PSI Exam ಜ. 23ಕ್ಕೆ ಮುಂದೂಡಿಕೆ: ಸಚಿವ ಡಾ| ಪರಮೇಶ್ವರ್
Team Udayavani, Dec 5, 2023, 12:30 AM IST
ಬೆಳಗಾವಿ: ಇದೇ ತಿಂಗಳ 23ರಂದು ನಡೆಸಲು ಉದ್ದೇಶಿಸಿದ್ದ 545 ಪಿಎಸ್ಐ ಹುದ್ದೆಗಳ ಮರು ಪರೀಕ್ಷೆಯನ್ನು ಶಾಸಕರ ಒತ್ತಾಯದ ಮೇರೆಗೆ 2024ರ ಜ. 23ಕ್ಕೆ ಮುಂದೂಡಿರುವುದಾಗಿ ಗೃಹ ಸಚಿವ ಡಾ| ಪರ ಮೇಶ್ವರ್ ಘೋಷಿಸಿದ್ದಾರೆ.
ವಿಧಾನಸಭೆಯಲ್ಲಿ ಸೋಮವಾರ ಶೂನ್ಯವೇಳೆ ಯಲ್ಲಿ ವಿಚಾರ ಪ್ರಸ್ತಾವಿಸಿದ ಬಿಜೆಪಿಯ ಬಸನ ಗೌಡ ಪಾಟೀಲ್ ಯತ್ನಾಳ್, ಪಿಎಸ್ಐ ಹುದ್ದೆಗಳಿಗೆ ಡಿ. 23ರಂದು ಮರುಪರೀಕ್ಷೆ ನಡೆಸುವುದಾಗಿ ವೇಳಾಪಟ್ಟಿ ಪ್ರಕಟಿಸಿದ್ದೀರಿ. ಆದರೆ ಮರು ಪರೀಕ್ಷೆಗೆ ತಯಾರಿ ನಡೆಸಬೇಕಿದೆ, ಸಮಯಾವಕಾಶ ಕೊಡಿ ಎಂದು ಅಭ್ಯರ್ಥಿಗಳು ಕೇಳುತ್ತಿದ್ದಾರೆ. ಹೀಗಾಗಿ ಪರೀಕ್ಷೆ ಮುಂದೂಡಿ ಎಂದು ಆಗ್ರಹಿಸಿದರು.
ಅದಕ್ಕೆ ಉತ್ತರಿಸಿದ ಗೃಹ ಸಚಿವರು, 545 ಪಿಎಸ್ಐ ಹುದ್ದೆಗಳಿಗೆ ಸುಮಾರು 54 ಸಾವಿರ ಅಭ್ಯರ್ಥಿಗಳು ಅರ್ಜಿ ಹಾಕಿದ್ದರು. ಹಿಂದಿನ ಬಾರಿ ಪರೀಕ್ಷೆಯಲ್ಲಿ ಅಕ್ರಮ ನಡೆದಿತ್ತು. ಪರೀಕ್ಷೆ ತಯಾರಿಗೆ ಸಾಕಷ್ಟು ಸಮಯ ಇದೆ. ಹೀಗಾಗಿ ಡಿ. 23ರಂದು ಬೆಂಗಳೂರಿನಲ್ಲಿ ಪರೀಕ್ಷೆ ನಡೆಸುವುದಾಗಿ ತಿಳಿಸಿದರು. ಅದಕ್ಕೆ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಮಣಿದ ಸರಕಾರ ಜ. 23ರಂದು ಪರೀಕ್ಷೆ ನಡೆಸಲು ಸಮ್ಮತಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.