![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 17, 2019, 3:48 PM IST
ಬೆಳಗಾವಿ: ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಕ್ಷಣ ಕ್ಷಣಕ್ಕೂ ಒಂದಿಲ್ಲೊಂದು ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಅವರ ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರು ಈಗಿರುವ ಬಿಜೆಪಿ ಅಭ್ಯರ್ಥಿ ಕುಮಟಳ್ಳಿಯನ್ನು ಬೆಂಬಲಿಸದಿರಲು ನಿರ್ಧರಿಸಿ ಸವದಿ ನಿವಾಸದ ಎದುರು ಹೈಡ್ರಾಮಾ ನಡೆಸಿದರು.
ಡಿಸಿಎಂ ಲಕ್ಷ್ಮಣ ಸವದಿ ಬೆಂಗಳೂರಿನಿಂದ ಅಥಣಿಗೆ ಬಂದಿಳಿಯುತ್ತಿದ್ದಂತೆ ರವಿವಾರ ಅವರ ನಿವಾಸ ಎದುರು ಜಮಾಯಿಸಿದ ಬೆಂಬಲಿಗರು ಟಿಕೆಟ್‌ಗಾಗಿ ಪಟ್ಟು ಹಿಡಿದು ಕುಳಿತರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಕೂಡ ಸವದಿ ನಿವಾಸದೊಳಗೆ ಇದ್ದರು. ಕುಮಟಳ್ಳಿಗೆ ಟಿಕೆಟ್ ನೀಡಿದ್ದನ್ನು ವಾಪಸ್ಸು ಪಡೆಯಬೇಕು. ಇಲ್ಲದಿದ್ದರೆ ನಾವು ಬೆಂಬಲಿಸುವುದಿಲ್ಲ ಎಂದು ಕಾರ್ಯಕರ್ತರು ಘೋಷಣೆ ಕೂಗಿದರು.
ಶೆಟ್ಟರ ಹಾಗೂ ಸವದಿ ಕಾರ್ಯಕರ್ತರ ಮನವೊಲಿಸಿಲೂ ಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಅನೇಕ ವರ್ಷಗಳಿಂದ ಬಿಜೆಪಿಯ ಭದ್ರ ಬುನಾದಿ ಹಾಕಿರುವ ಕ್ಷೇತ್ರದಲ್ಲಿ ಸವದಿಗೆ ಟಿಕೆಟ್ ನೀಡದಿರುವುದು ಬೇಸರ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸವದಿ ಹಾಗೂ ಶೆಟ್ಟರ ಅವರನ್ನು ಹೊರಗೆ ಬಿಡದೇ ಮನೆ ಎದುರೇ ನಿಲ್ಲಿಸಿದರು. ಮನವೊಲಿಸಿ ಅಲ್ಲಿಂದ ಶೆಟ್ಟರ ಹೊರ ಹೋದರು. ಆದರೆ ಸವದಿ ಅವರನ್ನು ಹೊರಗೆ ಬಿಡದಿದ್ಗದಾಗ, ಕಾರ್ಯಕರ್ತರ ಕೈ ಮುಗಿದ ಸವದಿ, ಬಿಡ್ರಪ್ಪಾ ಸಾಕು. ಪಕ್ಷದ ನಿರ್ಧಾರಕ್ಕೆ ತಲೆ ಬಾಗಬೇಕು ಎಂದು ಹೇಳಿ ಹೊರ ನಡೆದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.