ಮನೆ ಬಾಗಿಲಿಗೆ ತರಕಾರಿ ಮುಟ್ಟಿಸಿ: ಅಂಗಡಿ
Team Udayavani, Apr 16, 2020, 3:52 PM IST
ಬೈಲಹೊಂಗಲ: ರೈತರು ಕಷ್ಟಪಟ್ಟು ಬೆಳೆದ ತರಕಾರಿ ಬೆಳೆಗಳನ್ನು ಜನತೆಯ ಮನೆ ಬಾಗಿಲಿಗೆ ಮುಟ್ಟಿಸಲು ಮುಂದಾಗಬೇಕೆಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.
ಪಟ್ಟಣದ ತಾಪಂ ಸಭಾಭವನದಲ್ಲಿ ಶಾಸಕರ, ಉಪವಿಭಾಗ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರೈತರು ಕೃಷಿ ಚಟುವಟಿಕೆ ಕೈಗೊಳ್ಳುವ ಜೊತೆಗೆ ವ್ಯಾಪಾರೀಕರಣ ಮನೋಭಾವನೆ ರೂಢಿಸಿಕೊಳ್ಳಬೇಕು. ಗ್ರಾಮಮಟ್ಟದಲ್ಲಿ ಮಾರಾಟ ಮಾಡಿ ನಂತರ ಪಟ್ಟಣಕ್ಕೆ ತಂದು ಮನೆ-ಮನೆಗೆ ಮಾರಾಟ ಮಾಡಲು ಮುಂದಾದಾಗ ತಾವು ಆರ್ಥಿಕ ಸಬಲರಾಗಲು ಸಾಧ್ಯ ಎಂದರು. ಶಾಸಕರಾದ ಮಹಾಂತೇಶ ಕೌಜಲಗಿ ಮತ್ತು ಮಹಾಂತೇಶ ದೊಡಗೌಡರ ಮಾತನಾಡಿದರು.
ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಕೈಗೊಂಡ ಕ್ರಮಗಳನ್ನು ವಿವರಿಸಿದರು. ತಾಲೂಕು ಆರೋಗ್ಯ ಅಧಿ ಕಾರಿ ಡಾ| ಎಸ್.ಎಸ್. ಸಿದ್ದನ್ನವರ ಮಾತನಾಡಿದರು. ಮಾಜಿ ಶಾಸಕರಾದ ಡಾ| ವಿಶ್ವನಾಥ ಪಾಟೀಲ, ಜಗದೀಶ ಮೆಟಗುಡ್ಡ, ತಹಶೀಲ್ದಾರ್ ಡಾ| ದೊಡ್ಡಪ್ಪ ಹೂಗಾರ, ಡಿವೈಎಸ್‌ಪಿ ಜಿ.ಎಂ. ಕರುಣಾಕರಶೆಟ್ಟಿ, ಉಪವಿಭಾಗ ಮಟ್ಟದ ಅಧಿಕಾರಿಗಳು ಇದ್ದರು. ಸಮೀರ ಮುಲ್ಲಾ ಸ್ವಾಗತಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.