿ. 26, 27 ರಂದು ಕೆಲ ಶಾಲೆಗಳಿಗೆ ರಜೆ
Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು
Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.